ಮಡಿಕೇರಿ ಮಾ.7 : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ನಗರದ ಜನರಲ್ ತಿಮ್ಮಯ್ಯ ಒಳಾಂಗಣ ಕ್ರೀಡಾಂಗಣದಲ್ಲಿ ಮಾರ್ಚ್, 8 ರಂದು ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಒಳಾಂಗಣ ಕ್ರೀಡಾಂಗಣದ ಬ್ಯಾಡ್ಮಿಂಟನ್ ಕೋರ್ಟ್, ಟೇಬಲ್‍ಟೆನ್ನಿಸ್, ಜಿಮ್ ಹಾಗೂ ಈಜುಕೊಳದಲ್ಲಿ ಮಹಿಳೆಯರಿಗೆ ಉಚಿತವಾಗಿ ಪ್ರವೇಶ ನೀಡುವುದರ ಮೂಲಕ ಮಹಿಳಾ ದಿನಾಚರಣೆ ನಡೆಯಲಿದೆ.
ಜಿಲ್ಲೆಯ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿ.ಟಿ.ವಿಸ್ಮಯಿ ಅವರು ತಿಳಿಸಿದ್ದಾರೆ.









