ಮಡಿಕೇರಿ ಮಾ.2 : ಆಸ್ತಿ ವಿಚಾರದ ಕಲಹ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಪೊನ್ನಂಪೇಟೆ ತಾಲ್ಲೂಕಿನ ಹರಿಹರ ಗ್ರಾಮದಲ್ಲಿ ನಡೆದಿದೆ. ಹರಿಹರ ಗ್ರಾಮದ ನಿವಾಸಿ ಎಂ.ಸಂತು ಸುಬ್ಬಯ್ಯ(40) ಚೂರಿಯಿಂದ ಇರಿತಕ್ಕೊಳಗಾಗಿ ಮೃತಪಟ್ಟಿದ್ದಾರೆ. ಕೊಲೆ ಮಾಡಿರುವ ಆರೋಪದಡಿ ಓರ್ವನನ್ನು ಶ್ರೀಮಂಗಲ ಪೊಲೀಸರು ಬಂಧಿಸಿದ್ದಾರೆ.
ಮೃತ ಸಂತು ಸುಬ್ಬಯ್ಯ ಹಾಗೂ ಕೊಲೆ ಆರೋಪಿ ಸೋದರ ಸಂಬಂಧಿಗಳಾಗಿದ್ದು, ಬುಧವಾರ ರಾತ್ರಿ ಮದ್ಯದ ಅಮಲಿನಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ.
ರಕ್ತದ ಮಡುವಿನಲ್ಲಿದ್ದ ಸಂತು ಸುಬ್ಬಯ್ಯ ಅವರನ್ನು ತಕ್ಷಣ ಸಮೀಪದ ಆಸ್ಪತ್ರೆಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ನೀಡಲಾಯಿತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಹುಣಸೂರು ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಆದರೆ ಆ ಹೊತ್ತಿಗಾಗಲೇ ಸಂತು ಸುಬ್ಬಯ್ಯ ಮೃತಪಟ್ಟಿದ್ದರು ಎಂದು ತಿಳಿದು ಬಂದಿದೆ.
ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.













