ಸುಂಟಿಕೊಪ್ಪ,ಮಾ.9 : ಭಾರತ ಮತ್ತು ಬಾಂಗ್ಲಾದೇಶ ನಡುವಿನ ಸೆಸ್ಟೋಬಾಲ್ ಟೂರ್ನಿಯಲ್ಲಿ ಭಾರತೀಯ ಬಾಲಕರ ತಂಡವು ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡರೆ, ಬಾಲಕಿಯರ ತಂಡವು ದ್ವಿತೀಯ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತು.
ಮಾ.3 ರಿಂದ 5 ರವರೆಗೆ ಮಹಾರಾಷ್ಟ್ರದ ಜವಾಹರ್ ಲಾಲ್ ನೆಹರೂ ಕ್ರೀಡಾಂಗಣದಲ್ಲಿ ನಡೆಡ ಅಂತರಾಷ್ಟ್ರೀಯ ಮಟ್ಟದ ಭಾರತ ಮತ್ತು ಬಾಂಗ್ಲಾದೇಶ ತಂಡಗಳ ನಡುವೆ ನಡೆದ ಮೂರು ಲೀಗ್ ಪಂದ್ಯದಲ್ಲಿ ಉತ್ತಮವಾಗಿ ಸೆಣಸಾಗಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.
ಸುಂಟಿಕೊಪ್ಪದ ಶಾಹಿಲ್ ಉಸ್ಮಾನ್ ನಾಯಕತ್ವದ ಭಾರತದ ಬಾಲಕರ ತಂಡವು ಫೈನಲ್ ಪಂದ್ಯದಲ್ಲಿ 38-8 ಅಂಕಗಳ ಭರ್ಜರಿ ಜಯವನ್ನು ಸಾಧಿಸಿತು.
ಅನ್ವಿತ ನಾಯಕತ್ವದ ಭಾರತೀಯ ಬಾಲಕಿಯರ ತಂಡವು ಫೈನಲ್ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ ಉತ್ತಮ ಪೈಪೋಟಿ ನೀಡಿದರೂ ಕೊನೆಯ ಹಂತದಲ್ಲಿ 18-20 ಅಂಕಗಳಿಂದ ಸೋಲನ್ನು ಒಪ್ಪಿಕೊಂಡಿತು.
ಉತ್ತಮ ಶೂಟರ್ ಪ್ರಶಸ್ತಿಯನ್ನು ಭಾರತ ತಂಡದ ನಾಯಕ ಸುಂಟಿಕೊಪ್ಪದ ಶಾಹೀಲ್ ಉಸ್ಮಾನ್ ಪಡೆದುಕೊಂಡರು.
ಸುಂಟಿಕೊಪ್ಪದ ಶಾಹಿಲ್ ಉಸ್ಮಾನ್ ಮಡಿಕೇರಿ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಬಿಬಿಎ ವಿದ್ಯಾರ್ಥಿಯಾಗಿದ್ದಾನೆ.









