ಸೋಮವಾರಪೇಟೆ ಮಾ.1 : 7ನೇ ವೇತನ ಆಯೋಗ ವರದಿ ಜಾರಿ ಸೇರಿ ವಿವಿಧ ಬೇಡಿಕೆಗಳನ್ನು ಸರ್ಕಾರ ಈಡೇರಿಸುವವಂತೆ ಆಗ್ರಹಿಸಿ ರಾಜ್ಯ ಸರ್ಕಾರಿ ನೌಕರರ ಸಂಘ ಕರೆ ನೀಡಿದ್ದ ಮುಷ್ಕರಕ್ಕೆ ಸೋಮವಾರಪೇಟೆ ಸರ್ಕಾರಿ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸರ್ಕಾರಿ ನೌಕರರ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದರು. ಕರ್ತವ್ಯಕ್ಕೆ ಹಾಜರಾಗದ ಹಿನ್ನಲೆಯಲ್ಲಿ ಆಡಳಿತ ಸೌಧ ಕಚೇರಿಗೆ ಬೀಗ ಹಾಕಲಾಗಿತ್ತು. ತಹಸೀಲ್ದಾರ್ ಹೊರತುಪಡಿಸಿ, ನೌಕಕರರು ಇಲ್ಲದೆ ಬಿಕೋ ಎನ್ನುತ್ತಿತ್ತು. ಇತರ ಕಚೇರಿಗಳಲ್ಲೂ ಕೆಲಸಗಳು ನಡೆಯಲಿಲ್ಲ.









