ಮಡಿಕೇರಿ ಮಾ.13 : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಮಾರ್ಚ್, 17 ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ‘ಮಿನಿ ಉದ್ಯೋಗ ಮೇಳ’ ನಡೆಯಲಿದೆ.
ಉದ್ಯೋಗ ಮೇಳದಲ್ಲಿ ಲಿಥಿಯಂ ಅರ್ಬನ್ ಟೆಕ್ನಾಲಾಜಿಸ್(ಡ್ರೈವರ್ ಜಾಬ್), ಕಲ್ಯಾಣಿ ಮೋಟಾರ್ಸ್, ಮಡಿಕೇರಿ, ಎಸ್‍ಎಲ್‍ಎನ್ ಕಾಫಿ ಪ್ರೈ.ಲಿ., ಕುಶಾಲನಗರ, ಮಡಿಕೇರಿ ಸ್ಮಾರ್ಟ್ ಬಜಾರ್ ತಮ್ಮ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ.
ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೋಮ, ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಈ ಉದ್ಯೋಗಮೇಳದಲ್ಲಿ ಭಾಗವಹಿಸಬಹುದು. ಅಭ್ಯರ್ಥಿಗಳು ವಿದ್ಯಾರ್ಹತೆಯ ಮೂಲ ದಾಖಲಾತಿಗಳು ಹಾಗೂ ಸ್ವ-ವಿವರಗಳ ಪ್ರತಿಗಳೊಂದಿಗೆ ಉದ್ಯೋಗಮೇಳದಲ್ಲಿ ಹಾಜರಾಗಬಹುದು. ಹೆಚ್ಚಿನ ಮಾಹಿತಿಗೆ ದೂ.ಸಂ.08272-225851 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಉಮಾ ಅವರು ತಿಳಿಸಿದ್ದಾರೆ.














