Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?
  • *ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » ಭೃಂಗರಾಜ ಗಿಡದ ಔಷಧಿ ಗುಣಗಳು
ರೋಗ ಮುಕ್ತ

ಭೃಂಗರಾಜ ಗಿಡದ ಔಷಧಿ ಗುಣಗಳು

March 7, 20232 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಭಾರತೀಯ ವೈದ್ಯಕೀಯ ಪದ್ಧತಿಯಲ್ಲಿ ಭೃಂಗರಾಜ ಸಸ್ಯಕ್ಕೆ ಹೆಚ್ಚಿನ ಮಹತ್ವವಿದೆ. ಇದು ಮನೆಯ ಎದುರಿಗೆ ಕಳೆಗಳ ಮದ್ಯದಲ್ಲಿ ಬೆಳೆಯುವಂತ ಸಸ್ಯ. ಇದು 1 ರಿಂದ 2 ಅಡಿ ಎತ್ತರಕ್ಕೆ ಬೆಳೆಯುವಂತ ಸಸ್ಯವಾಗಿದೆ. ಭೃಂಗರಾಜ ಗಿಡವು ನೀರು ಇರುವ ತಂಪು ಪ್ರದೇಶದಲ್ಲಿ ಗದ್ದೆ, ತೋಟ, ನದಿಯ ಪಕ್ಕದಲ್ಲಿ ಹೆಚ್ಚಾಗಿ ಕಂಡು ಬರುತ್ತದೆ. ಇದರ ಕಾಂಡ, ಗಿಡವು ಪೂರ್ತಿ ಬೆಳೆದ ಮೇಲೆ ಕೆಂಪಾಗುತ್ತದೆ. ಹಾಗು ಇದರಲ್ಲಿ ಚಿಕ್ಕ ಚಿಕ್ಕ ಬಿಳಿ ಹೂಗಳು ಬಿಡುತ್ತವೆ. ಇದರ ಬೀಜಗಳು ಕಪ್ಪಾಗಿದ್ದೂ, ಎಲೆಗಳು ನೆಲಬೇವಿನ ಎಲೆಗಳನ್ನು ಹೋಲುತ್ತವೆ.
ಭೃಂಗರಾಜವನ್ನು “ಕೇಶರಾಜ’ ಎಂದು ಕರೆಯುತ್ತಾರೆ. ಏಕೆಂದರೆ ಇದು ಕೂದಲಿನ ಅರೋಗ್ಯ ಕಾಪಾಡುವಲ್ಲಿ ಹೆಚ್ಚಿನ ಪಾತ್ರ ವಹಿಸುತ್ತದೆ. ಈ ಸಸ್ಯವನ್ನು ಹಳ್ಳಿಗಳಲ್ಲಿ ಗರುಗದ ಗಿಡವೆಂದು ಕೂಡ ಕರೆಯುತ್ತಾರೆ. ಭೃಂಗರಾಜ ಗಿಡವನ್ನು ಆಹಾರೌಷಧವಾಗಿಯೂ ಬಳಸುತ್ತಾರೆ. ಇದು ಕಹಿ ರುಚಿಯನ್ನು ಹೊಂದಿರುತ್ತದೆ. ಹಾಗು ಭೃಂಗರಾಜ ಅನೇಕ ಸಮಸ್ಯೆಗಳನ್ನು ನಿವಾರಣೆ ಮಾಡಬಲ್ಲದ್ದಾಗಿದೆ. ಇದರಿಂದ ಎಣ್ಣೆಯನ್ನು ತಯಾರಿಸುತ್ತಾರೆ. ಅದು ಮಾರುಕಟ್ಟೆಗಳಲ್ಲಿ ಲಭ್ಯವಿದೆ. ಭೃಂಗರಾಜ ಎಲೆಗಳನ್ನು ಸೂಪ್ ಮಾಡಿಕೊಂಡು ಆಹಾರೌಷಧವಾಗಿ ಉಪಯೋಗಿಸುವುದರಿಂದ, ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬರುತ್ತದೆ, ಹೃದಯ ರೋಗ ಸಮಸ್ಯೆ ನಿವಾರಣೆಯಾಗುತ್ತದೆ, ರಕ್ತನಾಳಗಳ ಅರೋಗ್ಯದಿಂದಿರುತ್ತವೆ, ಮತ್ತು ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚುತ್ತದೆ.

 ಚರ್ಮರೋಗ ನಿವಾರಣೆಗೆ ಸಹಕಾರಿ  : 
ಭೃಂಗರಾಜ ಎಲೆಯ ರಸವನ್ನು ತೆಗೆದುಕೊಂಡು, ಮೈಗೆ ಹಚ್ಚಿಕೊಂಡು ಅರ್ಧ ಗಂಟೆ ಬಿಟ್ಟು ಸ್ನಾನ ಮಾಡುದರಿಂದ ಚರ್ಮದ ಕಾಂತಿಯು ಹೆಚ್ಚುತ್ತದೆ. ಹಾಗೂ ಚರ್ಮವು ಆರೋಗ್ಯದಿಂದ ಇರುತ್ತದೆ. ಮತ್ತು ಭೃಂಗರಾಜ ಗಿಡದ ಬೇರನ್ನು ಪುಡಿಮಾಡಿಟ್ಟುಕೊಂಡು ಅದಕ್ಕೆ ಸ್ವಲ್ಪ ನೀರು ಸೇರಿಸಿ ಚರ್ಮಕ್ಕೆ ಹಚ್ಚಿ ಕೊಳ್ಳುವುದರಿಂದ ಚರ್ಮರೋಗ ನಿವಾರಣೆಯಾಗುತ್ತದೆ.

 ಕಣ್ಣಿನ ಆರೋಗ್ಯ  ಕಾಪಾಡುತ್ತದೆ :

ಭೃಂಗರಾಜದಲ್ಲಿ ಕೆರೋಟಿನ್ ಅಂಶ ಸಾಕಷ್ಟು ಪ್ರಮಾಣದಲ್ಲಿರುತ್ತದೆ. ಆದ್ದರಿಂದ ಇದರ ಎಲೆಯ ಕಷಾಯ ಮಾಡಿ ಕುಡಿಯುವುದರಿಂದ ಕಣ್ಣಿನ ಆರೋಗ್ಯವನ್ನು ಇದು ಕಾಪಾಡುತ್ತದೆ.

ಗಂಟಲು ನೋವು ನಿವಾರಣೆ : ಭೃಂಗರಾಜ ಎಲೆಯ ಕಷಾಯವನ್ನು ಮಾಡಿಕೊಂಡು, ಗಂಟಲವರೆಗೂ ಬರುವಂತೆ ಬಾಯಿಗೆ ಹಾಕಿ, ಮುಕ್ಕಳಿಯುವುದರಿಂದ ಗಂಟಲು ನೋವು ನಿವಾರಣೆಯಾಗುತ್ತದೆ.

ಅಜೀರ್ಣವನ್ನು ಹೋಗಲಾಡಿಸುತ್ತದೆ :  ಅಜೀರ್ಣವಾದಾಗ ಭೃಂಗರಾಜದ ಎಲೆಯನ್ನು ಸಣ್ಣಗೆ ಹೆಚ್ಚಿಕೊಂಡು, ಸ್ವಲ್ಪ ತುಪ್ಪದಲ್ಲಿ ಹುರಿದು, ಅದಕ್ಕೆ ಮೊಸರು, ಜೀರಿಗೆ, ಸೇರಿಸಿ ತಿನ್ನುವುದರಿಂದ ಜೀರ್ಣಕ್ರಿಯೆ ಸರಾಗವಾಗುತ್ತದೆ.

ತಲೆನೋವು ನಿವಾರಣೆಗೆ  : ಭೃಂಗರಾಜ ಎಲೆಯ ರಸವನ್ನು ತೆಗೆದುಕೊಂಡು ಎಳ್ಳೆಣ್ಣೆ ಜೊತೆ ಸೇರಿಸಿ ತಲೆಗೆ ಹಚ್ಚಿಕೊಳ್ಳುವುದರಿಂದ ತಲೆನೋವು ವಾಸಿಯಾಗುತ್ತದೆ.

ಕೂದಲಿನ ಆರೋಗ್ಯ ಕಾಪಾಡುವಲ್ಲಿ  ಸಹಕಾರಿ  :  ಭೃಂಗರಾಜ ಗಿಡವನ್ನು ಕೇಶರಾಜ ಎಂದೇ ಕರೆಯುತ್ತಾರೆ. ಭೃಂಗರಾಜದ ಪುಡಿ ಮತ್ತು ಮೆಂತ್ಯೆ ಪುಡಿಯನ್ನು ಸಮ ಪ್ರಮಾಣದಲ್ಲಿ ತೆಗೆದುಕೊಂಡು, ಅದಕ್ಕೆ ಸ್ವಲ್ಪ ನೀರು ಸೇರಿಸಿ ಈ ಮಿಶ್ರಣವನ್ನು ಕೂದಲಿನ ಬುಡಕ್ಕೆ ಹಚ್ಚಿಕೊಂಡು, ಒಂದು ಗಂಟೆಗಳ ಕಾಲ ಬಿಟ್ಟು ಸ್ನಾನ ಮಾಡುವುದರಿಂದ ಕೂದಲಿನ ಆರೋಗ್ಯವನ್ನು ಕಾಪಾಡಬಹುದು. ಹಾಗು ನಾವು ಪ್ರತಿದಿನ ಇಲ್ಲವೇ ವಾರಕ್ಕೆ 2 ಬಾರಿ ಭೃಂಗರಾಜ ಎಲೆಯ ರಸವನ್ನು ತೆಗೆದು ಕೊಂಡು, ಕೊಬ್ಬರಿ ಎಣ್ಣೆಯೊಂದಿಗೆ ಬೆರಸಿ ಕುದಿಸಿಕೊಳ್ಳಬೇಕು.ಅದನ್ನು ತಣ್ಣಗಾದ ನಂತರ ತಲೆಗೆ ಹಾಕಿಕೊಳ್ಳುವುದರಿಂದ ಕೂದಲು ಉದುರುವುದನ್ನು ತಡೆಯಬಹುದು. ಮತ್ತು ಕೂದಲು ಸೊಂಪಾಗಿ ಬೆಳೆಯುತ್ತದೆ. ಹಾಗು ಅದರಿಂದ ಕೂದಲಿಗೆ ಹೊಳಪು ಬರುತ್ತದೆ.

Share. Facebook Twitter Pinterest LinkedIn Tumblr Email WhatsApp
Previous Articleಅಪಘಾತದಲ್ಲಿ ಸೋಮವಾರಪೇಟೆಯ ಬೀಟೆಕಟ್ಟೆ ವಿದ್ಯಾರ್ಥಿ ಸಾವು : ಸುರತ್ಕಲ್ ನಲ್ಲಿ ಘಟನೆ
Next Article ತೀರ್ಥರೂಪದಲ್ಲಿ ಭಕ್ತರ ಇಷ್ಟಾರ್ಥ ನೆರವೇರಿಸುತ್ತಿರುವ ಬಿಲಗುಂಜಿ ಕಮಲೇಶ್ವರ

Related Posts

*ವಿಟಮಿನ್ ಬಿ12 : ಆರೋಗ್ಯಕ್ಕೆ ಮುಖ್ಯವಾದ ಪೋಷಕಾಂಶ : ಡಾ.ಕೆ.ಬಿ.ಸೂರ್ಯಕುಮಾರ್*

January 2, 2026

*ವಿಟಮಿನ್ ಡಿ3 : ಆರೋಗ್ಯಕ್ಕೆ ಅಗತ್ಯವಾದ ಸೂರ್ಯ ರಶ್ಮಿ ವಿಟಮಿನ್ : ಡಾ.ಬಿ.ಸೂರ್ಯ ಕುಮಾರ್*

December 11, 2025

*ಚಳಿಗಾಲದಲ್ಲಿ ದೇಹದ ತೂಕ ಇಳಿಸುವ ಸಿಂಪಲ್ ಟಿಪ್ಸ್*

December 9, 2025

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ಮಡಿಕೇರಿ, NEWS DESK ಫೆ.11 : ದಕ್ಷಿಣ ಕೊಡಗಿನ ಪೊನ್ನಂಪೇಟೆ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ನಿರಂತರವಾಗಿ ಜಾನುವಾರುಗಳ ಮೇಲೆ ದಾಳಿ…

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.