ಮಡಿಕೇರಿ ಮಾ.3 : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಭೋದಕ ಆಸ್ಪತ್ರೆ ಹಾಗೂ ಮೈಸೂರು ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆ, ಮಡಿಕೇರಿ ಬಾಹ್ಯ ಸೇವಾ ಕೇಂದ್ರ, ಇವರ ಸಹಯೋಗದಲ್ಲಿ ರಾಷ್ಟ್ರೀಯ ಶ್ರವಣದೋಷ ನಿಯಂತ್ರಣ ಮತ್ತು ನಿವಾರಣಾ ಕಾರ್ಯಕ್ರಮದಡಿಯಲ್ಲಿ ‘ವಿಶ್ವ ಶ್ರವಣ ದಿನ/ ರಾಷ್ಟ್ರೀಯ ಶ್ರವಣ ಜಾಗೃತಿ ಅಭಿಯಾನ’ದ ಬಗ್ಗೆ ಬೀದಿ ನಾಟಕ, ಜಾಥಕ್ಕೆ ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್ ನಗರದ ರಾಜಸೀಟು ಬಳಿ ಚಾಲನೆ ನೀಡಿದರು.
ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಂ.ಸತೀಶ್ ಕುಮಾರ್, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಡೀನ್ ಡಾ.ಕಾರ್ಯಪ್ಪ, ಪ್ರಾಂಶುಪಾಲರಾದ ಡಾ.ವಿಶಾಲ್, ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ, ಉಪಾಧ್ಯಕ್ಷರಾದ ಸವಿತಾ ರಾಕೇಶ್, ಆರೋಗ್ಯ ಕುಟುಂಬ ಕಲ್ಯಾಣಾಧಿಕಾರಿ ಡಾ.ಆನಂದ, ಡಾ.ಗೋಪಿನಾಥ್, ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಡಾ.ನಂಜುಂಡಯ್ಯ, ಡಾ.ಶ್ವೇತ ಇತರರು ಇದ್ದರು.