ಮಡಿಕೇರಿ ಮಾ.11 : ವಿಧಾನಸಭಾ ಚುನವಾಣೆಗೆ ವಿರಾಜಪೇಟೆ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದೇನೆ ಎಂದು ಕಕ್ಕಬ್ಬೆ ಗ್ರಾ.ಪಂ ಮಾಜಿ ಸದಸ್ಯ ಹಾಗೂ ಅಲ್ಪಸಂಖ್ಯಾತರ ಹಿರಿಯ ಮುಖಂಡ ಎಂ.ಎ.ನಾಸಿರ್ ಮಕ್ಕಿ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂದಿನ ಸಾಮಾಜಿಕ ಪರಿಸ್ಥಿತಿ ಹದಗೆಡಲು ರಾಜಕೀಯ ಪಕ್ಷಗಳ ಕೊಡುಗೆ ಬಹಳಷ್ಟಿದೆ. ಯಾವುದೇ ರಾಜಕೀಯ ಪಕ್ಷಗಳು ಜನಪರ ತತ್ವ ಸಿದ್ಧಾಂತಗಳಡಿ ಕಾರ್ಯ ನಿರ್ವಹಿಸುತ್ತಿಲ್ಲ. ಕೇವಲ ಮತಬ್ಯಾಂಕ್ ಸೃಷ್ಟಿಯಷ್ಟೇ ಅವುಗಳ ಮೂಲ ಉದ್ದೇಶವಾಗಿರುವುದರಿಂದ ಜನರ ವಿಶ್ವಾಸವನ್ನು ಕಳೆದುಕೊಳ್ಳುತ್ತಿವೆ. ಈ ಕಾರಣದಿಂದ ಜನರಿಗೆ ನ್ಯಾಯ ದೊರಕಿಸಿಕೊಡಬೇಕೆನ್ನುವ ಗುರಿಯೊಂದಿಗೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ವಿರಾಜಪೇಟೆ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಸ್ಪಷ್ಟಪಡಿಸಿದರು.
ನನ್ನ ಸ್ಪರ್ಧೆ ಖಚಿತವಾಗಿದ್ದು, ಕ್ಷೇತ್ರದಾದ್ಯಂತ ಜನರ ಒತ್ತಡ ಮತ್ತು ಬೆಂಬಲವಿದೆ. ಸ್ಪರ್ಧೆಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯುವಂತೆ ಜನರೇ ಒತ್ತಾಯಿಸುತ್ತಿದ್ದಾರೆ. ಇದರಿಂದಾಗಿ ಸ್ಪರ್ಧಿಸಲು ಮನಸ್ಸು ಮಾಡಿದ್ದು, ಅಗತ್ಯ ಸಿದ್ಧತೆಗಳನ್ನು ಆರಂಭಿಸಿದ್ದೇನೆ. ರಾಜಕೀಯ ಪಕ್ಷಗಳ ನಡೆಯಿಂದ ಬೇಸತ್ತಿರುವ ಕ್ಷೇತ್ರದ ಜನತೆಗೆ ನನ್ನ ಸ್ಪರ್ಧೆ ಉತ್ತಮ ಅವಕಾಶವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕಳೆದ 30ವರ್ಷಗಳಿಂದ ಸಾರ್ವಜನಿಕ ಬದುಕಿನಲ್ಲಿ ಸಕ್ರಿಯವಾಗಿದ್ದ ನಾನು ರಾಜಕೀಯ ಪಕ್ಷಗಳ ನಡೆಯಿಂದ ಬೇಸತ್ತು ಕಳೆದ 2ವರ್ಷಗಳಿಂದ ದೂರ ಉಳಿದಿದ್ದೇನೆ. ಗ್ರಾ.ಪಂ ಸದಸ್ಯನಾಗಿ ಜನರ ಸೇವೆ ಮಾಡಿದ ಅನುಭವ ತಮಗಿದ್ದು, ಕ್ಷೇತ್ರದ ಸಮಗ್ರ ಅಭಿವೃದ್ಧಿ ಹಾಗೂ ಕೋಮುವಾದ-ಭ್ರಷ್ಟಾಚಾರ ಮುಕ್ತ ಕೊಡಗಿಗಾಗಿ ಜನರ ಧ್ವನಿಯಾಗಿ ಕೆಲಸ ಮಾಡಲು ಸಿದ್ಧನಿದ್ದೇನೆ. ಈಗಾಗಲೇ ಕ್ಷೇತ್ರದ ಪ್ರಮುಖರನ್ನು ಹಾಗೂ ಕಾರ್ಯಕರ್ತರನ್ನು ಭೇಟಿಯಾಗಿ ವಿಶ್ವಾಸಕ್ಕೆ ತೆಗೆದುಕೊಂಡಿದ್ದೇನೆ ಎಂದು ಎಂ.ಎ.ನಾಸಿರ್ ಮಕ್ಕಿ ತಿಳಿಸಿದರು.
ಮಾಹಿತಿ ಹಕ್ಕು ಕಾರ್ಯಕರ್ತ ಹಾರಿಸ್ ನಾಪೋಕ್ಲು ಮಾತನಾಡಿ, ಅಲ್ಪಸಂಖ್ಯಾತರನ್ನು ಮತಬ್ಯಾಂಕ್ ಆಗಿ ಬಳಸಿಕೊಳ್ಳುತ್ತಿದ್ದಾರೆ ಹೊರತು ನಮ್ಮ ಪರ ಧ್ವನಿ ಎತ್ತಲು ಯಾರೂ ಇಲ್ಲ. ಜನಪ್ರತಿನಿಧಿಗಳು ಜನಾಂಗಗಳ ನಡುವೆ ವಿಷ ಬೀಜ ಬಿತ್ತುತ್ತಿದ್ದಾರೆ ಎಂದು ಆರೋಪಿಸಿದರು.
ಸುದ್ದಿಗೋಷ್ಠಿಯಲ್ಲಿ ಬೆಂಬಲಿತರಾದ ಇಲ್ಯಾಸ್ ಹಾಕತ್ತೂರು, ಹಾರಿಸ್ ಕೊಂಡoಗೇರಿ, ಹಮೀದ್ ಕುಂಜಿಲ ಹಾಗೂ ಮುಜೀಬ್ ಕೊಳಕೇರಿ ಉಪಸ್ಥಿತರಿದ್ದರು.
Breaking News
- *ಕೊಡಗು : ಡಿ.1 ರಿಂದ ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ ಪ್ರಕ್ರಿಯೆ ಆರಂಭ : ಜಿಲ್ಲಾಧಿಕಾರಿ ವೆಂಕಟ್ ರಾಜಾ*
- *ಪಡಿತರ ಚೀಟಿ ಪರಿಷ್ಕರಣೆ : ಅರ್ಹ ಬಿಪಿಎಲ್ ಕಾರ್ಡ್ ರದ್ದುಗೊಳಿಸುವುದಿಲ್ಲ : ಸಚಿವ ಮುನಿಯಪ್ಪ*
- *ಕೊಡಗು ಬ್ಲಡ್ ಡೋನಸ್೯ ಸಂಸ್ಥೆಯ 7ನೇ ವಾಷಿ೯ಕೋತ್ಸವ : ಜೀವ ಉಳಿಸುವ ರಕ್ತದಾನಿಗಳೇ ನಿಜವಾದ ಹೀರೋಗಳು : ಅನಿಲ್ ಹೆಚ್.ಟಿ.*
- *ದಿವ್ಯಜ್ಯೋತಿ ಪತ್ತಿನ ಸಹಕಾರ ಸಂಘದ ಚುನಾವಣೆ : ಜಾನ್ಸನ್ ಪಿಂಟೋ ಸೇರಿ ಹಲವರು ಕಣದಲ್ಲಿ*
- *ಕಲ್ಲು ಬಾಯ್ಸ್ ಲೈಕ್ಸ್ ಫ್ಯಾಶನ್ ಫುಟ್ಬಾಲ್ ಕಪ್ : ನಿಯೋನ್ ಎಫ್.ಸಿ ಅಮ್ಮತ್ತಿ ಚಾಂಪಿಯನ್*
- *ಗ್ರಾ.ಪಂ ಉಪಚುನಾವಣೆ : ಕೊಡಗಿನ ವಿವಿಧೆಡೆ ಮದ್ಯ ಮಾರಾಟ ನಿಷೇಧ*
- *ನಂದಿನಿ ವಿವಿಧ ಶ್ರೇಣಿಯ ಹಾಲು ಬಿಡುಗಡೆ : ದೇಶದ ಹಾಲು ಉತ್ಪಾದನೆಯಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ : ಮುಖ್ಯಮಂತ್ರಿ ಸಿದ್ದರಾಮಯ್ಯ*
- *ಕಟ್ಟೆಹಾಡಿ ಅರಣ್ಯ ಹಕ್ಕು ಸಮಿತಿ ರಚನೆ : ಆದಿವಾಸಿಗಳನ್ನು ಒಕ್ಕಲೆಬ್ಬಿಸದಂತೆ ಆಗ್ರಹ*
- *ನ.29 ರಂದು ವಾಲ್ನೂರು-ತ್ಯಾಗತ್ತೂರು ಗ್ರಾಮ ಸಭೆ*
- *ಕೊಡಗು : ಗ್ರಾ.ಪಂ.ಉಪಚುನಾವಣೆ : ವಿವಿಧ ಸಂತೆ, ಜಾತ್ರೆಗಳ ನಿಷೇಧ*