ಮಡಿಕೇರಿ ಮಾ.13 : ಎರಡು ರಾಷ್ಟ್ರೀಯ ಪಕ್ಷಗಳು ಮತದಾರರನ್ನು ಓಲೈಸುವ ಕೆಲಸ ಮಾಡುತ್ತಿದ್ದು, ಚುನಾವಣೆಯ ನೀತಿ ನಿಯಮಗಳನ್ನು ಗಾಳಿಗೆ ತೂರಿ ಮತದಾರರನ್ನು ಭ್ರಷ್ಟರನ್ನಾಗಿಸುವ ಕೆಲಸ ಮಾಡುತ್ತಿವೆ ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಆರೋಪಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎರಡು ರಾಷ್ಟ್ರೀಯ ಪಕ್ಷಗಳಿಗೆ ತಮ್ಮ ಸಾಧನೆಗಳನ್ನು ಹೇಳಿಕೊಂಡು ಜನರ ಮುಂದೆ ಹೋಗಲು ಅಜೆಂಡಾಗಳಿಲ್ಲ. ಓಟ್ ಬ್ಯಾಂಕ್‌ಗಾಗಿ ಚುನಾವಣೆಯ ನೀತಿಗಳನ್ನು ಗಾಳಿಗೆ ತೂರಿ ಮತದಾರರಿಗೆ ಆಮಿಷಗಳನ್ನೊಡ್ಡುತ್ತಿವೆ. ಚನಾವಣಾ ಆಯೋಗ ತಕ್ಷಣ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಬೇಕೆAದು ಒತ್ತಾಯಿಸಿದರು.
ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ, ತನ್ನ ತಪ್ಪುಗಳನ್ನು ಮರೆಮಾಚಲು ಭಾವನಾತ್ಮಕವಾಗಿ ಜನರನ್ನು ಕೆಣಕುತ್ತಿದೆ ಎಂದು ಆರೋಪಿಸಿದರು.
ವಿರೋಧ ಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್ ರಚನಾತ್ಮಕವಾಗಿ ಭ್ರಷ್ಟ ವ್ಯವಸ್ಥೆಯನ್ನು ವಿರೋಧಿಸುವಲ್ಲಿ ವಿಫಲವಾಗಿವೆ. ಕೊಡಗಿನ ಜ್ವಲಂತ ಸಮಸ್ಯೆಗಳನ್ನು ಸರಿಪಡಿಸುವಲ್ಲಿ ಮತ್ತು ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಳ್ಳುವಲ್ಲಿ ವಿಫಲವಾಗಿರುವ ಬಿಜೆಪಿ ಸರ್ಕಾರದ ವಿರುದ್ಧ ಈ ಪಕ್ಷಗಳು ಯಾವ ರೀತಿಯ ಹೋರಾಟವನ್ನು ಮಾಡಿವೆ ಎಂದು ಪ್ರಶ್ನಿಸಿದರು.
ಚುನಾವಣೆ ಹೊಸ್ತಿಲಲ್ಲಿ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಕಾರ್ಡ್ ವಿತರಿಸುವ ಬದಲು ಚುನಾವಣೆ ಮುಗಿದ ಮೇಲೆ ಕಾಂಗ್ರೆಸ್ ಪಕ್ಷದ ಎಂಎಲ್‌ಎ ಗಳು ಬಿಜೆಪಿಗೆ ಮಾರಾಟ ಆಗುವುದಿಲ್ಲ ಎಂಬ ಬಗ್ಗೆ ಗ್ಯಾರಂಟಿ ನೀಡಲಿ ಎಂದು ವ್ಯಂಗ್ಯವಾಡಿದರು.
ಎರಡೂವರೆ ದಶಕಗಳ ಕಾಲ ಕೊಡಗಿನ ಜನತೆ ಬಿಜೆಪಿಯನ್ನು ಆಯ್ಕೆ ಮಾಡಿ ವಿಧಾನಸೌಧದಲ್ಲಿ ಕೊಡಗಿನ ಪರ ಧ್ವನಿಯಾಗಬೇಕೆಂದು ಬಯಸಿದರು. ಆದರೆ ಜಮ್ಮಾ ಬಾಣೆ ಮತ್ತು ರೈತರ ಸಮಸ್ಯೆಗೆ ಸ್ಪಂದನೆ ಸಿಕ್ಕಿಲ್ಲ, ಕೃಷಿ ಅವಲಂಬಿತ ಜಿಲ್ಲೆ ಕೊಡಗಿಗೆ ವಿಶೇಷ ಅನುದಾನ ತರುವಲ್ಲಿ ಶಾಸಕರು ವಿಫಲರಾಗಿದ್ದಾರೆ, ಕಸ್ತೂರಿ ರಂಗನ್ ವರದಿಯ ಗೊಂದಲ ಮುಂದುವರೆದಿದೆ, ವನ್ಯಜೀವಿಗಳ ಉಪಟಳ ನಿಂತ್ತಿಲ್ಲ ಎಂದು ಟೀಕಿಸಿದರು.
ಎಸ್‌ಡಿಪಿಐ ಪಕ್ಷದಿಂದ ಈ ಬಾರಿ ಮಡಿಕೇರಿ ವಿಧಾನಸಭಾ ಕ್ಷೇತ್ರದಿಂದ ಅಮೀನ್ ಮೊಹಿಸಿನ್ ಅವರನ್ನು ಅಭ್ಯರ್ಥಿಯನ್ನಾಗಿ ಘೋಷಿಸಿದ್ದು, ಅಭಿವೃದ್ಧಿ ಪರ, ಭ್ರಷ್ಟಾಚಾರ ಮುಕ್ತ ಕೊಡಗನ್ನು ನಿರ್ಮಿಸಲು ಇವರಿಗೆ ಜನತೆ ಮತ ನೀಡಬೇಕೆಂದು ಅಬ್ದುಲ್ ಮಜೀದ್ ಮನವಿ ಮಾಡಿದರು.
ಮಡಿಕೇರಿ ಕ್ಷೇತ್ರದ ಎಸ್‌ಡಿಪಿಐ ಅಭ್ಯರ್ಥಿ ಅಮಿನ್ ಮೊಹಿಸಿನ್ ಮಾತನಾಡಿ, ರಾಷ್ಟ್ರೀಯ ಪಕ್ಷಗಳು ಕುಟುಂಬ ರಾಜಕಾರಣ ಮಾಡುತ್ತಿದ್ದು, ಬಡವರ ಪರವಾದ ಕಾಳಜಿಯನ್ನು ಹೊಂದಿಲ್ಲ. ಬಿಜೆಪಿ ಸರ್ಕಾರದ ನಿರ್ಲಕ್ಷ್ಯದಿಂದ ಕೊಡಗು ಅಭಿವೃದ್ಧಿ ಶೂನ್ಯವಾಗಿದೆ ಎಂದು ಆರೋಪಿಸಿದರು.
ಅಕ್ರಮ ಸಕ್ರಮ ಸಮಿತಿಯ ಅಧ್ಯಕ್ಷರು ಜಿಲ್ಲೆಯ ಶಾಸಕರಾಗಿದ್ದರೂ ಬಡವರ ಪರ ಕೆಲಸ ಮಾಡುವ ಬದಲು ಭೂಮಾಲೀಕರ ಪರ ಉತ್ಸುಕತೆ ತೋರುತ್ತಿದ್ದಾರೆ. ಇವರ ಅಧೀನದ ಅಕ್ರಮ ಸಕ್ರಮ ಸಮಿತಿ ಸಭೆ ಎಷ್ಟು ನಡೆದಿದೆೆ ಎನ್ನುವುದನ್ನು ಬಹಿರಂಗಪಡಿಸಲಿ ಎಂದು ಸವಾಲು ಹಾಕಿದರು.
ಕೊಡಗಿನಲ್ಲಿ ಕೂಲಿಕಾರ್ಮಿಕರು, ತೋಟ ಕಾರ್ಮಿಕರ ಸಮಸ್ಯೆಗೆ ಯಾವುದೇ ಸ್ಪಂದನೆ ಸಿಕ್ಕಿಲ್ಲ. ಪರಿಶಿಷ್ಟ ಜಾತಿ ಮತ್ತು ಪಂಗಡದ ಆದಿವಾಸಿಗಳ ಹಾಡಿಗಳನ್ನು ಅಭಿವೃದ್ಧಿಗೊಳಿಸದೆ ಮೂಲ ನಿವಾಸಿಗಳಿಗೆ ಅನ್ಯಾಯ ಮಾಡಲಾಗಿದೆ. ಬಿಜೆಪಿ ಪ್ರಣಾಳಿಕೆಯಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಇದ್ದರೂ, ಶಾಸಕರ ಇಚ್ಛಾಶಕ್ತಿಯ ಕೊರತೆಯಿಂದ ಕೊಡಗು ಇದರಿಂದ ಹೊರತಾಗಿದೆ. ಗ್ರಾಮೀಣ ಭಾಗದ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ಇದೆ, ಜನತೆಯ ಬಹುದಿನಗಳ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಬೇಡಿಕೆಯನ್ನು ಕಡೆಗಣಿಸಲಾಗಿದೆ ಎಂದು ಟೀಕಿಸಿದರು.
ವಿರೋಧ ಪಕ್ಷವಾದ ಕೊಡಗು ಕಾಂಗ್ರೆಸ್‌ಗೆ ಹೋರಾಟ ಮಾಡುವ ಎದೆಗಾರಿಕೆ ಇಲ್ಲದಾಗಿದೆ. ಕಾಂಗ್ರೆಸ್ ಪಕ್ಷದ ನಾಯಕರು ಜಿಲ್ಲೆಗೆ ಆಗಮಿಸಿದಾಗ ವಿರೋಧ ಪಕ್ಷದವರಿಂದ ಅವಮಾನವಾಗಿದ್ದರು, ನಾಯಕನಿಗೆ ನ್ಯಾಯಕೊಡಿಸುವ ಧೈರ್ಯವನ್ನು ಇಲ್ಲಿನ ಮುಖಂಡರು ತೋರಿಲ್ಲ. ಕಾಂಗ್ರೆಸ್ ಪಕ್ಷಕ್ಕೆ ಗ್ರಾ.ಪಂ ಚುನಾವಣೆಯನ್ನು ಎದುರಿಸಲು ಕೂಡ ಅರ್ಹತೆ ಇಲ್ಲದಾಗಿದೆ. ನಗರಸಭೆಯಲ್ಲಿ 10 ಸದಸ್ಯರನ್ನು ಹೊಂದಿದ್ದ ಪಕ್ಷ ಇದೀಗ ಒಬ್ಬ ಸದಸ್ಯನಿಂದ ತೃಪ್ತಿ ಪಡುವಂತ್ತಾಗಿದೆ. ಕಾಂಗ್ರೆಸ್ ನ ಈ ದುಸ್ಥಿತಿಯನ್ನು ಜನರು ಅರಿತ್ತಿದ್ದಾರೆ ಎಂದರು.
ಸುದ್ದಿಗೋಷ್ಠಿಯಲ್ಲಿ ಎಸ್‌ಡಿಪಿಐ ರಾಜ್ಯ ಸಮಿತಿ ಸದಸ್ಯ ಅಮ್ಜದ್ ಖಾನ್, ಜಿಲ್ಲಾಧ್ಯಕ್ಷ ಅಬ್ದುಲ್ ಅಡ್ಕರ್, ಮಡಿಕೇರಿ ಕ್ಷೇತ್ರ ಸಮಿತಿ ಅಧ್ಯಕ್ಷ ಉಸ್ಮಾನ್ ಹಾಗೂ ಜಿಲ್ಲಾ ಸಮಿತಿ ಸದಸ್ಯೆ ಮೇರಿ ವೇಗಸ್ ಉಪಸ್ಥಿತರಿದ್ದರು.
Breaking News
- *ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆ*
- *ಅಂತರಾಷ್ಟ್ರೀಯ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿಯ ಅಲುಫ್ ಎ.ಆರ್ ಚಾಂಪಿಯನ್*
- *ಮಡಿಕೇರಿಯಲ್ಲಿ ತಂಬಾಕು ಮುಕ್ತ ಯುವ ಅಭಿಯಾನ : ರಾಷ್ಟ್ರದ ಸದೃಢತೆಗೆ ಯುವಜನರು ಕೈಜೋಡಿಸಿ: ಸಿವಿಲ್ ನ್ಯಾಯಾಧೀಶೆ ಶುಭ*
- *ಮಡಿಕೇರಿಯಲ್ಲಿ ಡಾ.ಅಖಿಲ್ ಕುಟ್ಟಪ್ಪ – ಅಶ್ವಥ್ ಅಯ್ಯಪ್ಪ ಸ್ಮರಣಾಥ೯ ಕ್ರಿಕೆಟ್ ಪಂದ್ಯಾವಳಿ : ಸಾಧಕ ಕ್ರೀಡಾಪಟುಗಳಾಗುವತ್ತ ಚಿತ್ತ ಹರಿಸಿ : ನಿವೃತ್ತ ಏರ್ ಮಾಷ೯ಲ್ ಕಾಯ೯ಪ್ಪ ಕರೆ*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡಿ : ತೇಲಪಂಡ ಶಿವಕುಮಾರ್ ನಾಣಯ್ಯ ಒತ್ತಾಯ*
- *ಸುಂಟಿಕೊಪ್ಪ ನಾಡು ಪ್ರೌಢಶಾಲೆಯ ಅಭಿವೃದ್ಧಿಗೆ ದೇಣಿಗೆ ನೀಡಿದ ಹರಪಳ್ಳಿ ರವೀಂದ್ರ*
- *ಕೂಡಿಗೆಯಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮ : ಆಟೋ ಚಾಲಕರು ಕನ್ನಡ ನಾಡು-ನುಡಿಯ ರಾಯಭಾರಿಗಳು : ವಿ.ಪಿ.ಶಶಿಧರ್ ಬಣ್ಣನೆ*
- *ಗೋಣಿಕೊಪ್ಪ : ಮನಸ್ಸು ಮತ್ತು ಮನೆಯಿಂದಲೇ ಭ್ರಷ್ಟಾಚಾರ ಪ್ರಾರಂಭ : ಡಾ.ಕೆ.ಬಸವರಾಜು*
- *ಶಾಸಕ ಎ.ಎಸ್.ಪೊನ್ನಣ್ಣ ರಿಗೆ ವಿಧಾನಸಭಾಧ್ಯಕ್ಷರ ಕಚೇರಿಯಿಂದ ಕೊಡುಗೆ*
- *ಜಿಲ್ಲಾ ಮಟ್ಟದ ಚಾಂಪಿಯನ್ಶಿಪ್ನಲ್ಲಿ ನಾಟ್ಯಾಂಜಲಿ ನೃತ್ಯ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ*