ಮಡಿಕೇರಿ ಮಾ.3 : ಅಕ್ರಮ ಬಾಂಗ್ಲಾ ವಲಸಿಗ ಕಾರ್ಮಿಕರು ಕೊಡಗು ಜಿಲ್ಲೆಯಲ್ಲಿ ನಡೆಸುತ್ತಿರುವ ಅಪರಾಧ ಪ್ರಕರಣಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಮತ್ತು ವಲಸಿಗರನ್ನು ಗಡಿಪಾರು ಮಾಡಬೇಕೆಂದು ಆಗ್ರಹಿಸಿ ಕೊಡಗು ಸುರಕ್ಷಾ ಸಮಿತಿ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು.
ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಜಮಾಯಿಸಿದ ಸಮಿತಿಯ ಪ್ರಮುಖರು ಹಾಗೂ ಕಾರ್ಯಕರ್ತರು ಘೋಷಣೆಗಳನ್ನು ಕೂಗಿ ವಲಸೆ ಕಾರ್ಮಿಕರ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಒತ್ತಾಯಿಸಿದರು.
ಹಿಂದೂ ಜಾಗರಣ ಯುವ ಘಟಕ, ಹಿಂದು ಯುವ ವಾಹಿನಿಯ ಜಿಲ್ಲಾ ಸಂಚಾಲಕ ವಿನಯ್ ಮಾತನಾಡಿ, ಅಕ್ರಮ ಬಾಂಗ್ಲಾ ಮೂಲದ ವಲಸಿಗರು ಭಾರತದ ನಕಲಿ ದಾಖಲೆಗಳನ್ನು ಸೃಷ್ಟಿಸಿಕೊಂಡು ಕೊಡಗು ಜಿಲ್ಲೆಯ ಕಾಫಿ ತೋಟಗಳಲ್ಲಿ ಕೆಲಸ ಗಿಟ್ಟಿಸಿಕೊಳ್ಳುತ್ತಿದ್ದಾರೆ. ಜಿಲ್ಲೆಯಲ್ಲಿ ನಡೆಯುತ್ತಿರುವ ಹಲವು ಅಪರಾಧ ಪ್ರಕರಣಗಳಲ್ಲಿ ಇವರುಗಳ ಪಾತ್ರ ಎದ್ದು ಕಾಣುತ್ತಿದ್ದು, ಪೊಲೀಸ್ ಇಲಾಖೆ ಕಠಿಣ ಕ್ರಮಕ್ಕೆ ಮುಂದಾಗಬೇಕು ಎಂದು ಆಗ್ರಹಿಸಿದರು.
ಅಧಿಕಾರಿಗಳು ಅಕ್ರಮ ವಲಸಿಗರ ಮೇಲೆ ನಿಗಾ ಇಡಬೇಕು ಮತ್ತು ಅವರ ಬಳಿ ಇರುವ ದಾಖಲೆಗಳನ್ನು ಪರಿಶೀಲಿಸಿ ಅಸಲಿಯೇ ಎಂದು ಖಾತ್ರಿ ಪಡಿಸಿಕೊಳ್ಳಬೇಕು. ನಿರ್ಲಕ್ಷ್ಯ ವಹಿಸಿದರೆ ಮುಂದಿನ ದಿನಗಳಲ್ಲಿ ಕೊಡಗಿಗೆ ಅನಾಹುತ ಕಾದಿದೆ ಎಂದು ಆತಂಕ ವ್ಯಕ್ತಪಡಿಸಿದರು.
ತೋಟದ ಮಾಲೀಕರು, ಒಂಟಿ ಮಹಿಳೆಯರು, ವಯೋವೃದ್ಧರು ಹಾಗೂ ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಪೊಲೀಸ್ ಇಲಾಖೆ ತಕ್ಷಣ ಅಕ್ರಮ ವಲಸೆ ಕಾರ್ಮಿಕರನ್ನು ಪತ್ತೆ ಹಚ್ಚಬೇಕು ಮತ್ತು ಗಡಿಪಾರು ಮಾಡಬೇಕೆಂದು ಒತ್ತಾಯಿಸಿದರು.
ಬಿಜೆಪಿ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ, ಹಿಂದೂ ಜಾಗರಣ ವೇದಿಕೆಯ ಕೊಡಗು ಜಿಲ್ಲಾ ಸಂಚಾಲಕ ಕುಕ್ಕೇರ ಅಜಿತ್, ಸಹ ಸಂಚಾಲಕ ಚೇತನ್, ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಬಿ.ಬಿ.ಭಾರತೀಶ್, ನಗರಸಭಾ ಸದಸ್ಯ ಕವನ್ ಕಾವೇರಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ಉಮೇಶ್ ಸುಬ್ರಮಣಿ, ಪ್ರಚಾರ ಪ್ರಮುಖ್ ಕುಮಾರ್, ಮಾತೃ ಸುರಕ್ಷ ಪ್ರಮುಖ್ ಸುನೀಲ್, ಮಡಿಕೇರಿ ನಗರ ಸಂಚಾಲಕ ದುರ್ಗೇಶ್, ಪ್ರಮುಖರಾದ ಉಷಾ ದೇವಮ್ಮ, ಮಾದೇಟಿರ ತಿಮ್ಮಯ್ಯ, ಪಿ.ಎಂ.ರವಿ, ಪಿ.ಎ.ರವೀಂದ್ರ, ಶಾಂತೆಯಂಡ ತಿಮ್ಮಯ್ಯ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
Breaking News
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*