ಸೋಮವಾರಪೇಟೆ ಮಾ.4 : ಅಕ್ರಮ ಬಾಂಗ್ಲಾ ವಲಸಿಗ ಕಾರ್ಮಿಕರ ಕ್ರಿಮಿನಲ್ ಚಟುವಟಿಕೆಗಳ ವಿರುದ್ಧ ಕಠಿಣ ಕಾನೂನು ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿ ಕೊಡಗು ಸುರಕ್ಷಾ ಸಮಿತಿ ವತಿಯಿಂದ ಸೋಮವಾರಪೇಟೆ ಪಟ್ಟಣದಲ್ಲಿ ಪ್ರತಿಭಟನೆ ನಡೆಯಿತು.
ತಾಲ್ಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಸಮಿತಿಯ ಪ್ರಮುಖರು ಹಾಗೂ ಕಾರ್ಯಕರ್ತರು ತಹಶೀಲ್ದಾರ್ ನರಗುಂದ ಅವರ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು.
ಕೊಡಗು ಜಿಲ್ಲೆಯ ಕಾಫಿ ತೋಟ ಮತ್ತು ಇತರ ಕಾರ್ಮಿಕ ವಲಯಗಳಲ್ಲಿ ಅಕ್ರಮ ಬಾಂಗ್ಲಾ ಮೂಲದವರು ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದಾರೆ. ಬಹುತೇಕರು ನಕಲಿ ದಾಖಲೆ ಸೃಷ್ಠಿಸಿಕೊಂಡು ಕಾನೂನು ಬಾಹಿರ ಕೃತ್ಯಗಳಲ್ಲಿ ತೊಡಗಿಸಿಕೊಂಡಿರುತ್ತಾರೆ ಎಂದು ಆರೋಪಿಸಿದರು.
ಜಿಲ್ಲೆಯ ವಿವಿಧೆಡೆಗಳಲ್ಲಿ ಬಾಂಗ್ಲ ವಲಸಿಗರಿಂದ ನಿರಂತರವಾಗಿ ಕ್ರಿಮಿನಲ್ ಪ್ರಕರಣಗಳು ನಡೆಯುತ್ತಿದ್ದು, ಇದು ಮುಂದುವರಿದರೆ ಸಮಸ್ಯೆಯಾಗಲಿದೆ. ಆದ್ದರಿಂದ ತಕ್ಷಣವೇ ಪೊಲೀಸ್ ಇಲಾಖೆ, ಕಾರ್ಮಿಕರ ದಾಖಲಾತಿಗಳನ್ನು ಪರಿಶೀಲಿಸಬೇಕೆಂದು ಆಗ್ರಹಿಸಿದರು.
ಸುರಕ್ಷಾ ಸಮಿತಿಯ ಪ್ರಮುಖರಾದ ಸುಭಾಷ್ ತಿಮ್ಮಯ್ಯ, ಉಮೇಶ್, ಭೋಜೇಗೌಡ, ಮಹೇಶ್ ತಿಮ್ಮಯ್ಯ ಮತ್ತಿತರರು ಇದ್ದರು.









