ನಾಪೋಕ್ಲು ಮಾ.7 : ನಿರಂತರ ಅಧ್ಯಯನದಿಂದ ವಿದ್ಯಾರ್ಥಿಗಳು ಯಶಸ್ಸು ಗಳಿಸಲು ಸಾಧ್ಯ ಎಂದು
ಭಾಗಮಂಡಲ ಶ್ರೀ ಕಾವೇರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ರಾದ ದಿವಾಕರ್ ಕೆ.
ಜೆ.ಹೇಳಿದರು.ಇಲ್ಲಿನ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ನಡೆದ ಎಸ್. ಎಸ್. ಎಲ್. ಸಿ
ವಿದ್ಯಾರ್ಥಿಗಳಿಗೆ ಪರೀಕ್ಷಾ ಭಯ ನಿವಾರಣೆ ಮತ್ತು ಪರೀಕ್ಷಾ ಸಿದ್ದತಾ
ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡು ಮಾತನಾಡಿ ವಿದ್ಯಾರ್ಥಿಗಳಿಗೆ
ಸುಮಾರು ಎರಡು ಗಂಟೆಗಳ ಕಾಲ ಉಪನ್ಯಾಸ ನೀಡುವುದರೊಂದಿಗೆ ಸಂವಾದ ನಡೆಸಿದರು.
ಈ ಕಾರ್ಯಗಾರದಲ್ಲಿ ಕೆ. ಪಿ.ಎಸ್ ನಾಪೋಕ್ಲು, ಶ್ರೀ ರಾಮ ಟ್ರಸ್ಟ್ ನಾಪೋಕ್ಲು, ಸೆಕ್ರೆಡ್
ಹಾರ್ಟ್ಸ್ ನಾಪೋಕ್ಲು ಶಾಲೆಗಳ 148 ವಿದ್ಯಾರ್ಥಿಗಳು ಭಾಗಿಯಾಗಿದ್ದರು.
ಪ್ರಭಾರ ಉಪ ಪ್ರಾಂಶುಪಾಲ ಶಿವಣ್ಣ ಎಂ. ಎಸ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಭಾರತ್
ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಸಂಪಾಜೆ ಯ ಅಧ್ಯಕ್ಷ ಧನಂಜಯ ಎಂ.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಎಸ್.ಡಿ.ಎಂ. ಉಪಾಧ್ಯಕ್ಷ ಹಾರೀಸ್ ಕೆ.ಎ
ವಿದ್ಯಾರ್ಥಿಗಳಿಗೆ ಶುಭ ಕೋರಿದರು. ಕಾರ್ಯದರ್ಶಿ ಉಷಾರಾಣಿ ಕಾರ್ಯಕ್ರಮ ನಿರೂಪಿಸಿ
ವಂದಿಸಿದರು. (ವರದಿ : ದುಗ್ಗಳ ಸದಾನಂದ)
Breaking News
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*