ಮಡಿಕೇರಿ ಫೆ.27 : ಕೊಡಗು ಜಿಲ್ಲಾ ವಕ್ಫ್ ಸಲಹಾ ಸಮಿತಿ ವತಿಯಿಂದ ಮಡಿಕೇರಿಯಲ್ಲಿ ವಕ್ಫ್ ಸಮ್ಮಿಟ್ ಕಾರ್ಯಕ್ರಮ ನಡೆಯಿತು.
ನಗರದ ಖಾಸಗಿ ಹೊಟೇಲ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಶಾಸಕ ಕೆ.ಜಿ.ಬೋಪಯ್ಯ, ಅನ್ವರ್ ನಲಪಾಡಿ ವರದಿ ಜಾರಿಯಾದರೆ ಮುಸ್ಲಿಮರಿಗೆ ಪ್ರಯೋಜನವಾಗುತ್ತದೆ. ಸರ್ವರು ದೇಶದ ಪ್ರಗತಿಗೆ ಕೈಜೋಡಿಸಬೇಕು ಎಂದು ಕರೆ ನೀಡಿದರು.
ಶಾಸಕ ಎಂ.ಪಿ.ಅಪ್ಪಚ್ಚ ರಂಜನ್ ಮಾತನಾಡಿ, ಮುಸ್ಲಿಂ ಸಮುದಾಯದಲ್ಲಿ ಬಾಲ್ಯ ವಿವಾಹ ಪ್ರಕರಣಗಳು ಹೆಚ್ಚಾಗುತ್ತಿರುವುದು ಸರಿಯಲ್ಲ. ಈ ನಿಟ್ಟಿನಲ್ಲಿ ಜಾಗೃತಗೊಳ್ಳಬೇಕು, ಬಾಲಕಿಯರಿಗೆ ಶಿಕ್ಷಣ ಕೊಡಿಸುವ ಮೂಲಕ ಸುರಕ್ಷಿತಗೊಳಿಸಿ ಉತ್ತಮ ಸಮಾಜ ನಿರ್ಮಾಣಕ್ಕೆ ಕೈಜೊಡಿಸುವಂತೆ ಕರೆ ನೀಡಿದರು.
ವಕ್ಫ್ ಸಲಹಾ ಸಮಿತಿ ಜಿಲ್ಲಾಧ್ಯಕ್ಷ ಅಬ್ದುಲ್ಲ ಹಕೀಂ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯ ವಕ್ಫ್ ಮಂಡಳಿ ಅಧ್ಯಕ್ಷ ಎನ್.ಕೆ.ಮುಹಮ್ಮದ್ ಶಾಫಿ ಸಅದಿ, ವಕ್ಫ್ ಸಲಹಾ ಸಮಿತಿ ಅಧಿಕಾರಿ ಮಹಮ್ಮದ್ ಇರ್ಫಾನ್, ಕೊಡಗು ಜಿಲ್ಲಾ ಸಹಾಯಕ ಖಾಝಿಗಳಾದ ಅಬ್ದುಲ್ಲಾ ಫೈಝಿ, ರಾಜ್ಯ ವಕ್ಫ್ ಮಂಡಳಿಯ ಅಪರ ಕಾರ್ಯನಿರ್ವಹಣಾಧಿಕಾರಿ ಖಾದರ್ ಶಾ, ಸಲಹಾ ಸಮಿತಿ ಉಪಾಧ್ಯಕ್ಷ ಮುಹಮ್ಮದ್ ನಾಸೀರ್, ಎಂ.ಜಿ.ನಝೀರ್, ಶಾಫಿ ಸಅದಿ, ಸದಸ್ಯರುಗಳಾದ ಕುಂಞ ಅಬ್ದುಲ್ಲಾ ಸೇರಿದಂತೆ ಮತ್ತಿರರು ಹಾಜರಿದ್ದರು. ಶಾದುಲಿ ಫೈಝಿ ಪ್ರಾರ್ಥನೆ ನೆರವೇರಿಸಿದರು.







