ಮಡಿಕೇರಿ ಮಾ.13 : ವಿದ್ಯುತ್ ವಿತರಣಾ ಕೇಂದ್ರ ಮತ್ತು ಮಾರ್ಗದಲ್ಲಿ ತುರ್ತು ನಿರ್ವಹಣೆ ಮತ್ತು ದುರಸ್ತಿ ಕಾರ್ಯ ನಿರ್ವಹಿಸಬೇಕಿರುವುದರಿಂದ ಕ.ವಿ.ಪ್ರ.ನಿ.ನಿ. ಅವರ ಕೋರಿಕೆಯಂತೆ ಮಾರ್ಚ್, 15 ರಂದು ಬೆಳಗ್ಗೆ 9.30 ಗಂಟೆಯಿಂದ ಸಂಜೆ 5.30 ಗಂಟೆಯವರೆಗೆ 66/11ಕೆವಿ ಪೊನ್ನಂಪೇಟೆ, 66/11 ಕೆವಿ ವಿರಾಜಪೇಟೆ, 33/11 ಕೆವಿ ಶ್ರೀಮಂಗಲ, 33/11 ಕೆವಿ ಸಿದ್ದಾಪುರ 33/11 ಕೆವಿ ಮೂರ್ನಾಡು ವಿದ್ಯುತ್ ಉಪ ಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು.
ಆದ್ದರಿಂದ ಪೊನ್ನಂಪೇಟೆ, ಗೋಣಿಕೊಪ್ಪಲು, ನಲ್ಲೂರು, ಹುದಿಕೇರಿ, ತಿತಿಮತಿ, ಹಾತೂರು, ಪಾಲಿಬೆಟ್ಟ, ಶ್ರೀಮಂಗಲ, ಬಾಳಲೆ, ಕಾನೂರು, ಬಿರುನಾಣಿ, ಕುಟ್ಟ ವಿರಾಜಪೇಟೆ, ಬಿ ಶೆಟ್ಟಗೇರಿ, ಬೇತ್ರೀ, ಕಡಗಮರೂರು, ಕಾಕೋಟುಪರಂಬು, ಅಮ್ಮತ್ತಿ, ಸಿದ್ದಾಪುರ, ಮಾಲ್ದಾರೆ, ಮೂರ್ನಾಡು, ಮರುಗೋಡು, ನಾಪೋಕ್ಲು, ಕಕ್ಕಬೆ, ಅರೆಕಾಡು, ಐಯ್ಯಂಗೇರಿ ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಅನಿತಾ ಬಾಯಿ ಅವರು ಕೋರಿದ್ದಾರೆ.
Breaking News
- *ಜಯ ಹೇ ಕರ್ನಾಟಕ ಮಾತೆ ಗೀತೆಗೆ 100 ವರ್ಷ : ಕೊಡಗಿನಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳು*
- *ಕೊಡವ ನ್ಯಾಷನಲ್ ಡೇ ಹಿನ್ನೆಲೆ : ದೇವಟ್ ಪರಂಬುವಿನಲ್ಲಿ ಸಿಎನ್‌ಸಿ ಪ್ರಾರ್ಥನೆ*
- *ವೀರ ಸೇನಾನಿಗಳಿಗೆ ಅಗೌರವ : ಮಡಿಕೇರಿ ತಾಲ್ಲೂಕು ಒಕ್ಕಲಿಗರ ಸಂಘ ಖಂಡನೆ*
- *ಕೊಡವ ಮಕ್ಕಡ ಕೂಟದಿಂದ ದಾಖಲೆಯ 100ನೇ ಪುಸ್ತಕ “100ನೇ ಮೊಟ್ಟ್” ಬಿಡುಗಡೆ : ಭಾಷೆ, ಜಾತಿಯನ್ನು ಮೀರಿದ ಜ್ಞಾನ ಭಂಡಾರವೇ ಸಾಹಿತ್ಯ : ಬಾಚರಣಿಯಂಡ ಅಪ್ಪಣ್ಣ*
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*