ಮಡಿಕೇರಿ ಮಾ.11 : ಕೆಪಿಸಿಸಿ ಕಾರ್ಯಾಧ್ಯಕ್ಷ, ಮಾಜಿ ಶಾಸಕ, ಮಾಜಿ ಸಂಸದ ಹಾಗೂ ಪಕ್ಷದ ಕೊಡಗು ಜಿಲ್ಲಾ ಉಸ್ತುವಾರಿ ಆರ್.ಧ್ರುವ ನಾರಾಯಣ್ ಅವರ ನಿಧನಕ್ಕೆ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ಸಂತಾಪ ವ್ಯಕ್ತಪಡಿಸಿದೆ.
ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪ್ರಚಾರ ಸಮಿತಿಯ ಅಧ್ಯಕ್ಷ ಟಿ.ಪಿ.ರಮೇಶ್ ಅವರ ನೇತೃತ್ವದಲ್ಲಿ ನಡೆದ ಸಂತಾಪ ಸಭೆಯಲ್ಲಿ ಧ್ರುವನಾರಾಯಣ್ ಅವರ ಭಾವಚಿತ್ರಕ್ಕೆ ಪ್ರಮುಖರು ಪುಷ್ಪ ನಮನ ಸಲ್ಲಿಸಿದರು. ಮೌನಾಚರಣೆಯ ಮೂಲಕ ಶಾಂತಿ ಕೋರಿದರು.
ಟಿ.ಪಿರಮೇಶ್, ಗೌರವ ಕಾರ್ಯದರ್ಶಿ ವಿ.ಪಿ.ಸುರೇಶ್, ಮಡಿಕೇರಿ ಬ್ಲಾಕ್ ಅಧ್ಯಕ್ಷ ಹೆಚ್.ಎ.ಹಂಸ ಹಾಗೂ ನಗರ ಕಾಂಗ್ರೆಸ್ ಅಧ್ಯಕ್ಷ ಬಿ.ವೈ.ರಾಜೇಶ್ ಹಿರಿಯ ನಾಯಕ ಧ್ರುವ ನಾರಾಯಣ್ ಅವರ ವ್ಯಕ್ತಿತ್ವದ ಬಗ್ಗೆ ಗುಣಗಾನ ಮಾಡಿದರು.
ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಸುರಯ್ಯ ಅಬ್ರಾರ್, ನಗರಾಧ್ಯಕ್ಷೆ ಹೊಟ್ಟೆಯಂಡ ಫ್ಯಾನ್ಸಿ ಬೆಳ್ಯಪ್ಪ, ಪ್ರಮುಖರಾದ ಕಾನೆಹಿತ್ಲು ಮೊಣ್ಣಪ್ಪ, ಟಿ.ಹೆಚ್.ಉದಯಕುಮಾರ್, ಪ್ರಕಾಶ್ ಆಚಾರ್ಯ, ಜಗದೀಶ್, ಮುದ್ದು ರಾಜು, ಕೆ.ಜಿ.ಪೀಟರ್, ಪ್ರೇಮ ಕೃಷ್ಣಪ್ಪ, ಕೆ.ಆರ್.ದಿನೇಶ್, ಕಲೀಲ್ ಬಾಷಾ, ಎಂ.ಇ.ಫಾರೂಖ್, ರಿಯಾಬ್‌ವುದ್ದೀನ್, ಆರ್.ಪಿ.ಚಂದ್ರಶೇಖರ್, ಎಂ.ಎನ್.ರವೂಫ್, ಎಂ.ಜಿ.ನಾಗೇಶ್, ಪುಷ್ಪ ಪೂಣಚ್ಚ, ಸದಾ ಮುದ್ದಪ್ಪ, ದೋಲ್ಪಾಡಿ ಯಶೋಧರ್, ಹೆಚ್.ಇ.ಸನ್‌ವುದ್ದೀನ್, ಸಂಶ್‌ವುದ್ದೀನ್, ಎಂ.ಎo.ಹನೀಫ್, ನಾಗೇಶ್, ರಾಣಿ, ಉಷಾ, ದಿವ್ಯ ಮತ್ತಿತರ ಪ್ರಮುಖರು ಹಾಗೂ ಕಾರ್ಯಕರ್ತರು ಸಂತಾಪ ಸಭೆಯಲ್ಲಿ ಉಪಸ್ಥಿತರಿದ್ದರು.
Breaking News
- *ವೀರ ಸೇನಾನಿಗಳಿಗೆ ಅಗೌರವ : ಕಿಡಿಗೇಡಿಯನ್ನು ಬಂಧಿಸಲು ನಾಪೋಕ್ಲು ಕೊಡವ ಸಮಾಜ ಒತ್ತಾಯ*
- *ಇಂದಿರಾ ನಗರ : ನೂತನ ಕಾಂಕ್ರೀಟ್ ರಸ್ತೆ ಉದ್ಘಾಟಿಸಿದ ಶಾಸಕ ಡಾ.ಮಂತರ್ ಗೌಡ*
- *ವೀರ ಸೇನಾನಿಗಳಿಗೆ ಅಪಮಾನ : ವ್ಯಾಲಿಡ್ಯೂ ಕೊಡವ ಕಲ್ಚರಲ್ ಅಸೋಸಿಯೇಷನ್ ಖಂಡನೆ*
- *ವೀರ ಸೇನಾನಿಗಳಿಗೆ ಅಗೌರವ : ಜಿಲ್ಲಾ ಬಿಜೆಪಿಯಿಂದ ಎಸ್ಪಿಗೆ ದೂರು*
- *ಮಡಿಕೇರಿಯಲ್ಲಿ ವಕೀಲರ ಸಂಘದಿಂದ ಪ್ರತಿಭಟನೆ*
- *ಜಿಲ್ಲಾ ಮಟ್ಟದ ಯುವಜನೋತ್ಸವ : ಹೆಸರು ನೋಂದಾಯಿಸಿಕೊಳ್ಳಲು ನ.28 ಕೊನೆ ದಿನ*
- *ನ.26 ರಂದು ಸಿಎನ್ಸಿಯಿಂದ ಕೊಡವ ನ್ಯಾಷನಲ್ ಡೇ ಮತ್ತು ಸಂವಿಧಾನ ದಿನಾಚರಣೆ*
- *ನ.24 ರಂದು ಕೊಡಗು ಜಿಲ್ಲಾ ಕಿವುಡರ ಸಂಘದ ಸಭೆ*
- *ಕುಶಾಲನಗರದಲ್ಲಿ ಅಕ್ಷರ ಜ್ಯೋತಿ ಯಾತ್ರೆಗೆ ಸ್ವಾಗತ : ಉತ್ತಮ ಸಂಸ್ಕಾರ, ಸದ್ಗುಣ ಬೆಳೆಸಿಕೊಳ್ಳಲು ಬಸವಕುಮಾರ್ ಪಾಟೀಲ್ ಕರೆ*
- *ನ.29 ರಂದು ಮೂರ್ನಾಡುವಿನಲ್ಲಿ 69ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ*