ಮಡಿಕೇರಿ ಮಾ.11 : ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಬಿಜೆಪಿ ‘ವಿಜಯ ಸಂಕಲ್ಪ ಯಾತ್ರೆ’ ನಡೆಯಿತು.
ಪಕ್ಷದ ಮುಖಂಡರಾದ ಕೆ.ಎಸ್.ಈಶ್ವರಪ್ಪ, ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ, ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಬಿನ್ ದೇವಯ್ಯ, ಶಾಸಕರುಗಳಾದ ಎಂ.ಪಿ.ಅಪ್ಪಚ್ಚು ರಂಜನ್, ಕೆ.ಜಿ.ಬೋಪಯ್ಯ ಅವರನ್ನು ಒಳಗೊಂಡ ವಿಜಯಸಂಕಲ್ಪ ರಥದ ಮೆರವಣಿಗೆ, ನಗರದ ಮಾರುಕಟ್ಟೆ ಬಳಿಯ ಚೌಡೇಶ್ವರಿ ದೇವಸ್ಥಾನದಿಂದ ಜನರಲ್ ಕೆ.ಎಸ್.ತಿಮ್ಮಯ್ಯ ವೃತ್ತದವರೆಗೆ ನಡೆಯಿತು.
ಜನರಲ್ ಕೆ.ಎಸ್.ತಿಮ್ಮಯ್ಯ ವೃತ್ತದಲ್ಲಿ ಕಾರ್ಯಕರ್ತರನ್ನುದ್ದೇಶಿಸಿ, ಮಾತನಾಡಿದ ಪಕ್ಷದ ಮುಖಂಡ ಕೆ.ಎಸ್.ಈಶ್ವರಪ್ಪ, ಇಲ್ಲಿಯವರೆಗೆ ರಾಜ್ಯದಲ್ಲಿ ಬಿಜೆಪಿ ಪೂರ್ಣ ಬಹುಮತದ ಸರ್ಕಾರ ರಚಿಸಲು ಸಾಧ್ಯವಾಗಿಲ್ಲ. ಈ ಬಾರಿ 150 ಸ್ಥಾನಗಳನ್ನು ಪಡೆದು ಪುರ್ಣಬಹುಮತದೊಂದಿಗೆ ಸರ್ಕಾರ ರಚನೆಗೆ ಜನತೆ ಬಿಜೆಪಿಯನ್ನು ಆಶೀರ್ವದಿಸುವಂತೆ ಮನವಿ ಮಾಡಿದರು.
ಕಾಂಗ್ರೆಸ್ ಪಕ್ಷದ ರಾಹುಲ್ ಗಾಂಧಿ ಅವರು ಭಾರತ್ ಜೋಡೋ ಯಾತ್ರೆ ಮಾಡಿದ್ದಾರೆ. ಅವರು ಈ ಹಿಂದೆ ಎಲ್ಲೆಲ್ಲಿ ಇಂತಹ ಯಾತ್ರೆ ಮಾಡಿದ್ದಾರೋ ಅಲ್ಲೆಲ್ಲ ಕಾಂಗ್ರೆಸ್ ಪರಾಭವಗೊಂಡಿದೆ. ಉತ್ತರಪ್ರದೇಶದಲ್ಲಿ ಸೋತ ಕಾಂಗ್ರೆಸ್, ಈಶಾನ್ಯ ರಾಜ್ಯಗಳ ಚುನಾವಣೆಯಲ್ಲೂ ಪರಾಭವಗೊಂಡಿದೆ. ಹೀಗಿರುವಾಗ ಕಾಂಗ್ರೆಸ್ ಪಕ್ಷ ಎಲ್ಲಿದೆಯೆಂದು ಗೇಲಿ ಮಾಡಿದರು.
ಅಧಿಕಾರವಿಲ್ಲದೆ ಇರುವ ಹಂತದಲ್ಲು ಪ್ರಸ್ತುತ ಕಾಂಗ್ರೆಸ್ ಪಕ್ಷದ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ನಡುವೆ ಮುಖ್ಯಮಂತ್ರಿ ಸ್ಥಾನಕ್ಕೆ ಪೈಪೋಟಿ ನಡೆಯುತ್ತಿದೆ. ಬಿಜೆಪಿ ಪಕ್ಷ ಜಾತಿ ರಾಜಕಾರಣಕ್ಕೆ ಬದಲಾಗಿ ರಾಷ್ಟ್ರೀಯ ಚಿಂತನೆ ಮತ್ತು ಅಭಿವೃದ್ಧಿಯನ್ನಷ್ಟೆ ಮುಖ್ಯವಾಗಿರಿಸಿಕೊಂಡು ಜನತೆಯ ಮುಂದೆ ಬರುತ್ತಿರುವುದಾಗಿ ತಿಳಿಸಿದರು.
ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಮಾತನಾಡಿ, ರಾಜ್ಯದ ಬಿಜೆಪಿ ಸರ್ಕಾರ ಕೊಡಗಿನ ಎಲ್ಲಾ ಸಮಸ್ಯೆಗಳಿಗೆ ಸೂಕ್ತ ಸ್ಪಂದನ ನೀಡುತ್ತಾ ಬಂದಿದೆ. ವೀರ ಯೋಧರನ್ನು ರಾಷ್ಟ್ರಕ್ಕೆ ನೀಡುತ್ತಾ ಬಂದಿರುವ ಕೊಡಗಿನ ಋಣ ತೀರಿಸುವ ಪ್ರಯತ್ನವನ್ನು ಮಾಡಿದೆಯೆಂದು ಹೇಳಿದರು.
ವಿರೋಧ ಪಕ್ಷವಾದ ಕಾಂಗ್ರೆಸ್‌ನoತೆ ಅದನ್ನು ಕೊಡುತ್ತೇವೆ, ಇದನ್ನು ಕೊಡುತ್ತೇವೆ ಎನ್ನುವ ಭರವಸೆಯ ರಾಜಕಾರಣದ ಬದಲಾಗಿ ಬಿಜೆಪಿ ವಿಶ್ವಾಸದ ರಾಜಕಾರಣವನ್ನು ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಕೊಡಗಿನಲ್ಲಿ ವಿರೋಧ ಪಕ್ಷವೇ ಇಲ್ಲದ ರೀತಿಯಲ್ಲಿ ಬಿಜೆಪಿ ಬೆಳೆದಿದೆಯೆಂದು ಸಂತಸ ವ್ಯಕ್ತಪಡಿಸಿದರು.
ಶಾಸಕರುಗಳಾದ ಕೆ.ಜಿ.ಬೋಪಯ್ಯ, ಎಂ.ಪಿ.ಅಪ್ಪಚ್ಚುರoಜನ್, ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಬಿನ್ ದೇವಯ್ಯ, ಎಂಎಲ್‌ಸಿ ಸುಜಾ ಕುಶಾಲಪ್ಪ, ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಬಿನ್ ದೇವಯ್ಯ, ವಿರಾಜಪೇಟೆ ಕ್ಷೇತ್ರದ ಉಸ್ತುವಾರಿ ಪ್ರತಾಪ ಸಿಂಹ ನಾಯಕ್, ಕರಾವಳಿ ಪ್ರಾಧಿಕಾರದ ಅಧ್ಯಕ್ಷ ತಿಮ್ಮಯ್ಯ ಶೆಟ್ಟರು, ಕರ್ನಾಟಕ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ, ಮಾಜಿ ಎಂಎಲ್‌ಸಿ ಎಸ್.ಜಿ. ಮೇದಪ್ಪ, ಮಡಿಕೇರಿ ನಗರಸಭಾ ಅಧ್ಯಕ್ಷೆ ಅನಿತಾ ಪೂವಯ್ಯ, ರಾಜ್ಯ ಸಂಚಾಲಕ ಉದಯ ಕುಮಾರ್ ಶೆಟ್ಟರು, ಪಕ್ಷದ ಪ್ರಮುಖರಾದ ರಾಜೇಂದ್ರ‍್ರ, ಮಹೇಶ್ ಜೈನಿ ಮೊದಲಾದವರಿದ್ದರು.
Breaking News
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*
- *ದೇಶ ದ್ರೋಹದ ಪ್ರಕರಣ ದಾಖಲಿಸಲು ಕೆ.ಜಿ.ಬೋಪಯ್ಯ ಆಗ್ರಹ*
- *ಬಿಜೆಪಿ, ಜೆಡಿಎಸ್ ಗೆ ಜನ ತಕ್ಕ ಪಾಠ ಕಲಿಸಿದ್ದಾರೆ : ಎಂ.ಎ.ಕಲೀಲ್ ಬಾಷ*
- *ಕೆವಿ ಎನ್ಸಿಸಿ ಕೆಡೆಟ್ ಗಳಿಂದ ಕಾಯ೯ಪ್ಪ ಪ್ರತಿಮೆ ಸ್ವಚ್ಛತೆ*