ನಾಪೋಕ್ಲು ಮಾ.9 : ಮಡಿಕೇರಿಯಲ್ಲಿ ನಡೆದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ನಾಪೋಕ್ಲು ಗ್ರಾಮದ ಹಳೆ ತಾಲೂಕು ಅಂಗನವಾಡಿ ಶಿಕ್ಷಕಿ ಭಾಗ್ಯವತಿ ಉತ್ತಮ ಅಂಗನವಾಡಿ ಶಿಕ್ಷಕಿ ಪ್ರಶಸ್ತಿ ಪಡೆದರು.
ಇವರು ಕೇಂದ್ರ ನಿರ್ವಹಣೆ, ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಇಲಾಖೆಯಿಂದ ಸಿಗುವ ಸೌಲಭ್ಯ ಹಾಗೂ ಶಿಕ್ಷಣ ನೀಡಿದ್ದಾರೆ. ಸ್ತ್ರೀ ಶಕ್ತಿ ಸ್ವಸಹಾಯ ಸಂಘಗಳನ್ನು ರಚಿಸಿ ಮಹಿಳೆಯರಿಗೆ ಉತ್ತಮ ಮಾರ್ಗದರ್ಶನ ಹಾಗೂ ಸಲಹೆ ಸೂಚನೆಗಳನ್ನು ನೀಡುತ್ತಿದ್ದು, ಮಹಿಳೆಯರು ಅಭಿವೃದ್ಧಿ ಹೊಂದುವಲ್ಲಿ ಕಾರಣಕರ್ತರಾಗಿದ್ದಾರೆ.
ಮಾತೃವಂದನಾ, ಭಾಗ್ಯಲಕ್ಷ್ಮಿ ಯೋಜನೆಯ ಸೌಲಭ್ಯವನ್ನು ಫಲಾನುಭವಿಯವರಿಗೆ ದೊರಕಿಸಿಕೊಟ್ಟಿದ್ದಾರೆ. ಕೋವಿಡ್ ಸಮಯದಲ್ಲಿ ಉತ್ತಮ ಕೆಲಸ ಕಾರ್ಯಗಳನ್ನು ಮಾಡಿದ್ದು, ಅವರ ಸಾಧನೆಯನ್ನು ಗುರುತಿಸಿ ಜಿಲ್ಲಾಡಳಿತದಿಂದ ಅಂಗನವಾಡಿ ಶಿಕ್ಷಕಿ ಪ್ರಶಸ್ತಿ ನೀಡಲಾಗಿದೆ.
ವರದಿ : ದುಗ್ಗಳ ಸದಾನಂದ.








