ಮಡಿಕೇರಿ ಫೆ.28 : ದೆಹಲಿಯ ಉಪಮುಖ್ಯಮಂತ್ರಿ ಹಾಗೂ ಶಿಕ್ಷಣ ಸಚಿವ ಮನೀಷ್ ಸಿಸೋದಿಯಾ ಬಂಧನವನ್ನು ಆಮ್ ಆದ್ಮಿ ಪಾರ್ಟಿಯ ಕೊಡಗು ಜಿಲ್ಲಾಧ್ಯಕ್ಷ ಭೋಜಣ್ಣ ಸೋಮಯ್ಯ ಖಂಡಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು ದೇಶಾದ್ಯಂತ ಎಎಪಿ ಬೆಳೆಯುತ್ತಿರುವುದನ್ನು ಸಹಿಸದ ಬಿಜೆಪಿ ಸರ್ಕಾರ ಹತಾಶ ಮನೋಭಾವದಿಂದ ಈ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಆರೋಪಿಸಿದ್ದಾರೆ.
ದೆಹಲಿಯ ಅಬಕಾರಿ ನೀತಿಯಲ್ಲಿ ಯಾವುದೇ ಅವ್ಯವಹಾರವಾಗಿಲ್ಲ. ನೂತನ ಅಬಕಾರಿ ನೀತಿಯನ್ನು ದೆಹಲಿಯಲ್ಲಿ ಇನ್ನೂ ಜಾರಿಗೆ ತಂದಿಲ್ಲ ಹಾಗೂ ಹಲವು ರಾಜ್ಯಗಳಲ್ಲಿ ಇದೇ ನೀತಿ ಜಾರಿಯಲ್ಲಿದೆ ಎಂಬುವುದನ್ನು ನಾವಿಲ್ಲಿ ಗಮನಿಸಬೇಕು. ಸುಮಾರು ಒಂದು ವರ್ಷದಿಂದ ಕೇಂದ್ರ ಸರ್ಕಾರದ ತನಿಖಾಧಿಕಾರಿಗಳು ಸಿಸೋದಿಯಾರವರನ್ನು ಗುರಿಯಾಗಿಸಿಕೊಂಡು ದಾಳಿ ಮಾಡುತ್ತಿದ್ದರೂ, ಆರೋಪವನ್ನು ಸಾಬೀತುಪಡಿಸುವಂತಹ ಯಾವುದೇ ಸಣ್ಣ ಸಾಕ್ಷಿ ಸಿಕ್ಕಿಲ್ಲ. ನಗದು ಅಥವಾ ಯಾವುದೇ ಅಕ್ರಮ ದಾಖಲೆ ಪತ್ತೆ ಹಚ್ಚಲು ಸಾಧ್ಯವಾಗಿಲ್ಲ. ಆಮ್ ಆದ್ಮಿ ಪಾರ್ಟಿಯೊಂದೇ ಬಿಜೆಪಿಯನ್ನು ಎದುರಿಸುವ ಏಕೈಕ ಶಕ್ತಿ ಎಂಬುವುದನ್ನು ಅರಿತಿರುವ ಕೇಂದ್ರ ಸರ್ಕಾರ ನಮ್ಮನ್ನು ರಾಜಕೀಯವಾಗಿ ಎದುರಿಸಲು ಸಾಧ್ಯವಾಗದೇ, ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು ಈ ರೀತಿ ತೊಂದರೆ ನೀಡುತ್ತಿದೆ ಎಂದು ಟೀಕಿಸಿದ್ದಾರೆ.
ಕರ್ನಾಟಕ ಸೇರಿದಂತೆ ದೇಶಾದ್ಯಂತ ಆಮ್ ಆದ್ಮಿ ಪಾರ್ಟಿ ಪ್ರವರ್ಧಮಾನಕ್ಕೆ ಬರುತ್ತಿದೆ. ಜನರು ಎಎಪಿ ಪರವಾಗಿ ಇರುವುದನ್ನು ಸಹಿಸಿಕೊಳ್ಳಲು ಬಿಜೆಪಿಗೆ ಸಾಧ್ಯವಾಗುತ್ತಿಲ್ಲ. ಕರ್ನಾಟಕದ ಚುನಾವಣೆಯ ಪ್ರಚಾರಕ್ಕೆ ಮನೀμï ಸಿಸೋದಿಯಾ ಆಗಮಿಸಿ, ಇಲ್ಲಿನ ಸರ್ಕಾರಿ ಶಾಲೆಗಳ ದುಸ್ಥಿತಿಯನ್ನು ಪ್ರಶ್ನಿಸಬಹುದು ಎಂಬ ಭಯದಿಂದ ಕೇಂದ್ರ ಸರ್ಕಾರವು ಸಿಬಿಐ ಮೂಲಕ ಅವರನ್ನು ಬಂಧಿಸಿದೆ ಎಂದು ಆರೋಪಿಸಿದ್ದಾರೆ.
ದೇಶ ಹಾಗೂ ಜನರಿಗೋಸ್ಕರ ಕೇವಲ ಬಂಧನ ಮಾತ್ರವಲ್ಲ, ಪ್ರಾಣ ನೀಡಲೂ ನಾವುಗಳು ಸಿದ್ಧರಿದ್ದೇವೆ ಎಂದು ಭೋಜಣ್ಣ ಸೋಮಯ್ಯ ತಿಳಿಸಿದ್ದಾರೆ.
ಆಮ್ ಆದ್ಮಿ ಪಾರ್ಟಿಯ ದೆಹಲಿ ಸರ್ಕಾರದ ಶಿಕ್ಷಣ ಕ್ರಾಂತಿಯನ್ನು ಕಂಡು ವಿದೇಶಗಳು ಕೂಡ ಮೆಚ್ಚುಗೆ ವ್ಯಕ್ತಪಡಿಸಿವೆ. ಆದರೆ ಬಿಜೆಪಿಗೆ ಮಾತ್ರ ಇದನ್ನು ಸಹಿಸಲು ಸಾಧ್ಯವಾಗುತ್ತಿಲ್ಲ. ಶಿಕ್ಷಣ ಸಚಿವರಾಗಿ ಮನೀಷ್ ಸಿಸೋದಿಯಾರವರು ಬರೋಬ್ಬರಿ 25,000ಕ್ಕೂ ಹೆಚ್ಚು ಶಾಲಾ ಕೊಠಡಿಗಳನ್ನು ಅತ್ಯಾಧುನಿಕವಾಗಿ ನಿರ್ಮಿಸಿ, ಸುಮಾರು 20 ಲಕ್ಷ ವಿದ್ಯಾರ್ಥಿಗಳ ಭವಿಷ್ಯಕ್ಕೆ ಭದ್ರ ಅಡಿಪಾಯ ಹಾಕಿದ್ದಾರೆ. ಇಂತಹವರ ವಿರುದ್ಧ ಬಿಜೆಪಿಯು ಈ ರೀತಿ ಕೀಳುಮಟ್ಟದ ಕುತಂತ್ರ ಮಾಡುತ್ತಿರುವುದು ಖಂಡನೀಯ. ಗಿಡ ಚಿವುಟಿದಷ್ಟೂ ಚಿಗುರುವಂತೆ ಆಮ್ ಆದ್ಮಿ ಪಾರ್ಟಿ ಕೂಡ ಬಿಜೆಪಿ ತೊಂದರೆ ನೀಡಿದಷ್ಟೂ ಹೆಚ್ಚಿನ ವೇಗದಲ್ಲಿ ಬೆಳೆಯಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
Breaking News
- *ದಕ್ಷಿಣ ಕೊಡಗಿನಲ್ಲಿ ಸಣ್ಣ ಕೈಗಾರಿಕಾ ಪ್ರದೇಶಾಭಿವೃದ್ಧಿ : 50 ಏಕರೆ ಭೂಮಿ ಮಂಜೂರಾತಿಗೆ ಆಪ್ ಮನವಿ*
- *ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜು : 8ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ*
- *ರಾಷ್ಟ್ರೀಯ ಜೂನಿಯರ್ ಹಾಕಿ ತಂಡಕ್ಕೆ ಕೊಡಗಿನ ವಿಶ್ವಜಿತ್ ಹಾಗೂ ಪೂಜಿತ್ ಆಯ್ಕೆ*
- *ರಾಷ್ಟ್ರೀಯ ಜೂನಿಯರ್ ಹಾಕಿ ತಂಡಕ್ಕೆ ದೃಶ್ಯ ಅಚ್ಚಪ್ಪ ಆಯ್ಕೆ*
- *ಹೆಬ್ಬಾಲೆ : ಜ.23 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
- *ಶ್ರೀ ರಾಮ ಜನ್ಮಭೂಮಿ ಸೇವಾ ಸಮಿತಿಯಿಂದ ಮಡಿಕೇರಿಯಲ್ಲಿ ಅನ್ನದಾನ*
- *ಜ.26 ರಂದು ಲೋಕಾಪ೯ಣೆಯಾಗಲಿದೆ ಮತ್ತೆ ವಸಂತ*
- *ಹೆಗ್ಗಳ ಗ್ರಾಮದ ಸರ್ಕಾರಿ ಶಾಲೆಗೆ ಕಂಪ್ಯೂಟರ್ ಕೊಡುಗೆ*
- *ಎನ್.ಯು.ನಾಚಪ್ಪ ವಿರುದ್ಧ ಪ್ರಕರಣ : ಮಡಿಕೇರಿ ಕೊಡವ ಸಮಾಜ ಖಂಡನೆ*
- *ವಿರಕ್ತ ಮಠದ ಶ್ರೀ ಬಸವಪ್ರಭು ಸ್ವಾಮೀಜಿಗೆ ಪಿ.ಹೆಚ್.ಡಿ ಪದವಿ*