ಮಡಿಕೇರಿ ಮಾ.9 : ರೈತ ವರನನ್ನು ಮದುವೆಯಾಗುವ ವಧುವಿಗೆ 2 ಲಕ್ಷ ರೂ. ಪ್ರೋತ್ಸಾಹ ಧನ ನೀಡುವುದಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಘೋಷಿಸಿದ್ದಾರೆ.
ವಿಧಾನಸಭಾ ಚುನಾವಣೆಯಲ್ಲಿ ಜಾತ್ಯತೀತ ಜನತಾದಳ ಪಕ್ಷ ಬಹುಮತ ಪಡೆದು ಅಧಿಕಾರಕ್ಕೆ ಬಂದರೆ ಈ ಯೋಜನೆಯನ್ನು ಜಾರಿಗೆ ತರುವುದಾಗಿ ಭರವಸೆ ನೀಡಿದ್ದಾರೆ.
ತುಮಕೂರು ಜಿಲ್ಲೆಯ ತಿಪಟೂರು ಕ್ಷೇತ್ರದಲ್ಲಿ ಜೆಡಿಎಸ್ ಪಂಚರತ್ನ ಯಾತ್ರೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಗ್ರಾಮೀಣ ರೈತರ ಮಕ್ಕಳಿಗೆ ಹೆಣ್ಣು ನೀಡಿ ಮದುವೆ ಮಾಡಿಕೊಡಲು ಯಾರೂ ಮುಂದೆ ಬರುತ್ತಿಲ್ಲ. ವಧು ಕೂಡ ರೈತ ವರನನ್ನು ವರಿಸಲು ಆಸಕ್ತಿ ತೋರುತ್ತಿಲ್ಲ. ಆದ್ದರಿಂದ ರೈತರ ಮಕ್ಕಳನ್ನು ಮದುವೆಯಾಗುವಂತೆ ಪ್ರೇರೆಪಿಸಲು ವಧುವಿಗೆ 2ಲಕ್ಷ ರೂ. ಪ್ರೋತ್ಸಾಹ ಧನ ನೀಡಲು ನಿರ್ಧರಿಸಿರುವುದಾಗಿ ತಿಳಿಸಿದರು.
ಈ ಬಾರಿ ಜೆಡಿಎಸ್ ಪಕ್ಷ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
Breaking News
- *ದಕ್ಷಿಣ ಕೊಡಗಿನಲ್ಲಿ ಸಣ್ಣ ಕೈಗಾರಿಕಾ ಪ್ರದೇಶಾಭಿವೃದ್ಧಿ : 50 ಏಕರೆ ಭೂಮಿ ಮಂಜೂರಾತಿಗೆ ಆಪ್ ಮನವಿ*
- *ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜು : 8ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ*
- *ರಾಷ್ಟ್ರೀಯ ಜೂನಿಯರ್ ಹಾಕಿ ತಂಡಕ್ಕೆ ಕೊಡಗಿನ ವಿಶ್ವಜಿತ್ ಹಾಗೂ ಪೂಜಿತ್ ಆಯ್ಕೆ*
- *ರಾಷ್ಟ್ರೀಯ ಜೂನಿಯರ್ ಹಾಕಿ ತಂಡಕ್ಕೆ ದೃಶ್ಯ ಅಚ್ಚಪ್ಪ ಆಯ್ಕೆ*
- *ಹೆಬ್ಬಾಲೆ : ಜ.23 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
- *ಶ್ರೀ ರಾಮ ಜನ್ಮಭೂಮಿ ಸೇವಾ ಸಮಿತಿಯಿಂದ ಮಡಿಕೇರಿಯಲ್ಲಿ ಅನ್ನದಾನ*
- *ಜ.26 ರಂದು ಲೋಕಾಪ೯ಣೆಯಾಗಲಿದೆ ಮತ್ತೆ ವಸಂತ*
- *ಹೆಗ್ಗಳ ಗ್ರಾಮದ ಸರ್ಕಾರಿ ಶಾಲೆಗೆ ಕಂಪ್ಯೂಟರ್ ಕೊಡುಗೆ*
- *ಎನ್.ಯು.ನಾಚಪ್ಪ ವಿರುದ್ಧ ಪ್ರಕರಣ : ಮಡಿಕೇರಿ ಕೊಡವ ಸಮಾಜ ಖಂಡನೆ*
- *ವಿರಕ್ತ ಮಠದ ಶ್ರೀ ಬಸವಪ್ರಭು ಸ್ವಾಮೀಜಿಗೆ ಪಿ.ಹೆಚ್.ಡಿ ಪದವಿ*