ನಾಪೋಕ್ಲು ಮಾ.11 : ಸರಳ ಸಜ್ಜನಿಕೆಯ ರಾಜಕಾರಣಿ ಕೆ.ಪಿ.ಸಿ.ಸಿ ಕಾರ್ಯಾಧ್ಯಕ್ಷ, ಚಾಮರಾಜನಗರ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಆರ್. ದ್ರುವನಾರಾಯಣ ನಿಧನಕ್ಕೆ ನಾಪೋಕ್ಲು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಪರವಂಡ ಸಿರಾಜ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಆರ್.ದ್ರುವನಾರಾಯಣ್ ಅವರು ಕೊಡಗು ಜಿಲ್ಲೆಯೊಂದಿಗೆ ನಿಕಟ ಸಂಬಂಧ ಹೊಂದಿರುವ ಧೀಮಂತ ನಾಯಕ ಜಿಲ್ಲೆಯಲ್ಲಿ ನಡೆಯುವ ಪಕ್ಷದ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತಾ ಕಾರ್ಯಕರ್ತರಿಗೆ ಧೈರ್ಯ ತುಂಬುವಂತಹ ಕೆಲಸ ಮಾಡುತ್ತಿದ್ದರು. ಒಬ್ಬ ಜಾತ್ಯತೀತ ನಾಯಕನನ್ನು ಇಂದು ಕಳೆದು ಕೊಂಡಿದ್ದು ಕೊಡಗು ಜಿಲ್ಲೆಗೆ ಮಾತ್ರವಲ್ಲ ದೇಶದ ಕಾಂಗ್ರೆಸ್ ಪಕ್ಷಕ್ಕೂ ದೊಡ್ಡ ನಷ್ಟ ಉಂಟಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಕಾಂಗ್ರೆಸ್ ಪಕ್ಷದ ವಿವಿಧ ಹುದ್ದೆಗಳನ್ನು ಯಶಸ್ವಿಯಾಗಿ ನಿರ್ವಹಿಸಿ, ಚಾಮರಾಜ ನಗರದ ಜಿಲ್ಲೆಯಿಂದ ಎರಡು ಬಾರಿ ಶಾಸಕರಾಗಿ, ಲೋಕಸಭಾ ಸದಸ್ಯರಾಗಿ ಮತ್ತು ಕೆ.ಪಿ.ಸಿ.ಸಿಯ ಕಾರ್ಯಾಧ್ಯಕ್ಷರಾಗಿ ಸೇವೆ ಸಲ್ಲಿಸಿರುವ ಆರ್.ಧ್ರುವನಾರಾಯಣ್ ಅವರ ಅಕಾಲಿಕ ನಿಧನವು ಕಾಂಗ್ರೇಸ್ ಪಕ್ಷಕ್ಕೆ ಅಘಾತವನ್ನುಂಟುಮಾಡಿದ್ದು, ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ. ಭಗವಂತನು ಅವರ ಆತ್ಮಕ್ಕೆ ಚಿರಶಾಂತಿಯನ್ನು ನೀಡಲಿ ಮತ್ತು ಕುಟುಂಬ ವರ್ಗದವರಿಗೆ, ಹಿತೈಷಿಗಳಿಗೆ ಪಕ್ಷದ ಕಾರ್ಯಕರ್ತರಿಗೆ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದರು.
ವರದಿ :ಝಕರಿಯ ನಾಪೋಕ್ಲು