ಮಡಿಕೇರಿ ಮಾ.8 : ಪ್ರಧಾನಮಂತ್ರಿ ನರೇಂದ್ರ ಮೋದಿಜೀ ಅವರು ಮಾರ್ಚ್ 12 ರಂದು ಮೈಸೂರು- ಬೆಂಗಳೂರು ದಶಪಥ ಹೆದ್ದಾರಿಯನ್ನು ಉದ್ಘಾಟಿಸಲಿದ್ದಾರೆ. ಪ್ರಧಾನಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಕಾರ್ಯಕ್ರಮ ನಡೆಯುವ ಸ್ಥಳವನ್ನು ಪರಿಶೀಲಿಸಿದ ಮೈಸೂರು- ಕೊಡಗು ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ಸೂಕ್ತ ವ್ಯವಸ್ಥೆಗಳ ಬಗ್ಗೆ ಸಭೆ ನಡೆಸಿ ಅಧಿಕಾರಿಗಳಿಗೆ ಸಲಹೆ ನೀಡಿದರು.
ಸಚಿವ ಗೋಪಾಲಯ್ಯ, ಮಂಡ್ಯ ಜಿಲ್ಲಾಧಿಕಾರಿಗಳು, ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.