ಮಡಿಕೇರಿ ಮಾ.3 : ಸಾರ್ವತ್ರಿಕ ಚುನಾವಣೆ ಸಂದರ್ಭದಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಕ್ರಮವಹಿಸುವಂತೆ ಜಿಲ್ಲೆಯ ಪ್ರಿಂಟರ್ಸ್ ಮತ್ತು ಪಬ್ಲಿಷರ್ಸ್‍ಗಳಿಗೆ ಜಿಲ್ಲಾಧಿಕಾರಿ ಡಾ.ಬಿ.ಸಿ. ಸತೀಶ ಅವರು ನಿರ್ದೇಶನ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ವ್ಯಾಪ್ತಿಯ ಪ್ರಿಂಟರ್ಸ್ ಮತ್ತು ಪಬ್ಲಿಷರ್ಸ್‍ಗಳ ಜೊತೆ ನಡೆದ ಸಭೆಯಲ್ಲಿ ಮಾತನಾಡಿದರು.
ಚುನಾವಣಾ ಆಯೋಗವು ಪ್ರಿಂಟಿಂಗ್ ಅವರಿಗೆ ಸಾರ್ವತ್ರಿಕ ಚುನಾವಣೆ ಸಂದರ್ಭದಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಪೋಸ್ಟರ್, ಬ್ಯಾನರ್ಸ್, ಪಾಂಪ್ಲೆಟ್ ಹಾಗೂ ಜಾಹೀರಾತುಗಳನ್ನು ಮುದ್ರಿಸುವ ಸಂದರ್ಭದಲ್ಲಿ ಅನುಸರಿಸಬೇಕಾದ ಕ್ರಮಗಳು ಹಾಗೂ ಟಿವಿ ಮತ್ತು ಕೇಬಲ್ ನೆಟ್ವರ್ಕ್‍ಗಳಲ್ಲಿ ಚುನಾವಣಾ ಜಾಹೀರಾತುಗಳನ್ನು ಪ್ರಸಾರ ಮಾಡುವಾಗ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.
ಜಿಲ್ಲಾ ಮಟ್ಟದ ಮಾಧ್ಯಮ ನಿರ್ವಹಣಾ ಸಮಿತಿಯು(ಎಂಸಿಎಂಸಿ) ಪ್ರಮಾಣೀಕರಿಸಿದ ನಂತರ ಕರಪತ್ರ, ಭಿತ್ತಿಪತ್ರ, ಬ್ಯಾನರ್ ಹಾಗೂ ಜಾಹೀರಾತುಗಳನ್ನು ಪ್ರಕಟಿಸಬೇಕು/ಮುದ್ರಿಸಬೇಕು ಎಂದು ಜಿಲ್ಲಾಧಿಕಾರಿ ಅವರು ಸೂಚನೆ ನೀಡಿದರು.
ಯಾವುದೇ ರೀತಿಯ ನಿಂದನಾತ್ಮಕ ಜಾಹೀರಾತು, ಕರಪತ್ರ, ಭಿತ್ತಿಪತ್ರ, ಬ್ಯಾನರ್, ಪೋಸ್ಟರ್ ಗಳನ್ನು ಮುದ್ರಿಸದಂತೆ ಕ್ರಮ ಕೈಗೊಳ್ಳಲು ಮುದ್ರಣಾಲಯದ ಮಾಲೀಕರಿಗೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.
ಮುದ್ರಣಾಲಯದ ಮಾಲೀಕರಿಗೆ ಯಾವುದೇ ರೀತಿಯ ಗೊಂದಲಗಳಿದ್ದರೆ ಸಂಬಂಧಿಸಿದ ಅಧಿಕಾರಿಗಳನ್ನು ಸಂಪರ್ಕಿಸಿ ಬಗೆಹರಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಸಲಹೆ ಮಾಡಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ, ಉಪ ವಿಭಾಗಾಧಿಕಾರಿ ಹಾಗೂ ಮಡಿಕೇರಿ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಯತೀಶ್ ಉಲ್ಲಾಳ್, ಕೃಷಿ ಇಲಾಖೆ ಜಂಟಿ ನಿರ್ದೇಶಕರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಶಭಾನ ಎಂ. ಶೇಕ್, ಮಧ್ಯಮ ನಿರ್ವಹಣಾ ಸಮಿತಿಯ ಸದಸ್ಯರು, ಶಿರಸ್ತೆದಾರ್ ಪ್ರಕಾಶ್, ಚುನಾವಣೆ ಶಾಖೆ ಅನಿಲ್ ಇತರರು ಇದ್ದರು.
Breaking News
- *ಜಯ ಹೇ ಕರ್ನಾಟಕ ಮಾತೆ ಗೀತೆಗೆ 100 ವರ್ಷ : ಕೊಡಗಿನಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳು*
- *ಕೊಡವ ನ್ಯಾಷನಲ್ ಡೇ ಹಿನ್ನೆಲೆ : ದೇವಟ್ ಪರಂಬುವಿನಲ್ಲಿ ಸಿಎನ್ಸಿ ಪ್ರಾರ್ಥನೆ*
- *ವೀರ ಸೇನಾನಿಗಳಿಗೆ ಅಗೌರವ : ಮಡಿಕೇರಿ ತಾಲ್ಲೂಕು ಒಕ್ಕಲಿಗರ ಸಂಘ ಖಂಡನೆ*
- *ಕೊಡವ ಮಕ್ಕಡ ಕೂಟದಿಂದ ದಾಖಲೆಯ 100ನೇ ಪುಸ್ತಕ “100ನೇ ಮೊಟ್ಟ್” ಬಿಡುಗಡೆ : ಭಾಷೆ, ಜಾತಿಯನ್ನು ಮೀರಿದ ಜ್ಞಾನ ಭಂಡಾರವೇ ಸಾಹಿತ್ಯ : ಬಾಚರಣಿಯಂಡ ಅಪ್ಪಣ್ಣ*
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*