ಮಡಿಕೇರಿ ಮಾ.13 : ಕೆಪಿಸಿಸಿ ಕಾರ್ಯಾಧ್ಯಕ್ಷ, ಮಾಜಿ ಸಂಸದ ಮತ್ತು ಪಕ್ಷದ ಕೊಡಗು ಜಿಲ್ಲಾ ಉಸ್ತುವಾರಿ ಆರ್.ಧ್ರುವ ನಾರಾಯಣ್ ಅವರ ನಿಧನಕ್ಕೆ ಮಾಜಿ ಶಾಸಕ ಕೆ.ಎಂ.ಇಬ್ರಾಹಿಂ, ಕೆಪಿಸಿಸಿ ಉಪಾಧ್ಯಕ್ಷ ಪಿ.ಸಿ.ಹಸೈನಾರ್, ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಎಂ.ಎ.ಉಸ್ಮಾನ್ ಹಾಗೂ ತಾ.ಪಂ ಮಾಜಿ ಸದಸ್ಯ ಕೆ.ಐ.ಮಹಮ್ಮದ್ ರಫೀಕ್ ಸಂತಾಪ ಸೂಚಿಸಿದ್ದಾರೆ.
ಮೇರು ವ್ಯಕ್ತಿತ್ವದ ಸಜ್ಜನ ರಾಜಕಾರಣಿ, ಉತ್ತಮ ಸಂಘಟಕ, ಅಜಾತಶತ್ರು ಧ್ರುವ ನಾರಾಯಣ್ ಅವರ ಅಗಲಿಕೆ ಅತೀವ ದು:ಖವನ್ನುಂಟು ಮಾಡಿದೆ. ಹಿರಿಯ ನಾಯಕನನ್ನು ಕಳೆದುಕೊಂಡು ಕಾಂಗ್ರೆಸ್ ಬಡವಾಗಿದೆ ಎಂದು ವಿಷಾದ ವ್ಯಕ್ತಪಡಿಸಿದ್ದಾರೆ.







