ಬೆಂಗಳೂರು ಮಾ.8 : ವಿಮಾನದಲ್ಲಿ ಧೂಮಪಾನ ಮಾಡಿದ ಆರೋಪದಡಿ ಮಹಿಳೆಯೊಬ್ಬರನ್ನು ವಶಕ್ಕೆ ಪಡೆಯಲಾಗಿದೆ. ಪಶ್ಚಿಮ ಬಂಗಾಳದ ಸೀಲ್ದಾ ಜಿಲ್ಲೆಯ ಮಹಿಳೆ ವಿಮಾನದ ಶೌಚಾಲಯದಲ್ಲಿ ಧೂಮಪಾನ ಮಾಡಿದ್ದರು ಎಂದು ಆರೋಪಿಸಲಾಗಿದೆ.
ಕೊಲ್ಕತ್ತಾದಿಂದ ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಈ ಪ್ರಕರಣ ನಡೆದಿದೆ. ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪೊಲೀಸರು ಮಹಿಳೆಯನ್ನು ವಶಕ್ಕೆ ಪಡೆದರು.













