ಮೈಸೂರು : ಕೆಪಿಸಿಸಿ ಕಾರ್ಯಾಧ್ಯಕ್ಷ, ಚಾಮರಾನಗರದ ಮಾಜಿ ಸಂಸದ ಆರ್.ಧ್ರುವನಾರಾಯಣ (62) ವಿಧಿವಶರಾಗಿದ್ದಾರೆ.
ಮೈಸೂರಿನ ವಿಜಯನಗರದಲ್ಲಿ ವಾಸವಾಗಿದ್ದ ಅವರು ಹೃದಯಾಘತದಿಂದ ಕೊನೆಯುಸಿರೆಳೆದಿದ್ದಾರೆ.
ಇಂದು ಬೆಳಿಗ್ಗೆ ಮನೆಯಲ್ಲಿ ಎದೆ ನೋವು ಕಾಣಿಸಿಕೊಂಡಿದ್ದು ತಕ್ಷಣ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾದರೂ, ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ ಎಂದು ಆಸ್ಪತ್ರೆಯ ವೈದ್ಯರು ಖಚಿತಪಡಿಸಿದ್ದಾರೆ.
ಧ್ರುವನಾರಾಯಣ ಪತ್ನಿ ಮತ್ತು ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ.