ಮಡಿಕೇರಿ ಮಾ.8 : ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ವೀರನಹೊಸಹಳ್ಳಿ ವಲಯದಲ್ಲಿ ಮೂರು ವರ್ಷದ ಹೆಣ್ಣು ಚಿರತೆಯೊಂದರ ಮೃತದೇಹ ಪತ್ತೆಯಾಗಿದೆ. ಅರಣ್ಯ ಗಸ್ತಿನಲ್ಲಿದ್ದ ಇಲಾಖೆಯ ಸಿಬ್ಬಂದಿಗಳಿಗೆ ಮೃತದೇಹ ಗೋಚರಿಸಿದ್ದು, ಹಿರಿಯ ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಕಾದಾಟದಲ್ಲಿ ಗಾಯಗೊಂಡು ಚಿರತೆ ಮೃತ ಪಟ್ಟಿರಬಹುದೆಂದು ಶಂಕಿಸಲಾಗಿದೆ.










