ಮಡಿಕೇರಿ ಮಾ.13 : ಕೊಡಗಿನಲ್ಲಿ ಕಳೆದ 25 ವರ್ಷಗಳಿಂದ ಬಿಜೆಪಿಯನ್ನು ಸಹಿಸಿದ್ದು ಸಾಕು, ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಿ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹೆಚ್.ಎಸ್.ಚಂದ್ರಮೌಳಿ ಕರೆ ನೀಡಿದ್ದಾರೆ.
ಮಡಿಕೇರಿ ನಗರದ ವಿವಿಧೆಡೆ ವಿವಿಧ ಭರವಸೆಗಳ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ವಿತರಣೆಯ ಅಭಿಯಾನದಲ್ಲಿ ಪಾಲ್ಗೊಂಡು ಮಾತನಾಡಿದ ಅವರು ವಿನೂತನ ಯೋಜನೆಗಳ ಮೂಲಕ ಬಡವರ ಹಾಗೂ ಜನಸಾಮಾನ್ಯರ ಕಷ್ಟಗಳಿಗೆ ಸ್ಪಂದಿಸುವ ಕೆಲಸವನ್ನು ಕಾಂಗ್ರೆಸ್ ಮಾಡಲಿದೆ ಎಂದರು.
ಕಾAಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದರೆ “ಗೃಹಜ್ಯೋತಿ” ಯೋಜನೆಯಡಿ ಪ್ರತಿ ಮನೆಗೆ 200 ಯೂನಿಟ್ ಉಚಿತ ವಿದ್ಯುತ್ ಪೂರೈಕೆ, ಪ್ರತಿ ಮನೆಯೊಡತಿಗೆ 2 ಸಾವಿರ ರೂ. ಪ್ರೋತ್ಸಾಹ ಧನ ನೀಡಲು “ಗೃಹಲಕ್ಷಿ÷್ಮ” ಯೋಜನೆ ಜಾರಿ ಮತ್ತು ಅನ್ನಭಾಗ್ಯ ಯೋಜನೆ ಮೂಲಕ ಬಿಪಿಎಲ್ ಕಾರ್ಡ್ದಾರರಿಗೆ 10 ಕೆ.ಜಿ.ಅಕ್ಕಿ ಉಚಿತವಾಗಿ ನೀಡುವ ಯೋಜನೆ ರಾಜ್ಯದಲ್ಲಿ ಜಾರಿಗೆ ಬರಲಿದೆ. ಈ ಯೋಜನೆ ದೇಶದಲ್ಲೇ ಮೊದಲು ಎಂದು ತಿಳಿಸಿದರು.
ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ 600 ಭರವಸೆಗಳಲ್ಲಿ 589 ನ್ನು ಈಡೇರಿಸಿದೆ. ಈ ಬಾರಿಯೂ ಕಾಂಗ್ರೆಸ್ ಗೆ ಅವಕಾಶ ನೀಡಿದರೆ ಎಲ್ಲಾ ಭರವಸೆಗಳನ್ನು ಪೂರೈಸಲಾಗುವುದು. ಕೊಡಗಿನ ಜನ ಕಾಂಗ್ರೆಸ್ ಪರ ಒಲವು ತೋರುತ್ತಿದ್ದು, ಎರಡೂ ಕ್ಷೇತ್ರಗಳಲ್ಲಿ ಗೆಲುವು ಖಚಿತವಾಗಿದೆ. ಗ್ಯಾರಂಟಿ ಕಾರ್ಡ್ ಭರವಸೆ ಹೆಚ್ಚು ಫಲ ನೀಡಲಿದೆ. ಕಾಂಗ್ರೆಸ್ ಪಕ್ಷದಲ್ಲಿ ನಾಯಕರು, ಕಾರ್ಯಕರ್ತರು ಎನ್ನುವ ಬೇಧಭಾವವಿಲ್ಲ. ಪ್ರತಿಯೊಬ್ಬರು ಕಾರ್ಯಕರ್ತರಂತೆ ದುಡಿಯುತ್ತಿದ್ದಾರೆ. ಬಹುಮತದೊಂದಿಗೆ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ಚಂದ್ರಮೌಳಿ ವಿಶ್ವಾಸ ವ್ಯಕ್ತಪಡಿಸಿದರು.
ಗ್ಯಾರಂಟಿ ಕಾರ್ಡ್ ಅಭಿಯಾನದ ನೇತೃತ್ವ ವಹಿಸಿದ್ದ ಕಾಂಗ್ರೆಸ್ ನಗರಾಧ್ಯಕ್ಷ ಬಿ.ವೈ.ರಾಜೇಶ್, ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎ.ಹಂಸ, ಮಾಜಿ ಅಧ್ಯಕ್ಷ ಕೆ.ಯು.ಅಬ್ದುಲ್ ರಜಾಕ್ ಹಾಗೂ ವಕ್ತಾರ ತೆನ್ನಿರ ಮೈನಾ ಮಾತನಾಡಿ ಮನೆ ಮನೆಗಳಿಗೆ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ನೀಡಲಾಗುತ್ತಿದ್ದು, ಜನರಿಂದ ಉತ್ತಮ ಸ್ಪಂದನೆ ದೊರೆತ್ತಿದೆ ಎಂದರು.
ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಮುಖರಾದ ಟಿ.ಎಂ.ಅಯ್ಯಪ್ಪ, ಕಾವೇರಮ್ಮ ಸೋಮಣ್ಣ, ಚುಮ್ಮಿ ದೇವಯ್ಯ, ಮಹಿಳಾ ಘಟಕದ ಅಧ್ಯಕ್ಷೆ ಸುರಯ್ಯ ಅಬ್ರಾರ್, ಜಪ್ರುಲ್ಲ, ಮಿನಾಜ್ ಪ್ರವೀಣ್, ಫ್ಯಾನ್ಸಿ ಬೆಳ್ಯಪ್ಪ, ಪ್ರೇಮ ಕೃಷ್ಣಪ್ಪ ಪ್ರಕಾಶ್ ಆಚಾರ್ಯ, ಸ್ವರ್ಣಲತಾ, ಮುಮ್ತಾಜ್ ಬೇಗ್, ಪ್ರೇಮ ಎಚ್.ಕೆ, ಬೂತ್ ಅಧ್ಯಕ್ಷರಾದ ರಾವುಫ್, ಹಫೀಜ್, ಮುದ್ದುರಾಜ್, ದಿವ್ಯಾ, ಹಮೀದ್, ಸುದಯ್ ನಾಣಯ್ಯ, ಹಜೀಜ್, ಹಬೀಬ್, ರಿಯಾ ಸುದ್ದಿನ್ ನಗರ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್ ಆರ್.ಪಿ ಮತ್ತಿತತರು ಹಾಜರಿದ್ದರು.
ನಗರದ ಮಲ್ಲಿಕಾರ್ಜುನ ನಗರ, ಭಗವತಿ ನಗರ ಮತ್ತಿತರ ಬಡಾವಣೆಗಳಲ್ಲಿ ಕಾಂಗ್ರೆಸ್ ಪ್ರಮುಖರು ಗ್ಯಾರಂಟಿ ಕಾರ್ಡ್ ವಿತರಿಸಿದರು.
Breaking News
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*