ಮಡಿಕೇರಿ ಮಾ.1 : ವಿಧಾನಸಭಾ ಚುನಾವಣೆಯ ಹಿನ್ನೆಲೆ ಕೆಪಿಸಿಸಿ ಘೋಷಿಸಿರುವ ವಿವಿಧ ಭರವಸೆಗಳ “ಕಾಂಗ್ರೆಸ್ ಗ್ಯಾರಂಟಿ ಕಾರ್ಡ್” ನ್ನು ಮನೆ ಮನೆಗೆ ತಲುಪಿಸುವ ಅಭಿಯಾನ ಮಾ.2 ರಿಂದ ಜಿಲ್ಲೆಯಾದ್ಯಂತ ಆರಂಭಗೊಳ್ಳಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ರಾಜ್ಯ ಉಸ್ತುವಾರಿ ರಣ್ದೀಪ್ ಸಿಂಗ್ ಸುರ್ಜೇವಾಲ ಗುರುವಾರ ಮಡಿಕೇರಿಯ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ ಎಂದರು.
ಕಾಂಗ್ರೆಸ್ ನ ಮೊದಲ ಗ್ಯಾರಂಟಿ ಕಾರ್ಡ್ “ಗೃಹಜ್ಯೋತಿ” ಯೋಜನೆ ಮೂಲಕ ಪ್ರತಿ ಮನೆಗೆ 200 ಯೂನಿಟ್ ಉಚಿತ ಪೂರೈಕೆ, 2ನೇ ಗ್ಯಾರಂಟಿ ಪ್ರತಿ ಮನೆಯೊಡತಿಗೆ 2 ಸಾವಿರ ರೂ. ಪ್ರೋತ್ಸಾಹ ಧನ ನೀಡಲು “ಗೃಹಲಕ್ಷ್ಮಿ” ಯೋಜನೆ ಜಾರಿ ಮತ್ತು 3ನೇ ಗ್ಯಾರಂಟಿಯಾಗಿ ಅನ್ನಭಾಗ್ಯ ಯೋಜನೆ ಮೂಲಕ ಬಿಪಿಎಲ್ ಕಾರ್ಡ್ದಾರರಿಗೆ 10 ಕೆ.ಜಿ.ಅಕ್ಕಿ ಉಚಿತವಾಗಿ ನೀಡುವ ಭರವಸೆಯ ಕಾರ್ಡ್ನ್ನು ಮನೆ ಮನೆಗೆ ತಲುಪಿಸಲಾಗುವುದು. ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವ ನಾರಾಯಣ್, ಎಐಸಿಸಿ ಕಾರ್ಯದರ್ಶಿ, ಕೊಡಗು ಉಸ್ತುವಾರಿ ಹಾಗೂ ಕೇರಳ ಶಾಸಕ ರೋಜಿ ಜಾನ್ ಮತ್ತಿತರ ಪ್ರಮುಖರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಿದ್ದಾರೆ ಎಂದು ತಿಳಿಸಿದರು.
ಕೊಡಗು ಜಿಲ್ಲೆಗೆ ಸಂಬಂಧಿಸಿದಂತೆ ಪ್ರತ್ಯೇಕ ಪ್ರಣಾಳಿಕೆಯನ್ನು ಸಧ್ಯದಲ್ಲಿಯೇ ಹೊರ ತರಲಾಗುವುದು ಎಂದರು.
ಪ್ರಚಾರ ಸಮಿತಿಯ ಜಿಲ್ಲಾಧ್ಯಕ್ಷ ಟಿ.ಪಿ.ರಮೇಶ್ ಮಾತನಾಡಿ ಮಾರ್ಚ್ ಎರಡನೇ ವಾರದಿಂದ ಜಿಲ್ಲೆಯಾದ್ಯಂತ “ಕಾಂಗ್ರೆಸ್ ಪಂಚ ಅಂಶಗಳ” ಪರ ಪ್ರಚಾರ ಕಾರ್ಯ ಕೈಗೊಳ್ಳಲಾಗುವುದು. ಅನ್ನ, ಅಕ್ಷರ, ಆರೋಗ್ಯ, ಆಶ್ರಯ ಮತ್ತು ಅಭಿವೃದ್ಧಿ ಪ್ರಮುಖಾಂಶಗಳಾಗಿದ್ದು, ಇದನ್ನು ಜನರಿಗೆ ಮನದಟ್ಟು ಮಾಡಿಕೊಡಲಾಗುವುದು. ಬಿಜೆಪಿ ಸರ್ಕಾರದ ಭ್ರಷ್ಟ ಆಡಳಿತ ಮತ್ತು ಜನವಿರೋಧಿ ನಿಲುವುಗಳನ್ನು ತಿಳಿಸಲಾಗುವುದು ಎಂದರು.
ಜನಪರ ಕಾರ್ಯಕ್ರಮಗಳ ಮೂಲಕ ಕಾಂಗ್ರೆಸ್ ಪಕ್ಷ ಮತ್ತೆ ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೊಲ್ಯದ ಗಿರೀಶ್, ವಕ್ತಾರ ಮುನೀರ್ ಅಹಮ್ಮದ್, ತೆನ್ನಿರ ಮೈನಾ ಹಾಗೂ ಸಾಮಾಜಿಕ ಜಾಲತಾಣದ ಜಿಲ್ಲಾಧ್ಯಕ್ಷ ಸೂರಜ್ ಹೊಸೂರು ಉಪಸ್ಥಿತರಿದ್ದರು.
Breaking News
- *ಭಾಗಮಂಡಲ ಫ್ಲೈ ಓವರ್ – ಫ್ಲಾಶ್ ಬ್ಯಾಕ್*
- *ಅರ್ಚಕರ ಮೇಲೆ ನಡೆದ ಹಲ್ಲೆ ಪ್ರಕರಣ : ಸಹಕರಿಸಿದ ಆರೋಪಿಗಳು ಹಾಗೂ ವಾಹನಗಳು ವಶ : ಆರೋಪಿಗಳಿಗೆ ಸಹಾಯ ಮಾಡುತ್ತಿರುವವರ ಕುರಿತು ಮಾಹಿತಿ ಒದಗಿಸಲು ಎಸ್ಪಿ ಮನವಿ*
- *ಮುಖ್ಯಮಂತ್ರಿಗಳಿಗೆ ಕೊಡಗು ಎಸ್ಡಿಪಿಐಯಿಂದ ಪಂಚ ಪ್ರಶ್ನೆ*
- *ಜೀವ ಬೆದರಿಕೆ ಇದೆ ಎಂದು ಆರೋಪಿಸಿ ದೂರು ನೀಡಿದ ಎನ್.ಯು.ನಾಚಪ್ಪ*
- *ಮಡಿಕೇರಿಯಲ್ಲಿ ಹುತಾತ್ಮ ದಿನಾಚರಣೆ : ಗಾಂಧೀಜಿ ತತ್ವ, ಆದರ್ಶ ಮೈಗೂಡಿಸಿಕೊಳ್ಳಿ : ಜಿಲ್ಲಾಧಿಕಾರಿ ವೆಂಕಟ್ ರಾಜಾ ಕರೆ*
- *ಕೊಡಗು : ಫೆ.13 ರವರೆಗೆ “ಸ್ಪರ್ಶ್ ಕುಷ್ಠರೋಗ ಜಾಗೃತಿ ಅಭಿಯಾನ”*
- *ಒಳಮೀಸಲಾತಿ ಶೀಘ್ರ ಜಾರಿಗೆ ತರಲು ದಲಿತ ಸಂಘರ್ಷ ಸಮಿತಿ ಆಗ್ರಹ*
- *ಮೂರ್ನಾಡು ಗಜಾನನ ಯುವಕ ಸಂಘ ಖಂಡನೆ*
- *ಅಮಾಯಕರ ಮೇಲಿನ ಹಲ್ಲೆ ಖಂಡನೀಯ : ಮೂರ್ನಾಡು ಆಪ್ತಮಿತ್ರ ಬಳಗ ಅಸಮಾಧಾನ*
- *ವಿರಾಜಪೇಟೆ ಕೊಡವ ಪೊಮ್ಮಕ್ಕಡ ಒಕ್ಕೂಟದಿಂದ ಸಂಭ್ರಮದ ಪುತ್ತರಿ ಒತ್ತೋರ್ಮೆ ಕೂಟ*