ಮಡಿಕೇರಿ ಫೆ.28 : ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ರಾಜ್ಯ ಉಸ್ತುವಾರಿ ರಣ್‌ದೀಪ್ ಸಿಂಗ್ ಸುರ್ಜೇವಾಲ ಅವರು ಕೊಡಗು ಜಿಲ್ಲೆಗೆ ಪ್ರಥಮ ಬಾರಿಗೆ ಭೇಟಿ ನೀಡುತ್ತಿದ್ದಾರೆ.
ಮಾ.2 ರಂದು ಅಪರಾಹ್ನ 1.30 ಗಂಟೆಗೆ ಮಡಿಕೇರಿಯ ಅಂಬೇಡ್ಕರ್ ಭವನದಲ್ಲಿ ಕೆಪಿಸಿಸಿ ಪ್ರಮುಖರು, ಡಿಸಿಸಿ ಪದಾಧಿಕಾರಿಗಳು, ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳು, ಡಿಸಿಸಿ ಮುಂಚೂಣಿ ಘಟಕದ ಪ್ರಮುಖರು, ಪದಾಧಿಕಾರಿಗಳು, ವಲಯ ಕಾಂಗ್ರೆಸ್ ಅಧ್ಯಕ್ಷರು, ಬೂತ್ ಅಧ್ಯಕ್ಷರು, ಪಕ್ಷದ ಹಾಲಿ, ಮಾಜಿ ಜನಪ್ರತಿನಿಧಿಗಳು ಹಾಗೂ ಪಕ್ಷದ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ.
ಇಂದು ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆಯ ನಂತರ ಪಕ್ಷದ ಜಿಲ್ಲಾ ವಕ್ತಾರ ಎ.ಎಸ್.ಟಾಟು ಮೊಣ್ಣಪ್ಪ ಅವರು ರಣ್‌ದೀಪ್ ಸಿಂಗ್ ಸುರ್ಜೇವಾಲ ಭೇಟಿ ಕುರಿತು ಮಾಹಿತಿ ನೀಡಿದರು. ಕಾಂಗ್ರೆಸ್ ನ ಮೊದಲ ಗ್ಯಾರಂಟಿ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ಜನರಿಗೆ ನೆರವು ನೀಡುವ ಉದ್ದೇಶದಿಂದ ಗೃಹಜ್ಯೋತಿ ಯೋಜನೆ ಮೂಲಕ ಪ್ರತಿ ಮನೆಗೆ 200 ಯೂನಿಟ್ ಉಚಿತ ಪೂರೈಕೆ, 2ನೇ ಗ್ಯಾರಂಟಿ ಪ್ರತಿ ಮನೆಯೊಡತಿಗೆ 2 ಸಾವಿರ ರೂ. ಪ್ರೋತ್ಸಾಹ ಧನ ನೀಡಲು ಗೃಹಲಕ್ಷ್ಮಿ ಯೋಜನೆ ಜಾರಿ ಮತ್ತು 3ನೇ ಗ್ಯಾರಂಟಿಯಾಗಿ ಅನ್ನಭಾಗ್ಯ ಯೋಜನೆ ಮೂಲಕ ಬಿಪಿಎಲ್ ಕಾರ್ಡ್ ದಾರರಿಗೆ 10 ಕೆ.ಜಿ ಅಕ್ಕಿ ಉಚಿತವಾಗಿ ನೀಡುವ ಗ್ಯಾರಂಟಿ ಕಾರ್ಡ್ ನ್ನು ರಣ್ ದೀಪ್ ಸಿಂಗ್ ಸುರ್ಜೇವಾಲ ಬಿಡುಗಡೆ ಮಾಡಲಿದ್ದಾರೆ.
ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವ ನಾರಾಯಣ್, ಎಐಸಿಸಿ ಕಾರ್ಯದರ್ಶಿ, ಕೊಡಗು ಉಸ್ತುವಾರಿ ಹಾಗೂ ಕೇರಳ ಶಾಸಕ ರೋಜಿ ಜಾನ್ ಉಪಸ್ಥಿತರಿರುವರು ಎಂದು ಟಾಟು ಮೊಣ್ಣಪ್ಪ ತಿಳಿಸಿದರು.
Breaking News
- *ಜ.26 ರಂದು ಕೂಡಿಗೆಯಲ್ಲಿ ಮಾನವ ಸರಪಳಿ ಹಾಗೂ ಸೌಹಾರ್ದ ಸಮ್ಮೇಳನ*
- *ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಮೂರ್ನಾಡು ಭಾರತೀಯ ನೃತ್ಯಕಲಾ ಶಾಲೆಯ ವಿದ್ಯಾರ್ಥಿಗಳ ಸಾಧನೆ*
- *ಕಟ್ಟೆಮಾಡು ಪ್ರಕರಣ : ಉಸ್ತುವಾರಿ ಸಚಿವರು, ಶಾಸಕರುಗಳು ತಮ್ಮ ಜವಾಬ್ದಾರಿಯನ್ನು ಪ್ರದರ್ಶಿಸಲಿ*
- *ವಸತಿ ಸಚಿವರನ್ನು ಭೇಟಿ ಮಾಡಿದ ಅಲ್ಪಸಂಖ್ಯಾತ ಮುಖಂಡರು : ಮೂಲ ಸೌಕರ್ಯಗಳ ಕುರಿತು ಚರ್ಚೆ*
- *ಎಂ.ಎಂ.ಸುಪ್ರಿತಾಗೆ ಚಿನ್ನದ ಪದಕ*
- *ಜ.25 ರಂದು ಕಸಾಪ ದತ್ತಿ ಉಪನ್ಯಾಸ ಕಾರ್ಯಕ್ರಮ*
- *ಸುಂಟಿಕೊಪ್ಪ : ಸಾರ್ವಜನಿಕರು ಆರೋಗ್ಯ ಶಿಬಿರದ ಸದುಪಯೋಗ ಪಡೆದುಕೊಳ್ಳಿ : ಎ.ಲೋಕೇಶ್ ಕುಮಾರ್*
- *ಮಡಿಕೇರಿಯಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಜನ್ಮದಿನ ಆಚರಣೆ*
- *ಮಡಿಕೇರಿಯಲ್ಲಿ ಪರಾಕ್ರಮ್ ದಿವಸ್ ಆಚರಣೆ : ಪರೀಕ್ಷಾ ಪೇ ಚರ್ಚಾ 9ನೇ ಆವೃತ್ತಿ*
- *ಕಳೆದು ಹೋಗಿದೆ*