ಮಡಿಕೇರಿ ಮಾ.2 : ಮೇಘಾಲಯ ಮತ್ತು ತ್ರಿಪುರ ರಾಜ್ಯದಲ್ಲಿ ಬಿಜೆಪಿ ಹಣ ಹಾಗೂ ತೋಳ್ಬಲದಿಂದ ಗೆಲುವು ಸಾಧಿಸಿದೆ ಎಂದು ರಾಷ್ಟ್ರೀಯ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ರಾಜ್ಯ ಉಸ್ತುವಾರಿ ರಣ್‌ದೀಪ್ ಸಿಂಗ್ ಸುರ್ಜೇವಾಲ ಆರೋಪಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಹಣ, ತೋಳ್ಬಲದಿಂದ ಬಲದಿಂದ ಬಿಜೆಪಿ ಆ ರಾಜ್ಯಗಳಲ್ಲಿ ಗೆಲವು ಸಾಧಿಸಿದೆ. ಆದರೆ ವಿವಿಧ ರಾಜ್ಯಗಳಲ್ಲಿ ನಡೆದ ಉಪಚುನಾವಣೆಗಳಲ್ಲಿ ಬಿಜೆಪಿ ಹೀನಾಯ ಸೋಲು ಕಂಡಿದೆ. ಇದು ಕಾಂಗ್ರೆಸ್ ಪಾಲಿಗೆ ಆಶಾದಾಯಕವಾಗಿದೆ. ಕರ್ನಾಟಕದಲ್ಲಿ ಸ್ಪಷ್ಟವಾಗಿ ಕಾಂಗ್ರೆಸ್ ಪರ ಅಲೆಯಿದ್ದು, ದೇಶದಲ್ಲಿ ಮೋದಿ ಆಡಳಿತ ಅಂತ್ಯಕ್ಕೆ ಈ ರಾಜ್ಯವೇ ನಾಂದಿ ಹಾಡಲಿದೆ ಎಂದು ಭವಿಷ್ಯ ನುಡಿದರು.
ಇನ್ನು 10 ದಿನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಲಾಗುವುದು. ಕಾಂಗ್ರೆಸ್ ಪರ ಮತದಾರರ ಒಲವು ವ್ಯಕ್ತವಾಗಿದ್ದು, ಬಿಜೆಪಿಯ ಲಂಚಾವತಾರದಿAದ ಜನ ಬೇಸತ್ತಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಖಚಿತವಾಗಿದ್ದು, ಅನೇಕ ಸೌಲಭ್ಯಗಳನ್ನು ರೂಪಿಸಿದೆ ಎಂದರು.
ಕೊಡಗಿನ ಕಾಫಿ ಬೆಳೆಗಾರರ ಸಮಸ್ಯೆ ಮತ್ತು ವನ್ಯಜೀವಿ ಸಂಘರ್ಷಕ್ಕೆ ಕಾಂಗ್ರೆಸ್ ಆಡಳಿತ ಪರಿಹಾರ ಸೂಚಿಸಲಿದೆ ಎಂದು ಸುರ್ಜೇವಾಲ ಹೇಳಿದರು.
Breaking News
- *ಕೊಡಗು : ಡಿ.1 ರಿಂದ ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ ಪ್ರಕ್ರಿಯೆ ಆರಂಭ : ಜಿಲ್ಲಾಧಿಕಾರಿ ವೆಂಕಟ್ ರಾಜಾ*
- *ಪಡಿತರ ಚೀಟಿ ಪರಿಷ್ಕರಣೆ : ಅರ್ಹ ಬಿಪಿಎಲ್ ಕಾರ್ಡ್ ರದ್ದುಗೊಳಿಸುವುದಿಲ್ಲ : ಸಚಿವ ಮುನಿಯಪ್ಪ*
- *ಕೊಡಗು ಬ್ಲಡ್ ಡೋನಸ್೯ ಸಂಸ್ಥೆಯ 7ನೇ ವಾಷಿ೯ಕೋತ್ಸವ : ಜೀವ ಉಳಿಸುವ ರಕ್ತದಾನಿಗಳೇ ನಿಜವಾದ ಹೀರೋಗಳು : ಅನಿಲ್ ಹೆಚ್.ಟಿ.*
- *ದಿವ್ಯಜ್ಯೋತಿ ಪತ್ತಿನ ಸಹಕಾರ ಸಂಘದ ಚುನಾವಣೆ : ಜಾನ್ಸನ್ ಪಿಂಟೋ ಸೇರಿ ಹಲವರು ಕಣದಲ್ಲಿ*
- *ಕಲ್ಲು ಬಾಯ್ಸ್ ಲೈಕ್ಸ್ ಫ್ಯಾಶನ್ ಫುಟ್ಬಾಲ್ ಕಪ್ : ನಿಯೋನ್ ಎಫ್.ಸಿ ಅಮ್ಮತ್ತಿ ಚಾಂಪಿಯನ್*
- *ಗ್ರಾ.ಪಂ ಉಪಚುನಾವಣೆ : ಕೊಡಗಿನ ವಿವಿಧೆಡೆ ಮದ್ಯ ಮಾರಾಟ ನಿಷೇಧ*
- *ನಂದಿನಿ ವಿವಿಧ ಶ್ರೇಣಿಯ ಹಾಲು ಬಿಡುಗಡೆ : ದೇಶದ ಹಾಲು ಉತ್ಪಾದನೆಯಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ : ಮುಖ್ಯಮಂತ್ರಿ ಸಿದ್ದರಾಮಯ್ಯ*
- *ಕಟ್ಟೆಹಾಡಿ ಅರಣ್ಯ ಹಕ್ಕು ಸಮಿತಿ ರಚನೆ : ಆದಿವಾಸಿಗಳನ್ನು ಒಕ್ಕಲೆಬ್ಬಿಸದಂತೆ ಆಗ್ರಹ*
- *ನ.29 ರಂದು ವಾಲ್ನೂರು-ತ್ಯಾಗತ್ತೂರು ಗ್ರಾಮ ಸಭೆ*
- *ಕೊಡಗು : ಗ್ರಾ.ಪಂ.ಉಪಚುನಾವಣೆ : ವಿವಿಧ ಸಂತೆ, ಜಾತ್ರೆಗಳ ನಿಷೇಧ*