ಮಡಿಕೇರಿ ಮಾ.3 : ಮದೆನಾಡಿನ ಬಿ.ಜಿ.ಎಸ್. ವಿದ್ಯಾಸಂಸ್ಥೆಯ ವಾರ್ಷಿಕೋತ್ಸವವು ಸಂಭ್ರಮದಿಂದ ನಡೆಯಿತು.
ಕಾರ್ಯಕ್ರಮವನ್ನು ಬಿ.ಜಿ.ಎಸ್. ಸಂಸ್ಥಾನದ ಮೈಸೂರು – ಕೊಡಗು ಶಾಖಾ ಮಠದ ಕಾರ್ಯದರ್ಶಿಗಳಾದ ಶ್ರೀ ಸೋಮನಾಥೇಶ್ವರ ಸ್ವಾಮೀಜಿಗಳು ಉದ್ಘಾಟಿಸಿ ಆಶೀರ್ವಚನ ನೀಡಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ, ಶಿಕ್ಷಣ ಕ್ಷೇತ್ರದಲ್ಲಿ ಬಿಜಿಎಸ್ ವಿದ್ಯಾ ಸಂಸ್ಥೆಯ ಕೊಡುಗೆಯನ್ನು ಸ್ಮರಿಸಿದರು. ಜಿಲ್ಲಾಧಿಕಾರಿಗಳಾದ ಡಾ. ಬಿ.ಸಿ.ಸತೀಶ್, ತಮ್ಮ ಕುಟುಂಬಕ್ಕೂ ಮತ್ತು ಬಿಜಿಎಸ್ ವಿದ್ಯಾ ಸಂಸ್ಥೆಗೂ ಇರುವ ಅವಿನಾಭಾವ ಸಂಬಂಧವನ್ನು ನೆನಪಿಸಿಕೊಂಡರು.
ಮದೆ ಮಹೇಶ್ವರ ವಿದ್ಯಾ ಸಂಸ್ಥೆಯ ಆಡಳಿತ ಮಂಡಳಿ ಪ್ರಮುಖರಾದ ಹುದೇರಿ ರಾಜೇಂದ್ರ ಅವರು ಮಾತನಾಡುತ್ತಾ, ವಿದ್ಯಾಸಂಸ್ಥೆಯನ್ನು ಗ್ರಾಮಸ್ಥರು ಸೇರಿ ಕಟ್ಟಿ ಬೆಳೆಸಿದ ದಿನಗಳನ್ನು ಮೆಲುಕು ಹಾಕಿದರು. ನಿವೃತ್ತ ಪ್ರಾಂಶುಪಾಲ ಬಿ.ಅರ್ ಜೋಯಪ್ಪ, ಶಿಕ್ಷಣ ಮತ್ತು ಕ್ರೀಡಾ ಕ್ಷೇತ್ರದಲ್ಲಿ ಮದೆ ಮಹೇಶ್ವರ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳ ಸಾಧನೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ವೇದಿಕೆಯಲ್ಲಿ ಮದೆ ಮಹೇಶ್ವರ ವಿದ್ಯಾಸಂಸ್ಥೆಯ ಆಡಳಿತ ಮಂಡಳಿಯ ಪ್ರಮುಖರಾದ ಪಟ್ಟಡ ಲೋಭಯ್ಯ, ಬಿ.ಸಿ.ಚೆನ್ನಪ್ಪ, ಹುಲಿಮನೆ ರಾಮಯ್ಯ, ವಿದ್ಯಾಸಂಸ್ಥೆಯ ಸ್ಥಳ ದಾನಿಗಳ ಕುಟುಂಬಸ್ಥರಾದ ಸಾಯಿ ಮುತ್ತಣ್ಣ ಮತ್ತು ಸಾಯಿ ಬೋಪಣ್ಣ, ನಿವೃತ್ತ ಶಿಕ್ಷಕರಾದ ಶಿವರಾಮ್, ಮದೆ ಪಂಚಾಯ್ತಿ ಅಧ್ಯಕ್ಷರಾದ ಹುಲಿಮನೆ ರಾಮಯ್ಯ,ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಧನಂಜಯ ಅಗೋಳಿಕಜೆ ಉಪಸ್ಥಿತರಿದ್ದರು.
ಮದೆ ಬಿಜಿಎಸ್ ವಿದ್ಯಾ ಸಂಸ್ಥೆಯ ಮುಖ್ಯ ಶಿಕ್ಷಕಿ ಪುನೀತ ಸಂಸ್ಥೆಯ ವಾರ್ಷಿಕ ವರದಿ ಮಂಡಿಸಿದರು.ಶಾಲೆಯ ವಿದ್ಯಾರ್ಥಿಗಳ ಪೋಷಕರಿಗೆ ಏರ್ಪಡಿಸಿದ್ದ ಕ್ರೀಡಾಕೂಟದಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ವಿತರಿಸಲಾಯಿತು.
ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಎಲ್.ಕೆ.ಜಿ.ಯಿಂದ ಎಂಟನೇ ತರಗತಿವರೆಗಿನ ವಿದ್ಯಾರ್ಥಿಗಳು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸಿದರು. ಹಿತ ಅವರು ಸ್ವಾಗತಿಸಿ, ರೋಷಿಣಿ ಮತ್ತು ಶ್ರುತಿ ಕಾರ್ಯಕ್ರಮ ನಿರೂಪಿಸಿದರು. ಜಲಜಾಕ್ಷಿ ವಂದಿಸಿದರು.