ಮಡಿಕೇರಿ ಮಾ.13 : ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ನಡೆಯುತ್ತಿರುವ ಮಾಸ್ಟರ್ ಗೇಮ್ಸ್ ಚಾಂಪಿಯನ್ ಶಿಪ್ನಲ್ಲಿ ಕೊಡಗಿನ ಮೂವರು ಹಿರಿಯ ಕ್ರೀಡಾಪಟುಗಳು ಭಾರತವನ್ನು ಪ್ರತಿನಿಧಿಸಿ ಒಟ್ಟು 5 ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.
ಅದರಲ್ಲೂ ವಿಶೇಷವೆಂಬಂತೆ ಇಬ್ಬರು ಸಹೋದರರು ಈ ಹಿರಿಯರ ಕ್ರೀಡಾಕೂಟದಲ್ಲಿ ಪಾಲ್ಗೊಂಡು ಸಾಧನೆ ಮಾಡಿ ಬೆರಗು ಗೊಳಿಸಿದ್ದಾರೆ. ಗೋಣಿಕೊಪ್ಪ ಹಾಗೂ ಕದನೂರು ಗ್ರಾಮಗಳ ನಿವಾಸಿಗಳಾದ ಪಾಲೆಕಂಡ ಬೆಳ್ಳಿಯಪ್ಪ ಹಾಗೂ ಪಾಲೆಕಂಡ ಬೋಪಯ್ಯ ಭಾರತವನ್ನು ಪ್ರತಿನಿಧಿಸಿದ ಅಪರೂಪದ ಸಹೋದರರಾಗಿದ್ದಾರೆ. ಇವರಿಬ್ಬರೂ ಭಾರತದಲ್ಲಿ ನಡೆದ ಮಾಸ್ಟರ್ಸ್ ಗೇಮ್ಸ್ ಕ್ರೀಡಾಕೂಟದಲ್ಲಿ ಇದುವರೆಗೆ 13 ಚಿನ್ನದ ಪದಕಗಳನ್ನು ಪಡೆದುಕೊಂಡಿದ್ದಾರೆ. ಪಾಲೆಕಂಡ ಬೋಪಯ್ಯ ಅವರು ಜಾವಲಿನ್ ಥ್ರೋ ಹಾಗೂ ಡಿಸ್ಕಸ್ ಥ್ರೋನಲ್ಲಿ ಹಾಗು ಬೆಳ್ಳಿಯಪ್ಪ ಅವರು 100, 200, 1500 ಮೀಟರ್ ಕಾಲ್ನಡಿಗೆ ರೇಸ್ನಲ್ಲಿ ಭಾಗವಹಿಸಿದ್ದಾರೆ.
ಹಿರಿಯರ ಕ್ರೀಡಾಕೂಟದಲ್ಲಿ ಬಿ.ಎಸ್.ಎನ್.ಎಲ್.ನ ನಿವೃತ್ತ ಉದ್ಯೋಗಿ, ಕರ್ನಾಟಕದ ಮಾಸ್ಟರ್ಸ್ ಕ್ರೀಡಾಕೂಟ ಸಂಘದ ಅಧ್ಯಕ್ಷೆ ಮರಾಮಡ ಮಾಚಮ್ಮ ಅವರು ಕೂಡ ಈ ಕ್ರೀಡಾಕೂಟದಲ್ಲಿ ಭಾಗವಹಿಸಿ ಪದಕ ಗಳಿಸಿದ್ದಾರೆ.
Breaking News
- *ಜಿಲ್ಲಾ ಮಟ್ಟದ ಚಾಂಪಿಯನ್ಶಿಪ್ನಲ್ಲಿ ನಾಟ್ಯಾಂಜಲಿ ನೃತ್ಯ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ*
- *ವೀರ ಸೇನಾನಿಗಳಿಗೆ ಅಗೌರವ : ನಿವೃತ್ತ(ಮಾಜಿ) ಯೋಧರ ಒಕ್ಕೂಟ ಅರೆ ಸೇನಾಪಡೆ ಖಂಡನೆ : ಆರೋಪಿಯ ಗಡಿಪಾರಿಗೆ ಆಗ್ರಹ*
- *ದಿವ್ಯಜ್ಯೋತಿ ಪತ್ತಿನ ಸಹಕಾರ ಸಂಘದ ಚುನಾವಣೆ ಫಲಿತಾಂಶ*
- *ನ.29ರಂದು ಕೊಡಗು ಜಿಲ್ಲಾ ನಿವೃತ್ತ(ಮಾಜಿ) ಯೋಧರ ಒಕ್ಕೂಟ ಅರೆ ಸೇನಾಪಡೆಯ 12ನೇ ವಾರ್ಷಿಕ ಮಹಾಸಭೆ*
- *ನ.30 ರಂದು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಜನಪದ ನೃತ್ಯ ಮತ್ತು ಟಿ.ಪಿ.ರಮೇಶ್ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭ*
- *ಇಂಡಿಯನ್ ಫಿಲ್ಟರ್ ಕಾಫಿ ಚಾಂಪಿಯನ್ಶಿಪ್ : ಶಶಾಂಕ್ ರಾಜ್ಯಮಟ್ಟಕ್ಕೆ ಆಯ್ಕೆ*
- *ಮಡಿಕೇರಿಯಲ್ಲಿ ಜಿಲ್ಲಾ ಮಟ್ಟದ ರಸ ಪ್ರಶ್ನೆ ಸ್ಪರ್ಧೆ ಮತ್ತು ಗೀತ ಗಾಯನ ಕಾರ್ಯಕ್ರಮ : ಮಕ್ಕಳಲ್ಲಿ ಕನ್ನಡ ಪ್ರೀತಿಯನ್ನು ಬೆಳೆಸಿ : ಎಂ.ಪಿ.ಕೇಶವ ಕಾಮತ್*
- *ನ.26ರಂದು ಸಿಎನ್ಸಿಯಿಂದ ಮಡಿಕೇರಿ ಸಮೀಪ ಕ್ಯಾಪಿಟಲ್ ವಿಲೇಜ್ ನಲ್ಲಿ ಕೊಡವ ನ್ಯಾಷನಲ್ ಡೇ ಮತ್ತು ಸಂವಿಧಾನ ದಿನಾಚರಣೆ*
- *ಶಿಶು ಸಾಹಿತ್ಯದ ಪಿತಾಮಹ ಪಂಜೆ ಮಂಗೇಶರಾಯರು*
- *ಸುಂಟಿಕೊಪ್ಪದಲ್ಲಿ ಹಳೆ ವಿದ್ಯಾರ್ಥಿಗಳ ಸ್ನೇಹಮಿಲನ ಕಾರ್ಯಕ್ರಮ : ಸಾಧಕರಿಗೆ ಸನ್ಮಾನ*