ಬೆಂಗಳೂರು ಮಾ.8 : ಮುಖ್ಯಮಂತ್ರಿ ರಾಜೀನಾಮೆಗೆ ಆಗ್ರಹಿಸಿ ಮಾ.9 ರಂದು ಎರಡು ಗಂಟೆ ಕರ್ನಾಟಕ ಬಂದ್ ಗೆ ಕರೆ ನೀಡಿದ್ದ ರಾಜ್ಯ ಕಾಂಗ್ರೆಸ್ ತನ್ನ ನಿರ್ಧಾರದಿಂದ ಹಿಂದೆ ಸರಿದಿದೆ. ಗುರುವಾರದಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭಗೊಳ್ಳುತ್ತಿರುವುದರಿoದ ಬಂದ್ ಕರೆಯನ್ನು ವಾಪಾಸ್ ಪಡೆದಿದೆ.
ಬಿಜೆಪಿ ನೇತೃತ್ವದ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಆರೋಪಿಸಿ ಮಾ.9 ರಂದು ಬೆಳಗ್ಗೆ 9 ಗಂಟೆಯಿAದ 11 ಗಂಟೆಯವರೆಗೆ ಸ್ವಯಂ ಪ್ರೇರಿತ ಬಂದ್ ಗೆ ಕಾಂಗ್ರೆಸ್ ಕರೆ ನೀಡಿತ್ತು. ಆದರೆ ಈ ಕರೆಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಸಾರ್ವಜನಿಕರಿಗೆ ತೊಂದರೆಯಾಗುವ ಬಗ್ಗೆ ಅಸಮಾಧಾನದ ಕೂಗು ಕೇಳಿ ಬಂದಿತ್ತು. ಇದೀಗ ಎಚ್ಚೆತ್ತುಕೊಂಡಿರುವ ಕಾಂಗ್ರೆಸ್ ನಾಯಕರು ದ್ವಿತೀಯ ಪಿಯುಸಿ ಪರೀಕ್ಷೆಯ ಕಾರಣ ನೀಡಿ ಬಂದ್ ಕರೆಯನ್ನು ವಾಪಾಸ್ ಪಡೆದಿದ್ದಾರೆ.








