ನಾಪೋಕ್ಲು ಮಾ.10 : ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಮಹಿಳೆಯರನ್ನು ಮಹಿಳಾ ದಿನಾಚರಣೆಯ ಪ್ರಯುಕ್ತ ರಾಜ್ಯ ಸರ್ಕಾರದ ವತಿಯಿಂದ ಬೆಂಗಳೂರು ರವೀಂದ್ರ ಕಲಾ ಕ್ಷೇತ್ರದಲ್ಲಿ ಸನ್ಮಾನಿಸಲಾಯಿತು.
ಸಮೀಪದ ಹೊದ್ದೂರು ಗ್ರಾಮದ ಕಬ್ಬಡಕೇರಿ ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ತಂಸೀನಾ ಬಾನು ಸಾಧಕ ಮಹಿಳೆಯರಲ್ಲಿ ಒಬ್ಬರು. ಅಂಗನವಾಡಿ ಕೇಂದ್ರದ ನಿರ್ವಹಣೆ, ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಇಲಾಖೆಯಿಂದ ಸಿಗುವ ಸೌಲಭ್ಯ, ಮಾದರಿ ಶಿಕ್ಷಣ ಭೋದನೆಯಲ್ಲಿನ ಮುತುವರ್ಜಿ, ಮಾತೃವಂದನಾ -ಭಾಗ್ಯಲಕ್ಷ್ಮಿ ಯೋಜನೆಯ ಸೌಲಭ್ಯಗಳನ್ನು ಫಲಾನುಭವಿಗಳಿಗೆ ದೊರಕಿಸಿಕೊಡುವಲ್ಲಿನ ನಿರಂತರ ಪ್ರಯತ್ನ, ಸಮಗ್ರ ಶಿಶು ಅಭಿವೃದ್ಧಿ ಯೋಜನೆಯ ಸೌಲಭ್ಯಗಳನ್ನು ಫಲಾನುಭವಿಗಳಿಗೆ ಸಮರ್ಪಕವಾಗಿ ಒದಗಿಸಲು ತೆಗೆದು ಕೊಂಡಿರುವ ಕ್ರಮಗಳನ್ನು ಗುರುತಿಸಿ ರಾಜ್ಯದ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಅತ್ಯುತ್ತಮ ಸೇವೆ ಸಲ್ಲಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆಗೆ ಪ್ರಶಸ್ತಿ ನೀಡಿ ಗೌರವಿಸಿದರು.
ವರದಿ : ದುಗ್ಗಳ ಸದಾನಂದ.