ಮಡಿಕೇರಿ ಮಾ.9 : ಸೋಮವಾರಪೇಟೆ ಪಟ್ಟಣದ ಕುರಿ, ಕೋಳಿ ಮತ್ತು ಹಸಿ ಮೀನು ಮಾರುಕಟ್ಟೆ ಅವ್ಯವಸ್ಥೆಗಳಿಂದ ಕೂಡಿದೆ ಎಂದು ಸ್ಥಳೀಯ ವರ್ತಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದುಸ್ಥಿತಿಯಲ್ಲಿರುವ ಮಾರುಕಟ್ಟೆಗೆ ಹರಾಜು ಪ್ರಕ್ರಿಯೆ ನಡೆಸಬಾರದು ಎಂದು ಒತ್ತಾಯಿಸಿದ್ದಾರೆ.
ಇಂದು ಪಟ್ಟಣ ಪಂಚಾಯ್ತಿ ಸಭಾಂಗಣದಲ್ಲಿ ಪಂಚಾಯ್ತಿ ಅಧ್ಯಕ್ಷ ಚಂದ್ರು ಅವರ ಅಧ್ಯಕ್ಷತೆ ಯಲ್ಲಿ ನಡೆದ 2023-24ನೇ ಸಾಲಿನ ವಿವಿಧ ಮಾರುಕಟ್ಟೆ ಹರಾಜು ಪ್ರಕ್ರಿಯೆ ಸಂದರ್ಭ ವರ್ತಕರು ಅವ್ಯವಸ್ಥೆಗಳ ವಿರುದ್ಧ ಧ್ವನಿ ಎತ್ತಿದರು.
ಮಾಂಸದ ಮಾರುಕಟ್ಟೆ ಕಟ್ಟಡ ಸೋರುತ್ತಿದೆ, ಸಮರ್ಪಕವಾಗಿ ನೀರು ಹರಿಯುವುದಿಲ್ಲ, ತ್ಯಾಜ್ಯ ಹಾಕಲು ಸೂಕ್ತ ಜಾಗವಿಲ್ಲ. ಸಮಸ್ಯೆ ಕುರಿತು ಪಂಚಾಯ್ತಿ ಆಡಳಿತದ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಆರೋಪಿಸಿದರು.
ನಾವು ಲಕ್ಷಗಟ್ಟಲೆ ಹರಾಜು ಕರೆದು ವ್ಯಾಪಾರ ಮಾಡುತ್ತೇವೆ, ಆದರೆ ಬೇರೆಯವರು ಹೊರ ಜಿಲ್ಲೆಯಿಂದ ಬಂದು ಕೋಳಿ ವ್ಯಾಪಾರ ಮಾಡುತ್ತಾರೆ, ಮೀನುಗಾರರು ರಸ್ತೆ ಪಕ್ಕದಲ್ಲಿ ವ್ಯಾಪಾರ ಮಾಡುತ್ತಾರೆ. ಇದರಿಂದಾಗಿ ವ್ಯಾಪಾರದಲ್ಲಿ ನಷ್ಟ ಅನುಭವಿಸುವಂತ್ತಾಗಿದೆ. ಮತ್ತೊಂದೆಡೆ ಪಕ್ಕದ ಚೌಡ್ಲೂ ಪಂಚಾಯ್ತಿ ವ್ಯಾಪ್ತಿಯಲ್ಲಿ ಕಡಿಮೆ ದರಕ್ಕೆ ಮಳಿಗೆ ಪಡೆದು ವ್ಯಾಪಾರ ನಡೆಸುತ್ತಿದ್ದಾರೆ. ಆದ್ದರಿಂದ ನಾವು ಅವರೊಡನೆ ಸ್ಪರ್ಧಾತ್ಮಕವಾಗಿ ವ್ಯಾಪಾರ ನಡೆಸಲು ಸಾಧ್ಯವಾಗುತ್ತಿಲ್ಲ ಎಂದರು.
ಈ ಸಂದರ್ಭ ಮಾತನಾಡಿದ ಅಧ್ಯಕ್ಷ ಚಂದ್ರು ಹಾಗೂ ಮುಖ್ಯಾಧಿಕಾರಿ ನಾಚಪ್ಪ ಅವರು ಮುಂದಿನ ಮೂರು, ನಾಲ್ಕು ತಿಂಗಳಲ್ಲಿ ಕಟ್ಟಡ ದುರಸ್ತಿಪಡಿಸಲಾಗುವುದು. ರಸ್ತೆ ಬದಿಯಲ್ಲಿ ಮೀನು ವ್ಯಾಪಾರ ಮಾಡುತ್ತಿರುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಪ.ಪಂ ಉಪಾಧ್ಯಕ್ಷ ಸಂಜೀವ, ಸ್ಥಾಯಿ ಸಮಿತಿ ಅಧ್ಯಕ್ಷೆ ಜಯಂತಿ, ಸದಸ್ಯರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.
Breaking News
- *ದಕ್ಷಿಣ ಕೊಡಗಿನಲ್ಲಿ ಸಣ್ಣ ಕೈಗಾರಿಕಾ ಪ್ರದೇಶಾಭಿವೃದ್ಧಿ : 50 ಏಕರೆ ಭೂಮಿ ಮಂಜೂರಾತಿಗೆ ಆಪ್ ಮನವಿ*
- *ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜು : 8ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ*
- *ರಾಷ್ಟ್ರೀಯ ಜೂನಿಯರ್ ಹಾಕಿ ತಂಡಕ್ಕೆ ಕೊಡಗಿನ ವಿಶ್ವಜಿತ್ ಹಾಗೂ ಪೂಜಿತ್ ಆಯ್ಕೆ*
- *ರಾಷ್ಟ್ರೀಯ ಜೂನಿಯರ್ ಹಾಕಿ ತಂಡಕ್ಕೆ ದೃಶ್ಯ ಅಚ್ಚಪ್ಪ ಆಯ್ಕೆ*
- *ಹೆಬ್ಬಾಲೆ : ಜ.23 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
- *ಶ್ರೀ ರಾಮ ಜನ್ಮಭೂಮಿ ಸೇವಾ ಸಮಿತಿಯಿಂದ ಮಡಿಕೇರಿಯಲ್ಲಿ ಅನ್ನದಾನ*
- *ಜ.26 ರಂದು ಲೋಕಾಪ೯ಣೆಯಾಗಲಿದೆ ಮತ್ತೆ ವಸಂತ*
- *ಹೆಗ್ಗಳ ಗ್ರಾಮದ ಸರ್ಕಾರಿ ಶಾಲೆಗೆ ಕಂಪ್ಯೂಟರ್ ಕೊಡುಗೆ*
- *ಎನ್.ಯು.ನಾಚಪ್ಪ ವಿರುದ್ಧ ಪ್ರಕರಣ : ಮಡಿಕೇರಿ ಕೊಡವ ಸಮಾಜ ಖಂಡನೆ*
- *ವಿರಕ್ತ ಮಠದ ಶ್ರೀ ಬಸವಪ್ರಭು ಸ್ವಾಮೀಜಿಗೆ ಪಿ.ಹೆಚ್.ಡಿ ಪದವಿ*