ನಾಪೋಕ್ಲು ಮಾ.1 : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕೊಡಗು, ಸ್ಥಳೀಯ ಸಂಸ್ಥೆ ಸಂಪಾಜೆ ಸಂಯುಕ್ತಾಶ್ರಯದಲ್ಲಿ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ , ರಕ್ತನಿಧಿ ಕೇಂದ್ರ ಮಡಿಕೇರಿ, ರಾಷ್ಟ್ರೀಯ ಸ್ವಯಂಸೇವಾ ಯೋಜನೆ, ಕೆ.ಪಿ.ಎಸ್ ಪ್ರೌಢಶಾಲೆ ನಾಪೋಕ್ಲು, ಶ್ರೀ ಮಕ್ಕಿ ಶಾಸ್ತಾವು ಸೇವಾ ಕಾರ್ಯಪಡೆ ಬೇತು, ನಾಪೋಕ್ಲು ಶೌರ್ಯ ವಿಪತ್ತು ನಿರ್ವಹಣಾ ಘಟಕ ಸಹಯೋಗದೊಂದಿಗೆ ಮಾ.6ರಂದು ರಕ್ತದಾನ ಶಿಬಿರ ನಡೆಯಲಿದೆ.
ಅಂದು ಬೆಳಗ್ಗೆ 10 ರಿಂದ ಮದ್ಯಾಹ್ನ 1ಗಂಟೆಯವರೆಗೆ ನಾಪೋಕ್ಲು ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಶಿಬಿರ ನಡೆಯಲಿದ್ದು, ರಕ್ತದಾನಿಗಳು ಮೊ.8197729150,9900474485 ಸಂಖ್ಯೆಗೆ ಕರೆಮಾಡಿ ಅಥವಾ ವಾಡ್ಸಪ್ ಮೂಲಕ ನೊಂದಣಿ ಮಾಡಿಕೊಳ್ಳಬಹುದು.
ವರದಿ :ಝಕರಿಯ ನಾಪೋಕ್ಲು