ಮಡಿಕೇರಿ ಮಾ.13 : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಮಡಿಕೇರಿ ಪ್ರಾದೇಶಿಕ ಕೇಂದ್ರ ಕಚೇರಿಯಲ್ಲಿ 2022-23 ನೇ ಶೈಕ್ಷಣಿಕ ಸಾಲಿನ ವಿವಿಧ ವಿಷಯಗಳಿಗೆ ಪ್ರವೇಶಾತಿ ಪ್ರಕ್ರಿಯೆಗಳು ಆರಂಭವಾಗಿದ್ದು, ಇದರ ಸದುಪಯೋಗವನ್ನು ಉದ್ಯೋಗಸ್ಥರು ಹಾಗೂ ವಿದ್ಯಾರ್ಥಿಗಳು ಪಡೆದುಕೊಳ್ಳುವಂತೆ ಕೋರಿದೆ.
ಪ್ರಾದೇಶಿಕ ಕೇಂದ್ರ ಕಚೇರಿಯು ಸಾರ್ವತ್ರಿಕ ರಜಾ ದಿನಗಳಾದ ಎರಡನೇ ಶನಿವಾರ ಹಾಗೂ ನಾಲ್ಕನೇ ಶನಿವಾರ ಮತ್ತು ಭಾನುವಾರಗಳಂದು ಸಹ ಕಾರ್ಯನಿರ್ವಹಿಸುತ್ತದೆ ಎಂದು ಪ್ರಾದೇಶಿಕ ನಿರ್ದೇಶಕಿ ಸ್ಮಿತಾ ಸುಬ್ಬಯ್ಯ ಅವರು ತಿಳಿಸಿದ್ದಾರೆ.
ಆಟೋ ಮತ್ತು ಕ್ಯಾಬ್ ಚಾಲಕರು ಹಾಗೂ ಮಕ್ಕಳಿಗೆ ಶೇ.30, ಬಿಪಿಎಲ್ ಕಾರ್ಡ್ ಹೊಂದಿರುವ ಮಹಿಳಾ ವಿದ್ಯಾರ್ಥಿಗಳಿಗೆ ಶೇ.15, ಮಾಜಿ ಸೈನಿಕ ವಿದ್ಯಾರ್ಥಿಗಳಿಗೆ ಶುಲ್ಕದಲ್ಲಿ ಶೇ.15 ರಷ್ಟು ವಿನಾಯಿತಿ ನೀಡಲಾಗುತ್ತಿದೆ. ಹಾಗೂ ಕೊರೊನಾ ಸಾಂಕ್ರಾಮಿಕ ರೋಗದಿಂದ ಮೃತರಾದ ಪೋಷಕರ ಮಕ್ಕಳಿಗೆ, ತೃತೀಯ ಲಿಂಗಿಗಳಿಗೆ, ದೃಷ್ಠಿಹೀನ ವಿದ್ಯಾರ್ಥಿಗಳಿಗೆ (ಬಿಎಡ್-ಎಂಬಿಎ ಹೊರತುಪಡಿಸಿ) ಪೂರ್ಣಶುಲ್ಕ ವಿನಾಯಿತಿ ನೀಡಲಾಗಿದೆ.
ಸ್ನಾತಕ ಕೋರ್ಸ್‍ಗಳು ಬಿ.ಎ., ಬಿ.ಕಾಂ, ಬಿ.ಲಿಬ್, ಬಿಬಿಎ, ಬಿಸಿಎ, ಬಿಎಸ್ಸಿ. ಸ್ನಾತಕೋತ್ತರ ಕೋರ್ಸ್‍ಗಳು ಎಂಎ, ಎಂಕಾಂ, ಎಂಬಿಎ, ಎಂಲಿಬ್, ಎಂಎಸ್ಸಿ ಹಾಗೂ ಡಿಪ್ಲೊಮಾ ಮತ್ತು ಸರ್ಟಿಫಿಕೇಟ್ ಕೋರ್ಸ್‍ಗಳು.
ಪೂರ್ಣಾವಧಿಯಲ್ಲಿ (ಭೌತಿಕಶಿಕ್ಷಣ) ರೆಗ್ಯುಲರ್) ಒಂದು ಕೋರ್ಸ್ ಮತ್ತು ದೂರಶಿಕ್ಷಣದಲ್ಲಿ (ಓಪನ್ ಯುನಿವರ್ಸಿಟಿ) ಇನ್ನೊಂದು ಕೋರ್ಸ್ ಅನ್ನು ಏಕಕಾಲದಲ್ಲಿ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದು ಮುಕ್ಕಾಟಿರ ಸ್ಮಿತಾ ಸುಬ್ಬಯ್ಯ ಅವರು ಹೇಳಿದ್ದಾರೆ. ಹೆಚ್ಚಿನ ಮಾಹಿತಿಗೆ 08272-201147, 9141938803, 8296215714 ನ್ನು ಸಂಪರ್ಕಿಸಬಹುದು.














