ಮಡಿಕೇರಿ ಮಾ.1 : ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಅಭಿವೃದ್ಧಿ ಕಾರ್ಯಕ್ರಮಗಳು ಜನಸಾಮಾನ್ಯರಿಗೆ ತಲುಪಲು ಕಾರ್ಯಕರ್ತರೇ ಸಂಪರ್ಕ ಸೇತುವೆಯಾಗಿದ್ದು, ಮುಂದಿನ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಸರ್ಕಾರ ರಚಿಸಲಿದೆ ಎಂದು ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ವಿಶ್ವಾಸ ವ್ಯಕ್ತಪಡಿಸಿದರು.
ಸೋಮವಾರಪೇಟೆ ತಾಲ್ಲೂಕು ಬಿಜೆಪಿ ಕಾರ್ಯಕರ್ತರ ಬೃಹತ್ ಸಮ್ಮೀಲನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾರ್ಯಕರ್ತರೇ ಪಕ್ಷದ ಬೆನ್ನೆಲುಬು, ಕಾರ್ಯಕರ್ತರ ಸಹಕಾರದಿಂದ ಅಭಿವೃದ್ಧಿ ಕಾರ್ಯಗಳು ನಡೆಸಲು ಸಾಧ್ಯವಾಗುತ್ತಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಅಭಿವೃದ್ಧಿ ಕಾರ್ಯಕ್ರಮಗಳು ಜನಸಾಮಾನ್ಯರಿಗೆ ತಲುಪಲು ಕಾರ್ಯಕರ್ತರೇ ಸಂಪರ್ಕ ಸೇತುವೆಯಾಗಿದ್ದು, ಕಾರ್ಯಕರ್ತರ ಶ್ರಮದಿಂದ ಗೆಲುವು ಸಾಧ್ಯ ಎಂದು ಕೃತಜ್ಞತೆ ಸಲ್ಲಿಸಿದರು.
ಕಳೆದ ಐದು ವರ್ಷಗಳಲ್ಲಿ ಮಡಿಕೇರಿ ಕ್ಷೇತ್ರದಲ್ಲಿ 1,800 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗಿದೆ. ಪ್ರಾಕೃತಿಕ ವಿಕೋಪ ಹಾಗೂ ಕೋವಿಡ್ ಸಂಕಷ್ಟದಲ್ಲಿ ಜನತೆಯ ಹಿತದೃಷ್ಟಿಯಿಂದ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿಭಾಯಿಸಲಾಗಿದೆ ಎಂದರು.
ಜಿಲ್ಲೆಯಲ್ಲಿ ಈಗಾಗಲೇ ಸುಮಾರು 5 ಲಕ್ಷ ಜನರಿಗೆ 11 ಲಕ್ಷ ಡೋಸ್ ಕೋವಿಡ್ ಲಸಿಕೆ ನೀಡಲಾಗಿದೆ. 47 ಸಾವಿರ ಮಂದಿ ರೈತರಿಗೆ 138 ಕೋಟಿ ಬೆಳೆ ಹಾನಿ ಪರಿಹಾರ ವಿತರಿಸಲಾಗಿದೆ ಎಂದರು.
ಈ ಸಂದರ್ಭ ವಿಧಾನ ಪರಿಷತ್ ಸದಸ್ಯ ಸುಜಾಕುಶಾಲಪ್ಪ, ಚುನಾವಣೆ ಉಸ್ತುವಾರಿ ತಿಮ್ಮಪ್ಪ ಶೆಟ್ಟಿ, ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ಜಿ. ಮೇದಪ್ಪ, ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಬಿನ್ ದೇವಯ್ಯ, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ದರ್ಶನ್, ತಾಲೂಕು ಬಿಜೆಪಿ ಅಧ್ಯಕ್ಷ ಮನುಕುಮಾರ್ ರೈ, ಜಿ.ಪಂ ಮಾಜಿ ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್ ಹಾಗೂ ಬಿಜೆಪಿ ಪ್ರಮುಖರು ಹಾಗೂ ಕಾರ್ಯಕರ್ತರು ಹಾಜರಿದ್ದರು.