ಮಡಿಕೇರಿ ಫೆ.28 : ಕಳೆದ ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ಮಡಿಕೇರಿ ವಿಧಾನಸಭಾ ಕ್ಷೇತ್ರ ವಾಪ್ತಿಯಲ್ಲಿ 20 ಮತ್ತು ವಿರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ 45 ಒಟ್ಟು 65 ಮತಗಟ್ಟೆಗಳಲ್ಲಿ ಶೇ.65 ಕ್ಕಿಂತ ಕಡಿಮೆ ಮತದಾನವಾಗಿದ್ದು, ಈ ಹಿನ್ನೆಲೆ ಈ 65 ಮತಗಟ್ಟೆಗಳಲ್ಲಿ ಮತದಾನ ಕಡಿಮೆಯಾಗಲು ಕಾರಣವೇನು ಮತ್ತು ಮತದಾನ ಹೆಚ್ಚಳಕ್ಕೆ ಯಾವ ರೀತಿಯ ಕ್ರಮವಹಿಸಬಹುದು ಎಂಬ ಬಗ್ಗೆ ಮಾರ್ಚ್, 4 ರೊಳಗೆ ನಿಖರ ಮಾಹಿತಿ ಒದಗಿಸುವಂತೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಸೂಚಿಸಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ಮಟ್ಟದ ಸ್ವೀಪ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಡಿಕೇರಿ ನಗರಸಭೆ, ವಿರಾಜಪೇಟೆ ಪಟ್ಟಣ ಪಂಚಾಯಿತಿ, ಕುಶಾಲನಗರ ಹಾಗೂ ಜಿಲ್ಲೆಯ ಗಡಿ ಪ್ರದೇಶದಲ್ಲಿ ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕಡಿಮೆ ಮತದಾನವಾಗಿದೆ. ಆದ್ದರಿಂದ ಕಡಿಮೆ ಮತದಾನವಾಗಲು ಕಾರಣ ಮತ್ತು ಪ್ರಸಕ್ತ ವಿಧಾನಸಭಾ ಚುನಾವಣೆಯಲ್ಲಿ ಹೆಚ್ಚಿನ ಮತದಾನವಾಗಲು ಯಾವ ರೀತಿ ಕ್ರಮವಹಿಸಬಹುದು ಎಂಬ ಬಗ್ಗೆ ಸ್ಪಷ್ಟ ಮಾಹಿತಿ ಒದಗಿಸುವಂತೆ ಜಿಲ್ಲಾಧಿಕಾರಿ ಅವರು ಹೇಳಿದರು.
ಕಳೆದ ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಸರಾಸರಿ ಶೇ.75 ರಷ್ಟು ಮತದಾನವಾಗಿದೆ. ಹಾಗೆಯೇ ರಾಜ್ಯದ ಸರಾಸರಿ ಶೇ.72 ರಷ್ಟು ಮತದಾನವಾಗಿತ್ತು ಎಂದು ಡಾ.ಬಿ.ಸಿ.ಸತೀಶ ಅವರು ತಿಳಿಸಿದರು.
ಮತದಾರರ ಪಟ್ಟಿ ಪರಿಷ್ಕರಣೆ ಸಂದರ್ಭದಲ್ಲಿ ಎರಡು ಕಡೆ ಹೆಸರು ಇದ್ದವರು, ವಲಸೆ ಹೋಗಿರುವವರು ಮತ್ತಿತರ ಕಾರಣದಿಂದ ಮತದಾರರ ಪಟ್ಟಿಯಿಂದ 18 ಸಾವಿರ ಜನರ ಹೆಸರು ತೆಗೆಯಲಾಗಿದೆ ಎಂದು ಜಿಲ್ಲಾಧಿಕಾರಿ ಅವರು ಮಾಹಿತಿ ನೀಡಿದರು.
‘ಜಿಲ್ಲೆಯಲ್ಲಿ ಚಿತ್ರಕಲಾ ಶಿಬಿರ ಏರ್ಪಡಿಸುವುದು, ಗಾಳಿಪಟ ಹಾಗೂ ಬಲೂನ್ ಹಾರಿಸುವುದು, ರಂಗೋಲಿ ಸ್ಪರ್ಧೆ, ಗೀತಾ ಗಾಯನ, ಮತ್ತಿತರ ಕಾರ್ಯಕ್ರಮಗಳನ್ನು ಏರ್ಪಡಿಸಬೇಕು. ಜಿಲ್ಲೆಯಲ್ಲಿನ ಎಲ್ಲಾ ಹೆದ್ದಾರಿ ಫಲಕಗಳಲ್ಲಿ ಮತದಾನದ ಮಹತ್ವ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಜಿಲ್ಲೆಯ ಕಲೆ, ಸೇನೆ, ಕ್ರೀಡೆ, ಕೃಷಿ, ತೋಟಗಾರಿಕೆ ಹೀಗೆ ಹಲವು ಸ್ಥಳೀಯ ಸಂಸ್ಕøತಿಯನ್ನು ಬಿಂಬಿಸುವ 20 ಕ್ಕೂ ಹೆಚ್ಚು ಮಾದರಿಯ ಹೆದ್ದಾರಿ ಫಲಕಗಳನ್ನು ಅಳವಡಿಸುವಂತಾಗಬೇಕು ಎಂದು ಜಿಲ್ಲಾಧಿಕಾರಿ ಅವರು ಸಲಹೆ ಮಾಡಿದರು.’
ಜಿ.ಪಂ.ಸಿಇಒ ಹಾಗೂ ಸ್ವೀಪ್ ಸಮಿತಿ ಅಧ್ಯಕ್ಷರಾದ ಡಾ.ಎಸ್.ಆಕಾಶ್ ಅವರು ಮಾತನಾಡಿ ಶೇ.65 ಕ್ಕಿಂತ ಕಡಿಮೆ ಮತದಾನವಾಗಿರುವ ಮತಗಟ್ಟೆಗಳ ವ್ಯಾಪ್ತಿಯಲ್ಲಿ ಅಧಿಕಾರಿಗಳ ತಂಡವನ್ನು ನಿಯೋಜಿಸಲಾಗುವುದು. ಆ ನಿಟ್ಟಿನಲ್ಲಿ ತಮ್ಮ ತಮ್ಮ ವ್ಯಾಪ್ತಿಯಲ್ಲಿ ಬಿಎಲ್‍ಒಗಳ ಮೂಲಕ ಮತದಾನ ಕಡಿಮೆಯಾಗಲು ಕಾರಣವೇನು ಎಂಬ ನಿಖರ ಮಾಹಿತಿ ನೀಡುವಂತೆ ಸೂಚಿಸಿದರು.
ನಗರ, ಪಟ್ಟಣ ಪ್ರದೇಶಗಳು, ಹಾಡಿಗಳಲ್ಲಿ ಪ್ರತೀ ಭಾನುವಾರ ಮತದಾನ ಹೆಚ್ಚಳ ಸಂಬಂಧ ವಿವಿಧ ಚಟುವಟಿಕೆಗಳನ್ನು ಕೈಗೊಳ್ಳಬೇಕಿದೆ. ಯುವ ಮತದಾರರನ್ನು ತೊಡಗಿಸಿಕೊಂಡು ಬೇರೆ ಬೇರೆ ಕಾರ್ಯಕ್ರಮ ಆಯೋಜಿಸಬೇಕಿದೆ ಎಂದರು.
ಜಿ.ಪಂ.ಮುಖ್ಯ ಯೋಜನಾಧಿಕಾರಿ ರಾಜ್‍ಗೋಪಾಲ್, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಉಪ ನಿರ್ದೇಶಕರಾದ ರಂಗಧಾಮಯ್ಯ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಪುಟ್ಟರಾಜು, ಐಟಿಡಿಪಿ ಇಲಾಖಾ ಅಧಿಕಾರಿ ಹೊನ್ನೇಗೌಡ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶೇಖರ್, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ಎನ್.ಮಂಜುನಾಥ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್, ಕೈಗಾರಿಕಾ ಇಲಾಖೆಯ ಉಪ ನಿರ್ದೇಶಕರಾದ ಸಿ.ಎನ್.ರಘು, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಬಸಪ್ಪ, ನಗರಸಭೆ ಪೌರಾಯುಕ್ತರಾದ ವಿಜಯ, ವಿರಾಜಪೇಟೆ ತಾ.ಪಂ.ಇಒ ಅಪ್ಪಣ್ಣ, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿ.ಟಿ.ವಿಸ್ಮಯಿ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಸದಾಶಿವ ಪಲ್ಲೇದ್, ಸ್ವೀಪ್ ಸಮಿತಿಯ ನವೀನ್, ಇತರರು ಇದ್ದರು.
Breaking News
- *ರಾಜಾಸೀಟು ಫಲಪುಷ್ಪ ಪ್ರದರ್ಶನದಲ್ಲಿ 22 ಅಡಿ ಎತ್ತರದ ಶ್ರೀ ಓಂಕಾರೇಶ್ವರ ದೇವಸ್ಥಾನದ ಕಲಾಕೃತಿ ಮತ್ತು 20 ಸಾವಿರ ವಿವಿಧ ಜಾತಿಯ ಹೂವುಗಳ ಆಕರ್ಷಣೆ*
- *ರಾಷ್ಟ್ರೀಯ ಹಾಕಿ ತಂಡಕ್ಕೆ ಪಿ.ಯು.ತನುಷ್ ಆಯ್ಕೆ*
- *ಹೆಬ್ಬಾಲೆ ಸರ್ಕಾರಿ ಶಾಲೆಯಲ್ಲಿ ಗಮನ ಸೆಳೆದ ಇಂಗ್ಲಿಷ್ ಭಾಷಾ ಮೇಳ*
- *”ಶ್ರೀಮತಿ ವಿಜಯ ವಿಷ್ಣು ಭಟ್ ದತ್ತಿ ಪ್ರಶಸ್ತಿ”ಗೆ ಕೃತಿಗಳ ಆಹ್ವಾನ*
- *ಮಾವಿನಹಳ್ಳ ಹಾಡಿ ಮತ್ತು ಕಟ್ಟೆ ಹಾಡಿಯ ಅರಣ್ಯ ಹಕ್ಕು ಗ್ರಾಮಸಭೆ*
- *ಬಾಳೆಲೆ : ಮಣ್ಣು ಪರೀಕ್ಷೆ ಮತ್ತು ಸಸ್ಯ ಪೋಷಕಾಂಶಗಳ ನಿರ್ವಹಣೆ ಕುರಿತು ಮಾಹಿತಿ ಕಾರ್ಯಕ್ರಮ*
- *ಜ.26 ರಂದು ಗಣರಾಜ್ಯೋತ್ಸವ ದಿನಾಚರಣೆ*
- *ದಕ್ಷಿಣ ಕೊಡಗಿನಲ್ಲಿ ಸಣ್ಣ ಕೈಗಾರಿಕಾ ಪ್ರದೇಶಾಭಿವೃದ್ಧಿ : 50 ಏಕರೆ ಭೂಮಿ ಮಂಜೂರಾತಿಗೆ ಆಪ್ ಮನವಿ*
- *ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜು : 8ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ*
- *ರಾಷ್ಟ್ರೀಯ ಜೂನಿಯರ್ ಹಾಕಿ ತಂಡಕ್ಕೆ ಕೊಡಗಿನ ವಿಶ್ವಜಿತ್ ಹಾಗೂ ಪೂಜಿತ್ ಆಯ್ಕೆ*