ಮಡಿಕೇರಿ ಮಾ.3 : ಮಡಿಕೇರಿಯಲ್ಲಿ ನೋಂದಾಯಿತ ಕಟ್ಟಡ ಕಾರ್ಮಿಕರ 6 ರಿಂದ 8 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ವಿದ್ಯಾರ್ಥಿಗಳ ಶೈಕ್ಷಣಿಕ ಸಾಮಗ್ರಿಗಳ ಕಿಟ್ ಗಳನ್ನು, 9 ಮತ್ತು 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಶ್ರಮೀಕ್ ಟ್ಯಾಬ್‍ಗಳನ್ನು, ಪೇಂಟರಗೆ ಪೇಂಟಿಂಗ್ ಟೂಲ್ ಕಿಟ್ ಗಳನ್ನು, ಕಾಪೇರ್ಂಟರಗೆ ಕಾಪೇರ್ಂಟರ್ ಟೂಲ್ ಕಿಟ್ ಗಳನ್ನು, ಪ್ಲಂಬರಗೆ ಪ್ಲಂಬಿಂಗ್ ಟೂಲ್ ಕಿಟ್ ಗಳನ್ನು ಜಿಲ್ಲಾ ಆಡಳಿತ ಭವನದ ಮುಂಭಾಗದಲ್ಲಿ ಶಾಸಕರಾದ ಎಂ.ಪಿ. ಅಪ್ಪಚ್ಚು ರಂಜನ್ ವಿತರಿಸಿದರು.
ಈ ಸಂದರ್ಭದಲ್ಲಿ ಶಾಸಕರು ಮಾತನಾಡಿ ಕಾರ್ಮಿಕ ಇಲಾಖೆಯಿಂದ ಇಲ್ಲಿಯವರೆಗೆ ಆಹಾರ ಕಿಟ್, ಸುರಕ್ಷತಾ ಕಿಟ್, ಪ್ರತಿರಕ್ಷಣಾ ಕಿಟ್, ಪೌಷ್ಟಿಕಾಂಶ ಕಿಟ್, ಬಾರ್ ಬೆಂಡಿಂಗ್ ಕಿಟ್, ಕಾಪೇರ್ಂಟರ್ ಕಿಟ್, ಎಲೆಕ್ಟ್ರಿಷಿಯನ್ ಕಿಟ್, ಪೈಂಟರ್ ಕಿಟ್ ಪ್ಲಂಬರ್ ಕಿಟ್, ಮೇಸನ್ ಕಿಟ್, ಸ್ಕೂಲ್ ಕಿಟ್(1-5ನೇ ತರಗತಿ), ಸ್ಕೂಲ್ ಕಿಟ್(6-8ನೆ ತರಗತಿ) ಹಾಗೂ ಶ್ರಮಿಕ್ ಟ್ಯಾಬ್ ಗಳನ್ನು ವಿತರಣೆ ಮಾಡಿದ್ದು ಇವುಗಳ ಸದುಪಯೋಗ ಪಡಿಸಿಕೊಂಡು ಕಾರ್ಮಿಕರು ಮುಂದೆ ಬರುವುದಲ್ಲದೆ ನಿಮ್ಮ ಮಕ್ಕಳನ್ನು ಓದಿಸಿ ವಿದ್ಯಾವಂತರನ್ನಾಗಿಸಬೇಕೆಂದು ತಿಳಿಸಿದರು. ಈ ಸಂದರ್ಭದಲ್ಲಿ ಹಿರಿಯ ಕಾರ್ಮಿಕ ನಿರೀಕ್ಷಕರಾದ ಎಂ.ಎಂ.ಯತ್ನಟ್ಟಿ, ಇಲಾಖೆಯ ಎಲ್ಲಾ ಸಿಬ್ಬಂದಿ ವರ್ಗದವರು ಹಾಜರಿದ್ದರು.
Breaking News
- *ಜಯ ಹೇ ಕರ್ನಾಟಕ ಮಾತೆ ಗೀತೆಗೆ 100 ವರ್ಷ : ಕೊಡಗಿನಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳು*
- *ಕೊಡವ ನ್ಯಾಷನಲ್ ಡೇ ಹಿನ್ನೆಲೆ : ದೇವಟ್ ಪರಂಬುವಿನಲ್ಲಿ ಸಿಎನ್ಸಿ ಪ್ರಾರ್ಥನೆ*
- *ವೀರ ಸೇನಾನಿಗಳಿಗೆ ಅಗೌರವ : ಮಡಿಕೇರಿ ತಾಲ್ಲೂಕು ಒಕ್ಕಲಿಗರ ಸಂಘ ಖಂಡನೆ*
- *ಕೊಡವ ಮಕ್ಕಡ ಕೂಟದಿಂದ ದಾಖಲೆಯ 100ನೇ ಪುಸ್ತಕ “100ನೇ ಮೊಟ್ಟ್” ಬಿಡುಗಡೆ : ಭಾಷೆ, ಜಾತಿಯನ್ನು ಮೀರಿದ ಜ್ಞಾನ ಭಂಡಾರವೇ ಸಾಹಿತ್ಯ : ಬಾಚರಣಿಯಂಡ ಅಪ್ಪಣ್ಣ*
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*