ಮಡಿಕೇರಿ ಫೆ.27 : ಹೆಚ್.ಡಿ.ದೇವೇಗೌಡ ಅಭಿಮಾನಿಗಳ ಸಂಘದಿಂದ ಮಡಿಕೇರಿಯಲ್ಲಿ ಮಾ.18 ಮತ್ತು 19 ರಂದು ರಾಷ್ಟçಮಟ್ಟದ ಪುರುಷರು ಹಾಗೂ ಮಹಿಳೆಯರ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿ ನಡೆಯಲಿದೆ.
ಸಂಘದ ಸಂಚಾಲಕ ಬಲ್ಲಚಂಡ ಗೌತಮ್, ಸಹ ಸಂಚಾಲಕರುಗಳಾದ ಎನ್.ಸಿ.ಸುನಿಲ್, ಇಸಾಕ್ ಖಾನ್, ಪುಷ್ಪಾವತಿ ರಮೇಶ್ ಹಾಗೂ ಮುಸ್ತಫ ಅವರುಗಳು ಪಂದ್ಯಾವಳಿಯ ಕುರಿತು ಮಾಹಿತಿ ನೀಡಿದ್ದಾರೆ.
ಹೆಚ್.ಡಿ.ಡಿ. ಟ್ರೋಫಿ -2023 ಪಂದ್ಯಾವಳಿಯು ಎರಡು ದಿನಗಳ ಕಾಲ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಇದೇ ಪ್ರಥಮ ಬಾರಿಗೆ ಜಿಲ್ಲೆಯಲ್ಲಿ ಮಹಿಳಾ ತಂಡಗಳ ನಡುವೆ ವಾಲಿಬಾಲ್ ಪಂದ್ಯಾವಳಿ ನಡೆಯುತ್ತಿರುವುದು ವಿಶೇಷ.
ಆಹ್ವಾನಿತ ಪುರುಷರ 8 ತಂಡಗಳು ಹಾಗೂ ಮಹಿಳೆಯರ 4 ತಂಡಗಳು ಪಾಲ್ಗೊಳ್ಳಲಿದ್ದು, ಕ್ರೀಡಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಆಯೋಜಕರು ಮನವಿ ಮಾಡಿದ್ದಾರೆ.
::: ಪೋಸ್ಟರ್ ಬಿಡುಗಡೆ :::
ಹೆಚ್.ಡಿ.ಡಿ. ಟ್ರೋಫಿ -2023 ಪಂದ್ಯಾವಳಿಯ ಪೋಸ್ಟರ್ ನ್ನು ಇತ್ತೀಚೆಗೆ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಈ ಸಂದರ್ಭ ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ಎಂ.ಗಣೇಶ್, ಪ್ರಧಾನ ಕಾರ್ಯದರ್ಶಿ ಮೋಹನ್ ಮೌರ್ಯ, ಪಕ್ಷದ ಪ್ರಮುಖರು ಹಾಗೂ ಪಂದ್ಯಾವಳಿಯ ಆಯೋಜಕರು ಉಪಸ್ಥಿತರಿದ್ದರು.
Breaking News
- *ಜಯ ಹೇ ಕರ್ನಾಟಕ ಮಾತೆ ಗೀತೆಗೆ 100 ವರ್ಷ : ಕೊಡಗಿನಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳು*
- *ಕೊಡವ ನ್ಯಾಷನಲ್ ಡೇ ಹಿನ್ನೆಲೆ : ದೇವಟ್ ಪರಂಬುವಿನಲ್ಲಿ ಸಿಎನ್ಸಿ ಪ್ರಾರ್ಥನೆ*
- *ವೀರ ಸೇನಾನಿಗಳಿಗೆ ಅಗೌರವ : ಮಡಿಕೇರಿ ತಾಲ್ಲೂಕು ಒಕ್ಕಲಿಗರ ಸಂಘ ಖಂಡನೆ*
- *ಕೊಡವ ಮಕ್ಕಡ ಕೂಟದಿಂದ ದಾಖಲೆಯ 100ನೇ ಪುಸ್ತಕ “100ನೇ ಮೊಟ್ಟ್” ಬಿಡುಗಡೆ : ಭಾಷೆ, ಜಾತಿಯನ್ನು ಮೀರಿದ ಜ್ಞಾನ ಭಂಡಾರವೇ ಸಾಹಿತ್ಯ : ಬಾಚರಣಿಯಂಡ ಅಪ್ಪಣ್ಣ*
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*