ಮಡಿಕೇರಿ ಮಾ.3 : ಕಾಫಿ ತೋಟದ ರೈಟರ್ ವೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪೊನ್ನಂಪೇಟೆ ತಾಲ್ಲೂಕಿನ ಬಾಳೆಲೆ ಹೋಬಳಿಯಲ್ಲಿ ನಡೆದಿದೆ.
ಸ್ಥಳೀಯ ಕಾಫಿ ತೋಟವೊಂದರಲ್ಲಿ ರೈಟರ್ ಆಗಿದ್ದ ಶಾಮ್ ರೈ(41) ಎಂಬುವವರೇ ಮೃತ ವ್ಯಕ್ತಿಯಾಗಿದ್ದಾರೆ. ತೋಟದ ಲೈನ್ ಮನೆಯಲ್ಲಿ ಈ ಘಟನೆ ನಡೆದಿದೆ. ಸ್ಥಳಕ್ಕೆ ಪೊನ್ನಂಪೇಟೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದು, ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.













