ಮಡಿಕೇರಿ ಮಾ.9 : ಪ್ರಸಕ್ತ (2022-23) ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ/ ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ “ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ” ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಮಾರ್ಚ್, 15 ರವರೆಗೆ ಕಾಲಾವಕಾಶ ನೀಡಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಎನ್.ಮಂಜುನಾಥ್ ಅವರು ತಿಳಿಸಿದ್ದಾರೆ.
ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾದ ವೆಬ್‍ಸೈಟ್‍ವಿಳಾಸ: https://ssp.postmatric.karnataka.gov.in ಕಾರ್ಯಕ್ರಮಗಳ ವಿವರ, ಸೌಲಭ್ಯ ಪಡೆಯಲು ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ಕಾರ್ಯಕ್ರಮಗಳ ಸರ್ಕಾರಿ ಆದೇಶಗಳಿಗಾಗಿ ಇಲಾಖಾ ವೆಬ್‍ಸೈಟ್ https://bcwd.karnataka.gov.in ನ್ನು ನೋಡಬಹುದು. ಹಾಗೂ ಇಲಾಖಾ ಸಹಾಯವಾಣಿ ಸಂಖ್ಯೆ: 8050770005, ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದ ಸಹಾಯವಾಣಿ ಇಮೇಲ್: postmatrichelp@karnataka.gov.in, ದೂರವಾಣಿ ಸಂಖ್ಯೆ:080-35254757 ನ್ನು ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಎನ್.ಮಂಜುನಾಥ್ ಅವರು ತಿಳಿಸಿದ್ದಾರೆ.
Breaking News
- *ರಾಜಾಸೀಟು ಫಲಪುಷ್ಪ ಪ್ರದರ್ಶನದಲ್ಲಿ 22 ಅಡಿ ಎತ್ತರದ ಶ್ರೀ ಓಂಕಾರೇಶ್ವರ ದೇವಸ್ಥಾನದ ಕಲಾಕೃತಿ ಮತ್ತು 20 ಸಾವಿರ ವಿವಿಧ ಜಾತಿಯ ಹೂವುಗಳ ಆಕರ್ಷಣೆ*
- *ರಾಷ್ಟ್ರೀಯ ಹಾಕಿ ತಂಡಕ್ಕೆ ಪಿ.ಯು.ತನುಷ್ ಆಯ್ಕೆ*
- *ಹೆಬ್ಬಾಲೆ ಸರ್ಕಾರಿ ಶಾಲೆಯಲ್ಲಿ ಗಮನ ಸೆಳೆದ ಇಂಗ್ಲಿಷ್ ಭಾಷಾ ಮೇಳ*
- *”ಶ್ರೀಮತಿ ವಿಜಯ ವಿಷ್ಣು ಭಟ್ ದತ್ತಿ ಪ್ರಶಸ್ತಿ”ಗೆ ಕೃತಿಗಳ ಆಹ್ವಾನ*
- *ಮಾವಿನಹಳ್ಳ ಹಾಡಿ ಮತ್ತು ಕಟ್ಟೆ ಹಾಡಿಯ ಅರಣ್ಯ ಹಕ್ಕು ಗ್ರಾಮಸಭೆ*
- *ಬಾಳೆಲೆ : ಮಣ್ಣು ಪರೀಕ್ಷೆ ಮತ್ತು ಸಸ್ಯ ಪೋಷಕಾಂಶಗಳ ನಿರ್ವಹಣೆ ಕುರಿತು ಮಾಹಿತಿ ಕಾರ್ಯಕ್ರಮ*
- *ಜ.26 ರಂದು ಗಣರಾಜ್ಯೋತ್ಸವ ದಿನಾಚರಣೆ*
- *ದಕ್ಷಿಣ ಕೊಡಗಿನಲ್ಲಿ ಸಣ್ಣ ಕೈಗಾರಿಕಾ ಪ್ರದೇಶಾಭಿವೃದ್ಧಿ : 50 ಏಕರೆ ಭೂಮಿ ಮಂಜೂರಾತಿಗೆ ಆಪ್ ಮನವಿ*
- *ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜು : 8ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ*
- *ರಾಷ್ಟ್ರೀಯ ಜೂನಿಯರ್ ಹಾಕಿ ತಂಡಕ್ಕೆ ಕೊಡಗಿನ ವಿಶ್ವಜಿತ್ ಹಾಗೂ ಪೂಜಿತ್ ಆಯ್ಕೆ*