ಮಡಿಕೇರಿ ಮಾ.3 : ಯುವಕ-ಯುವತಿಯರು ಮಾದಕ ವ್ಯಸನಿಗಳಾಗಿ ಜೀವನ ಹಾಳು ಮಾಡಿಕೊಳ್ಳುವುದನ್ನು ತಡೆಗಟ್ಟುವ ಸಲುವಾಗಿ ಮಾದಕ ವಸ್ತುಗಳನ್ನು ಬಳಸುವ ಹಾಗೂ ಮಾರಾಟ ಮಾಡುವ ವ್ಯಕ್ತಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕಾಗಿದೆ. ಈ ರೀತಿಯ ವ್ಯಕ್ತಿಗಳು ಕಂಡುಬoದಲ್ಲಿ ಸ್ಥಳೀಯ ಪೊಲೀಸ್ ಠಾಣೆ ಹಾಗೂ ಕೆ.ಎಸ್.ಪಿ ತಂತ್ರಾಶದ ಮೂಲಕ ಮಾಹಿತಿ ನೀಡುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮನವಿ ಮಾಡಿದ್ದಾರೆ. ಅಕ್ರಮ ಚಟುವಟಿಕೆಗಗಳ ಕುರಿತು ಮಾಹಿತಿ ಒದಗಿಸುವವರ ವಿವರಗಳನ್ನು ಬಹಿರಂಗಪಡಿಸುವುದಿಲ್ಲ ಎಂದು ಹೇಳಿದ್ದಾರೆ.













