ಮಡಿಕೇರಿ ಮಾ.8 : ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪ.ಜಾತಿ/ ಪ.ವರ್ಗದ ಜನಾಂಗದವರ ಶ್ರೇಯಸ್ಸಿಗಾಗಿ ಪ್ರೋತ್ಸಾಹಿಸಿ, ಶ್ರಮಿಸಿ, ಗಣನೀಯ ಸೇವೆ ಸಲ್ಲಿಸಿದ ಅರ್ಹ ವ್ಯಕ್ತಿಗಳನ್ನು ಗುರುತಿಸಿ ಡಾ.ಬಾಬು ಜಗಜೀವನ್‍ರಾಂ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಪ್ರಶಸ್ತಿ ನೀಡಲಾಗುತ್ತಿದ್ದು ಅರ್ಜಿ ಆಹ್ವಾನಿಸಲಾಗಿದೆ.
ಪ್ರಶಸ್ತಿ ಪಡೆಯಲು ಯಾವುದೇ ಜನಾಂಗ, ಲಿಂಗ, ಜಾತಿ ಅಥವಾ ಸಮುದಾಯದ ವ್ಯತ್ಯಾಸವಿಲ್ಲದೆ ಅಥವಾ ತಾರತಮ್ಯವಿಲ್ಲದೆ ಈ ಪ್ರಶಸ್ತಿಗೆ ಯಾವುದೇ ಭಾರತೀಯರು ಮತ್ತು ಸಂಸ್ಥೆಯವರು ಅರ್ಜಿ ಸಲ್ಲಿಸಬಹುದು. ಪರಿಶಿಷ್ಟ ಜಾತಿಯವರ ಮೇಲೆ ನಡೆಯುತ್ತಿರುವ ಅಸ್ಪೃಶ್ಯತೆ ನಿವಾರಣೆ ಮಾಡಲು ಹಾಗೂ ದೌರ್ಜನ್ಯ ಅಪರಾಧಗಳ ನಿಯಂತ್ರಣದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ವ್ಯಕ್ತಿ/ ಸರ್ಕಾರೇತರ ಸಂಘ ಸಂಸ್ಥೆಗಳಾಗಿರಬೇಕು. ಪರಿಶಿಷ್ಟ ಜಾತಿ ಜನಾಂಗದವರ ಅಭಿವೃದ್ಧಿಗೆ ಕಳೆದ 5 ವರ್ಷಗಳಿಂದ ಕೆಲಸ ಮಾಡುತ್ತಿರುವ, ನೋಂದಣಿಯಾಗಿರುವ ಸರ್ಕಾರೇತರ ಸಂಘ ಸಂಸ್ಥೆಗಳು ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗೆ ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಕೊಡಗು ಜಿಲ್ಲೆ, ಮಡಿಕೇರಿ 08272-225531. ಸಹಾಯಕ ನಿರ್ದೇಶಕರ ಕಚೇರಿ ಸಮಾಜ ಕಲ್ಯಾಣ ಇಲಾಖೆ ಮಡಿಕೇರಿ-08272-223552. ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ ಸೋಮವಾರಪೇಟೆ-08276-281115, ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ ಪೊನ್ನಂಪೇಟೆ-08274-249476 ನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶೇಖರ್ ಅವರು ತಿಳಿಸಿದ್ದಾರೆ.









