ಮಡಿಕೇರಿ ಮಾ.13 : ವೃದ್ದರೊಬ್ಬರು ಗುಂಡೇಟಿನಿಂದ ಸಾವಿಗೀಡಾಗಿರುವ ಘಟನೆ ಸೋಮವಾರಪೇಟೆ ತಾಲ್ಲೂಕಿನ ಕಿಕ್ಕರಳ್ಳಿ ಗ್ರಾಮದಲ್ಲಿ ನಡೆದಿದೆ.
ಕೆ.ಎ.ಮಂದಣ್ಣ(73) ಎಂಬುವವರೇ ಮೃತ ವ್ಯಕ್ತಿಯಾಗಿದ್ದು, ಸೊಸೆಯಿಂದಲೇ ಕೊಲೆ ನಡೆದಿದೆ ಎಂದು ಆರೋಪಿಸಲಾಗಿದೆ. ಆರೋಪಿ ನೀಲಮ್ಮ (ಜ್ಯೋತಿ) (28) ಎಂಬುವವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈಕೆಗೆ ಒಂದು ಗಂಡು ಮಗುವಿದೆ. ಪತಿ ನಾಣಯ್ಯ ಅವರೇ ಘಟನೆಯ ಕುರಿತು ಪೊಲೀಸರಿಗೆ ಮಾಹಿತಿ ನೀಡಿದರು ಎಂದು ತಿಳಿದು ಬಂದಿದೆ. ಕೌಟುಂಬಿಕ ಕಲಹ ಘಟನೆಗೆ ಕಾರಣ ಎಂದು ಹೇಳಲಾಗಿದೆ.
ಸೋಮವಾರಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.










