ಮಡಿಕೇರಿ ಮಾ.11 : ಕೆಪಿಸಿಸಿ ಕಾರ್ಯಾಧ್ಯಕ್ಷ, ಮಾಜಿ ಸಂಸದ ಹಾಗೂ ಪಕ್ಷದ ಕೊಡಗು ಜಿಲ್ಲಾ ಉಸ್ತುವಾರಿ ಆರ್.ಧ್ರುವ ನಾರಾಯಣ್ ಅವರ ನಿಧನಕ್ಕೆ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಎಂ.ಎ.ಕಲೀಲ್ ಬಾಷ ಸಂತಾಪ ಸೂಚಿಸಿದ್ದಾರೆ.
ಅತ್ಯಂತ ಸರಳ ಸಜ್ಜನಿಕೆಯ ವ್ಯಕ್ತಿತ್ವದ ಧ್ರುವ ನಾರಾಯಣ್ ಅವರು ಯುವ ರಾಜಕಾರಣಿಗಳಿಗೆ ಉತ್ತಮ ಮಾರ್ಗದರ್ಶಕರಾಗಿದ್ದರು. ಪ್ರತಿಯೊಬ್ಬರನ್ನು ಪ್ರೀತಿಯಿಂದ ಕಾಣುತ್ತಿದ್ದ ಅವರು ಪಕ್ಷ ಸಂಘಟನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅಭಿವೃದ್ಧಿ ಪರ ಚಿಂತನೆ ಮತ್ತು ಸೌಹಾರ್ದತೆಯ ಪರಿಕಲ್ಪನೆಗೆ ಮಾದರಿಯಾಗಿದ್ದ ಧ್ರುವ ನಾರಾಯಣ್ ಅವರ ಅಗಲಿಕೆ ಅತೀವ ದು:ಖವನ್ನು ತಂದಿದೆ. ವೈಯುಕ್ತಿವಾಗಿ ಮತ್ತು ಕಾಂಗ್ರೆಸ್ ಪಕ್ಷಕ್ಕೆ ತುಂಬಲಾರದ ನಷ್ಟ ಉಂಟಾಗಿದೆ ಎಂದು ಕಲೀಲ್ ಬಾಷ ಬೇಸರ ವ್ಯಕ್ತಪಡಿಸಿದ್ದಾರೆ.








