ಮಡಿಕೇರಿ ಮಾ.13 : ಶಾಲಾ ಶಿಕ್ಷಣ, ಸಾಕ್ಷರತಾ, ಸಕಾಲ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ.ನಾಗೇಶ್ ಅವರು ಮಾರ್ಚ್, 15 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಮಾನ್ಯ ಸಚಿವರು ಮಾರ್ಚ್, 15 ರಂದು ಬೆಳಗ್ಗೆ 9 ಗಂಟೆಗೆ ಜಿಲ್ಲಾಧಿಕಾರಿ ಹಾಗೂ ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಎ.ಆರ್.ರವಿ ಅವರು ತಿಳಿಸಿದ್ದಾರೆ.














