ಮಡಿಕೇರಿ ಮಾ.13 : ಮಡಿಕೇರಿ ನಗರ ಚೇಂಬರ್ ಆಫ್ ಕಾಮರ್ಸ್, ಕೊಡಗು ಜಿಲ್ಲಾ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮತ್ತು ಬೋಧಕ ಆಸ್ಪತ್ರೆ ಹಾಗೂ ಜಿಲ್ಲಾಸ್ಪತ್ರೆಯ ರಕ್ತ ನಿಧಿ ಕೇಂದ್ರದ ವತಿಯಿಂದ ಮಾ.14 ರಂದು ರಕ್ತದಾನ ಶಿಬಿರ ನಡೆಯಲಿದೆ.
ನಗರದ ಕೊಹಿನೂರು ರಸ್ತೆಯಲ್ಲಿರುವ ಚೇಂಬರ್ ಬ್ಯಾಂಕ್ ಕಟ್ಟಡದ ಸಭಾಂಗಣದಲ್ಲಿ ಅಂದು ಬೆಳಗ್ಗೆ 10 ಗಂಟೆಯಿಂದ 1 ಗಂಟೆಯವರೆಗೆ ಶಿಬಿರ ನಡೆಯಲಿದೆ ಎಂದು ಚೇಂಬರ್ ಆಫ್ ಕಾಮರ್ಸ್ ನಗರಾಧ್ಯಕ್ಷ ಎಂ.ಧನಂಜಯ ತಿಳಿಸಿದ್ದಾರೆ.
ರಕ್ತದಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿರುವ ಅವರು, ಮಾಹಿತಿಗೆ 98444 61777 ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಹೇಳಿದ್ದಾರೆ.








