ಬೆಂಗಳೂರು ಮಾ.8 : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ರವೀಂದ್ರ ಕಲಾಕ್ಷೇತ್ರ ಕನ್ನಡ ಭವನದಲ್ಲಿ ಆಯೋಜಿಸಿರುವ “ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ” ಕಾರ್ಯಕ್ರಮವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉದ್ಘಾಟಿಸಿ ಸಾಧಕ ಮಹಿಳೆಯರಿಗೆ “ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಪ್ರದಾನ” ಮಾಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಹಾಲಪ್ಪ ಆಚಾರ್, ಸಾಲುಮರದ ತಿಮ್ಮಕ್ಕ, ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮೀಳಾ ನಾಯ್ಡು, ರಾಜ್ಯ ಮಕ್ಕಳ ರಕ್ಷಣಾ ಆಯೋಗದ ಅಧ್ಯಕ್ಷ ರಾಜಣ್ಣಗೌಡ, ಡಿ.ಆರ್.ಡಿ.ಓ ಸಂಸ್ಥೆಯ ಆಶು ಭಾಟಿಯಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನಿರ್ದೇಶಕಿ ಡಾ; ಅನುರಾಧಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ: ಮಂಜುಳಾ ಮೊದಲಾದವರು ಉಪಸ್ಥಿತರಿದ್ದರು.